Rohit Sharma: ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ರೋಹಿತ್ ಶರ್ಮಾ-ಉಮೇಶ್ ಯಾದವ್

India vs England: ಅತಿ ವೇಗವಾಗಿ 15000 ರನ್ ಪೂರೈಸಿದ ಭಾರತ ಐದನೇ ಬ್ಯಾಟ್ಸ್​ಮನ್ ರೋಹಿತ್ ಶರ್ಮಾ ಆಗಿದ್ದಾರೆ. ಮೊದಲ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದರೆ ಇವರು 15000 ರನ್ ಗಳಿಸಲು 333 ಇನ್ನಿಂಗ್ಸ್ ತೆಗೆದುಕೊಂಡಿದ್ದರು.

Rohit Sharma: ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ರೋಹಿತ್ ಶರ್ಮಾ-ಉಮೇಶ್ ಯಾದವ್
Rohit Sharma
Follow us
TV9 Web
| Updated By: Vinay Bhat

Updated on: Sep 04, 2021 | 8:03 AM

ಓವಲ್​ನಲ್ಲಿ (Ovel) ನಡೆಯುತ್ತಿರುವ ಇಂಗ್ಲೆಂಡ್ (England) ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ (Team India) ಹಿಟ್ ಮ್ಯಾನ್ ರೋಹಿತ್ ಶರ್ಮಾ (Rohit Sharma) ಹೊಸ ಮೈಲಿಗಲ್ಲನ್ನು ತಲುಪಿದ್ದಾರೆ. 33 ವರ್ಷದ ರೋಹಿತ್ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ 15,000 ರನ್ ಪೂರೈಸಿದ ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ 15000 ರನ್​ಗಳ ಗಡಿ ತಲುಪಿದ ಭಾರತದ 8ನೇ ಕ್ರಿಕೆಟರ್ ಆಗಿದ್ದಾರೆ. ನಾಲ್ಕನೇ ಟೆಸ್ಟ್​ನ (4th Test) ಎರಡನೇ ಇನ್ನಿಂಗ್ಸ್​ನಲ್ಲಿ ರೋಹಿತ್ ಈ ಸಾಧನೆ ಗೈದರು.

ಏಕದಿನ ಕ್ರಿಕೆಟ್​ನಲ್ಲಿ 9205 ರನ್ ಗಳಿಸಿರುವ ರೋಹಿತ್, ಟಿ-20ಐ ಕ್ರಿಕೆಟ್​ನಲ್ಲಿ 2864 ಮತ್ತು ಟೆಸ್ಟ್​ ಕ್ರಿಎಕಟ್​ನಲ್ಲಿ 2940+ ರನ್ ಬಾರಿಸಿದ್ದಾರೆ. ಇದರಲ್ಲಿ ಒಟ್ಟು 40 ಶತಕ ಮತ್ತು 79 ಅರ್ಧಶತಕಗಳು ಸೇರಿವೆ. ಮೂರು ಮಾದರಿಯ ಕ್ರಿಕೆಟ್​ನಲ್ಲಿ ಹಿಟ್​ಮ್ಯಾನ್ ಸರಾಸರಿ ಅದ್ಭುತವಾಗಿದೆ.

ಇನ್ನೂ ಅತಿ ವೇಗವಾಗಿ 15000 ರನ್ ಪೂರೈಸಿದ ಭಾರತ ಐದನೇ ಬ್ಯಾಟ್ಸ್​ಮನ್ ರೋಹಿತ್ ಶರ್ಮಾ ಆಗಿದ್ದಾರೆ. ಮೊದಲ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದರೆ ಇವರು 15000 ರನ್ ಗಳಿಸಲು 333 ಇನ್ನಿಂಗ್ಸ್ ತೆಗೆದುಕೊಂಡಿದ್ದರು. ಸಚಿನ್ 356, ದ್ರಾವಿಡ್ 368, ಸೆಹ್ವಾಗ್ 371 ಮತ್ತು ರೋಹಿತ್ ಶರ್ಮಾ 397 ಇನ್ನಿಂಗ್ಸ್ ತೆಗೆದುಕೊಂಡಿದ್ದಾರೆ.

ಇವರ ಜೊತೆಗೆ ಟೀಮ್ ಇಂಡಿಯಾ ವೇಗದ ಬೌಲರ್ ಉಮೇಶ್ ಯಾದವ್ ಕೂಡ ಹೊಸ ಮೈಲಿಗಲ್ಲು ತಲುಪಿದ್ದಾರೆ. ನಾಲ್ಕನೇ ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ 31 ರನ್ ಗಳಿಸಿದ ಡೇವಿಡ್ ಮಲಾನ್ ಅವರನ್ನು ಔಟ್‌ ಮಾಡುವ ಮೂಲಕ ಉಮೇಶ್‌ ಅತ್ಯಂತ ಕಡಿಮೆ ಟೆಸ್ಟ್ ಪಂದ್ಯಗಳಲ್ಲಿ 150 ವಿಕೆಟ್ ಪಡೆದ ಕ್ಲಬ್ ಸೇರಿದ್ದಾರೆ.

ಭಾರತೀಯ ಬೌಲರ್‌ ಗಳಲ್ಲಿ ಜಹೀರ್ ಖಾನ್ ಜೊತೆಗೂಡಿ, ಉಮೇಶ್‌ ಸಂಯುಕ್ತವಾಗಿ ನಾಲ್ಕನೇ ಬೌಲರ್ ಆಗಿದ್ದಾರೆ. ಕಪಿಲ್ ದೇವ್ 39 ಟೆಸ್ಟ್ ಪಂದ್ಯಗಳಲ್ಲಿ 150 ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದಾರೆ. ನಂತರ ಜಾಗವಲ್ ಶ್ರೀನಾಥ್ (40 ಟೆಸ್ಟ್), ಮೊಹಮ್ಮದ್ ಶಮಿ (42 ಟೆಸ್ಟ್) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ಜಹೀರ್ ಖಾನ್ 49 ಟೆಸ್ಟ್ ಪಂದ್ಯಗಳಲ್ಲಿ 150 ವಿಕೆಟ್ ಪಡೆದಿದ್ದಾರೆ.

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನಲದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ಕುತೂಹಲ ಘಟ್ಟದತ್ತ ಸಾಗುತ್ತಿದೆ. ಪಂದ್ಯ ಆರಂಭವಾದ ಮೊದಲ ದಿನ ಆಂಗ್ಲರು ಮೇಲುಗೈ ಸಾಧಿಸಿದರೆ, ಎರಡನೇ ದಿನದ ಅಂತ್ಯದ ಹೊತ್ತಿಗೆ ಭಾರತ ಕಮ್​ಬ್ಯಾಕ್ ಮಾಡಿದ್ದು, ಅಪಾಯಕಾರಿಯಾಗಿ ಗೋಚರಿಸಿದೆ. ಹೀಗೆ ಉಭಯ ತಂಡಗಳು ಸಮಬಲದ ಹೋರಾಟ ನಡೆಸುತ್ತಿದೆ. ಇಂಗ್ಲೆಂಡ್ 290 ರನ್‌ಗಳಿಗೆ ಆಲ್‌ಔಟ್‌ ಆದರೂ 99 ರನ್‌ಗಳ ಮುನ್ನಡೆ ದಕ್ಕಿಸಿಕೊಂಡಿದೆ. ಬಳಿಕ ಎರಡನೇ ಇನಿಂಗ್ಸ್‌ ಆರಂಭಿಸಿದ ಭಾರತ ತಂಡ ದಿನದಾಟದ ಅಂತ್ಯಕ್ಕೆ ವಿಕೆಟ್‌ ನಷ್ಟವಿಲ್ಲದೆ 43 ರನ್‌ ಗಳಿಸಿದೆ.

India vs England: ಉಭಯ ತಂಡಗಳ ಸಮಬಲದ ಹೋರಾಟ: ಕುತೂಹಲದತ್ತ ನಾಲ್ಕನೇ ಟೆಸ್ಟ್ ಪಂದ್ಯ

India vs England: ಹುಚ್ಚಾಟಕ್ಕೆ ತೆರೆ ಎಳೆದ ಇಂಗ್ಲೆಂಡ್ ಪೊಲೀಸರು; ಆಟದ ನಡುವೆ ಮೈದಾನಕ್ಕಿಳಿಯುತ್ತಿದ್ದ ಜಾರ್ವೋಗೆ ಬಂಧನದ ಶಿಕ್ಷೆ

(Rohit Sharma completes 15000 runs in international cricket and Umesh yadav picks 150 wickets)

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ