IND vs WI: ಶುಭ್ಮನ್ ಗಿಲ್ ಸ್ಥಾನ ಪಲ್ಲಟ: ಟೀಮ್ ಇಂಡಿಯಾದ ಹೊಸ ಆರಂಭಿಕರು ಇವರೇ.!
India vs West Indies 1st Test: ಈ ಹಿಂದೆ ಯಶಸ್ವಿ ಜೈಸ್ವಾಲ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಹೆಚ್ಚುವರಿ ಆಟಗಾರನಾಗಿ ಆಯ್ಕೆಯಾಗಿದ್ದರು. ಈ ಆಯ್ಕೆಗೆ ಮುಖ್ಯ ಕಾರಣ ರುತುರಾಜ್ ಗಾಯಕ್ವಾಡ್.
India vs West Indies 1st Test: ಡೆಮಿನಿಕಾದ ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ (Team India) ಪರ ಯಶಸ್ವಿ ಜೈಸ್ವಾಲ್ ಪಾದರ್ಪಣೆ ಮಾಡಲಿರುವುದು ಖಚಿತವಾಗಿದೆ. ವಿಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತದ ಪರ ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ. ಅದರಂತೆ ಹಿಟ್ಮ್ಯಾನ್ ಹಾಗೂ ಜೈಸ್ವಾಲ್ ಭಾರತದ ಪರ ಇನಿಂಗ್ಸ್ ಆರಂಭಿಸಲಿದ್ದಾರೆ.
ಇಲ್ಲಿ ಯಶಸ್ವಿ ಜೈಸ್ವಾಲ್ ಅವರನ್ನು ಆರಂಭಿಕನಾಗಿ ಆಯ್ಕೆ ಮಾಡುವುದರೊಂದಿಗೆ ಶುಭ್ಮನ್ ಗಿಲ್ ಅವರ ಬ್ಯಾಟಿಂಗ್ ಕ್ರಮಾಂಕ ಬದಲಾಗಲಿದೆ. ಅಂದರೆ ಈ ಹಿಂದೆ ರೋಹಿತ್ ಶರ್ಮಾ ಅವರೊಂದಿಗೆ ಗಿಲ್ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದರು. ಇದೀಗ ಎಡಗೈ ದಾಂಡಿಗನನ್ನು ಆರಂಭಿಕನಾಗಿ ಆಯ್ಕೆ ಮಾಡಿರುವುದರಿಂದ ಶುಭ್ಮನ್ ಗಿಲ್ 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.
ಪೂಜಾರ ಸ್ಥಾನದಲ್ಲಿ ಗಿಲ್:
ಈ ಹಿಂದೆ ಟೀಮ್ ಇಂಡಿಯಾ ಪರ ಚೇತೇಶ್ವರ ಪೂಜಾರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರು. ಇದೀಗ ಪೂಜಾರ ತಂಡದಿಂದ ಹೊರಬಿದ್ದಿದ್ದಾರೆ. ಈ ಸ್ಥಾನದಲ್ಲಿ ಶುಭ್ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ ಎಂದು ರೋಹಿತ್ ಶರ್ಮಾ ತಿಳಿಸಿದ್ದಾರೆ.
ಯಶಸ್ವಿ ಎಂಟ್ರಿ:
ಈ ಹಿಂದೆ ಯಶಸ್ವಿ ಜೈಸ್ವಾಲ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಹೆಚ್ಚುವರಿ ಆಟಗಾರನಾಗಿ ಆಯ್ಕೆಯಾಗಿದ್ದರು. ಈ ಆಯ್ಕೆಗೆ ಮುಖ್ಯ ಕಾರಣ ರುತುರಾಜ್ ಗಾಯಕ್ವಾಡ್. ಅಂದರೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಆಯ್ಕೆಯಾಗಿದ್ದ ರುತುರಾಜ್ ಮದುವೆಯ ನಿಮಿತ್ತ ತಂಡದಿಂದ ಹೊರಗುಳಿದಿದ್ದರು.
ಹೀಗಾಗಿ ಬದಲಿ ಆಟಗಾರನಾಗಿ ಯಶಸ್ವಿ ಜೈಸ್ವಾಲ್ ಆಯ್ಕೆಯಾಗಿದ್ದರು. ಇದೀಗ ರುತುರಾಜ್ ಗಾಯಕ್ವಾಡ್ಗಿಂತಲೂ ಮುಂಚಿತವಾಗಿ ಯಶಸ್ವಿ ಜೈಸ್ವಾಲ್ ಭಾರತದ ಪರ ಟೆಸ್ಟ್ನಲ್ಲಿ ಪಾದರ್ಪಣೆ ಮಾಡುತ್ತಿರುವುದು ವಿಶೇಷ.
ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಯಶಸ್ವಿ:
ಯಶಸ್ವಿ ಜೈಸ್ವಾಲ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಇದುವರೆಗೆ 26 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 9 ಶತಕ ಹಾಗೂ 2 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಅಲ್ಲದೆ 80.21 ಸರಾಸರಿಯಲ್ಲಿ ಒಟ್ಟು 1845 ರನ್ ಕಲೆಹಾಕಿದ್ದಾರೆ.
ಇದನ್ನೂ ಓದಿ: Team India: ಏಕದಿನ ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಫುಲ್ ಬ್ಯುಸಿ: ಇಲ್ಲಿದೆ ವೇಳಾಪಟ್ಟಿ
ಸ್ಪೋಟಕ ಬ್ಯಾಟಿಂಗ್ಗೆ ಹೆಸರುವಾಸಿಯಾಗಿರುವ ಯಶಸ್ವಿ ಜೈಸ್ವಾಲ್ 26 ಪ್ರಥಮ ದರ್ಜೆ ಇನಿಂಗ್ಸ್ಗಳಲ್ಲಿ ಬಾರಿಸಿರುವುದು ಬರೋಬ್ಬರಿ 227 ಫೋರ್ಗಳು. ಹಾಗೆಯೇ 24 ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲೂ ಜೈಸ್ವಾಲ್ ಬ್ಯಾಟ್ನಿಂದ ಭರ್ಜರಿ ಇನಿಂಗ್ಸ್ ಅನ್ನು ನಿರೀಕ್ಷಿಸಬಹುದು.
ಭಾರತ ಟೆಸ್ಟ್ ತಂಡ:
ರೋಹಿತ್ ಶರ್ಮಾ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ , ರವೀಂದ್ರ ಜಡೇಜಾ , ಮುಖೇಶ್ ಕುಮಾರ್, ಅಕ್ಷರ್ ಪಟೇಲ್, ನವದೀಪ್ ಸೈನಿ , ಮೊಹಮ್ಮದ್ ಸಿರಾಜ್ , ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕತ್.