Rohit Sharma Records: ಒಂದಲ್ಲ ಎರಡಲ್ಲ ಬರೋಬ್ಬರಿ 3 ದಾಖಲೆ ಬರೆದ ರೋಹಿತ್ ಶರ್ಮಾ: ಹಿಟ್​ಮ್ಯಾನ್ ನೂತನ ರೆಕಾರ್ಡ್ ಏನು?

India vs New Zealand T20: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಕೇವಲ 36 ಎಸೆತಗಳಲ್ಲಿ 1 ಬೌಂಡರಿ ಹಾಗೂ ಬರೋಬ್ಬರಿ 5 ಸಿಕ್ಸರ್ ಸಿಡಿಸಿದ ರೋಹಿತ್ ಶರ್ಮಾ 55 ರನ್ ಚಚ್ಚಿದರು. ಇದರ ಜೊತೆಗೆ ಒಂದಲ್ಲ, ಎರಡಲ್ಲ ಬರೋಬ್ಬರಿ ಮೂರು ದಾಖಲೆಯನ್ನು ಬರೆದಿದ್ದಾರೆ.

Rohit Sharma Records: ಒಂದಲ್ಲ ಎರಡಲ್ಲ ಬರೋಬ್ಬರಿ 3 ದಾಖಲೆ ಬರೆದ ರೋಹಿತ್ ಶರ್ಮಾ: ಹಿಟ್​ಮ್ಯಾನ್ ನೂತನ ರೆಕಾರ್ಡ್ ಏನು?
Rohit Sharma Record India vs New Zealand
Follow us
TV9 Web
| Updated By: Vinay Bhat

Updated on: Nov 20, 2021 | 10:50 AM

ರೋಹಿತ್ ಶರ್ಮಾ (Rohit Sharma) ಭಾರತ ಟಿ20 ಕ್ರಿಕೆಟ್ ತಂಡದ ಪರಿಪೂರ್ಣ ನಾಯಕನಾದ ಬಳಿಕ ಸಾಕಷ್ಟು ಬದಲಾವಣೆಗಳಾಗುತ್ತಿದೆ. ಜವಾಬ್ದಾರಿಯಿಂದ ತಂಡವನ್ನು ಮುನ್ನಡೆಸುತ್ತಿರುವ ಹಿಟ್​ಮ್ಯಾನ್ (Hitman) ಬ್ಯಾಟಿಂಗ್​ನಲ್ಲಿ ಎಚ್ಚರಿಕೆಯಿಂದ ಅಚ್ಚುಕಟ್ಟಾಗಿ ಪಾತ್ರನಿರ್ವಹಿಸುತ್ತಿದ್ದಾರೆ. ಇದಕ್ಕೆ ನ್ಯೂಜಿಲೆಂಡ್ (India vs New Zealand) ವಿರುದ್ಧದ ಟಿ20 ಸರಣಿ ವಶಪಡಿಸಿಕೊಂಡಿರುವುದೇ ಸಾಕ್ಷಿ. ಆಡಿದ ಎರಡೂ ಪಂದ್ಯಗಳಲ್ಲಿ ಭಾರತ ಗೆದ್ದು ಬೀಗಿದ್ದಲ್ಲದೆ ರೋಹಿತ್ ತಂಡವನ್ನು ಮುನ್ನಡೆಸಿದ ರೀತಿಗೆ ಕ್ರಿಕೆಟ್ ಪಂಡಿತರು ಕೂಡ ಸಲಾಂ ಹೊಡೆದಿದ್ದಾರೆ. ಶುಕ್ರವಾರ ನಡೆದ ಎರಡನೇ ಟಿ20 (2nd T20I) ಪಂದ್ಯದಲ್ಲೂ ರೋಹಿತ್ ತಂಡಕ್ಕೆ ಅತ್ಯುತ್ತಮ ಕೊಡುಗೆ ನೀಡಿದರು. ಕೇವಲ 36 ಎಸೆತಗಳಲ್ಲಿ 1 ಬೌಂಡರಿ ಹಾಗೂ ಬರೋಬ್ಬರಿ 5 ಸಿಕ್ಸರ್ ಸಿಡಿಸಿ 55 ರನ್ ಚಚ್ಚಿದರು. ಇದರ ಜೊತೆಗೆ ಹೊಸ ದಾಖಲೆಯನ್ನೂ ಬರೆದಿದ್ದಾರೆ. ಅದು ಒಂದಲ್ಲ, ಎರಡಲ್ಲ ಬರೋಬ್ಬರಿ ಮೂರು ದಾಖಲೆಯನ್ನು ಹಿಟ್​ಮ್ಯಾನ್ (Rohit Sharma Record) ತಮ್ಮ ಖಾತೆಗೆ ಸೇರಿಸಿಕೊಂಡಿದ್ದಾರೆ.

ಮೊದಲನೆಯದಾಗಿ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಬಾರಿ 50+ ರನ್ ಬಾರಿಸಿದ ಆಟಗಾರರ ಸಾಲಿನಲ್ಲಿ ವಿರಾಟ್ ಕೊಹ್ಲಿ ಜೊತೆ ರೋಹಿತ್ ಶರ್ಮಾ ಅವರು ಜಂಟಿ ಸ್ಥಾನ ಹಂಚಿಕೊಂಡಿದ್ದಾರೆ. ರೋಹಿತ್ ಬ್ಯಾಟ್​ನಿಂದ 25 ಅರ್ಧಶತಕ ಮತ್ತು 4 ಶತಕಗಳು ಬಂದಿವೆ. ವಿರಾಟ್ ಕೊಹ್ಲಿ 29 ಬಾರಿ 50+ ರನ್ ಬಾರಿಸಿದ್ದಾರೆ.

ಇನ್ನು ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಬಾರಿ 100+ ರನ್ ಜೊತೆಯಾಟ ಆಡಿದ ಆಟಗಾರ ರೋಹಿತ್ ಶರ್ಮಾ ಎನಿಸಿಕೊಂಡಿದ್ದಾರೆ. ನಿನ್ನೆಯ ಪಂದ್ಯದಲ್ಲಿ ರೋಹಿತ್ ಅವರು ರಾಹುಲ್ ಜೊತೆಗೂಡಿ 117 ರನ್​ಗಳ ಕಾಣಿಕೆ ನೀಡಿದ್ದರು. ಧವನ್ ಹಾಗೂ ರಾಹುಲ್ ಜೊತೆ ರೋಹಿತ್ ಅವರು ಈವರೆಗೆ ಒಟ್ಟು ದಾಖಲೆಯ 13 ಬಾರಿ 100+ ರನ್ ಜೊತೆಯಾಟ ಆಡಿ ಮೊದಲ ಸ್ಥಾನದಲ್ಲಿದ್ದಾರೆ.

ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಜೊತೆಗೂಡಿ ಮತ್ತೊಂದು ದಾಖಲೆ ಬರೆದಿದ್ದಾರೆ. ಟಿ20 ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಇವರಿಬ್ಬರು ಜೊತೆಯಾಗಿ 27 ಇನ್ನಿಂಗ್ಸ್​ಗಳನ್ನು ಆಡಿದ್ದು ಇದರಲ್ಲಿ 5 ಬಾರಿ ಶತಕದ ಜೊತೆಯಾಟ ಆಡಿದ್ದಾರೆ. ಈ ಮೂಲಕ ಪಾಕಿಸ್ತಾನದ ಬಾಬರ್ ಅಜಾಮ್ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಜೊತೆ ಜಂಟೆ ಸ್ಥಾನ ಹಂಚಿಕೊಂಡಿದ್ದಾರೆ.

ಇತ್ತ ನ್ಯೂಜಿಲೆಂಡ್ ತಂಡದ ಆರಂಬಿಕ ಮಾರ್ಟಿನ್ ಗಪ್ಟಿಲ್ ಅವರು ಕೂಡ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಹೊಸ ದಾಖಲೆ ಬರೆದಿದ್ದಾರೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ದಾಖಲೆ ಗಪ್ಟಿಲ್​ ತಮ್ಮ ಖಾತೆಗೆ ಸೇರಿಸಿಕೊಂಡಿದ್ದಾರೆ. ಗಪ್ಟಿಲ್ ಸದ್ಯ 111 ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 3248 ರನ್ ಬಾರಿಸಿ ಮೊದಲ ಸ್ಥಾನದಲ್ಲಿದ್ದಾರೆ. ಎರಡನೇ ಕುಸಿದಿರುವ ವಿರಾಟ್ ಕೊಹ್ಲಿ 95 ಪಂದ್ಯಗಳಲ್ಲಿ 3227 ರನ್ ಕಲೆಹಾಕಿದ್ದಾರೆ. ಎರಡನೇ ಟಿ20 ಪಂದ್ಯಕ್ಕೂ ಮುನ್ನ ಮಾರ್ಟಿನ್​ಗೆ ಈ ಸಾಧನೆ ಮಾಡಲು 11 ರನ್​ಗಳ ಅವಶ್ಯಕತೆಯಿತ್ತು.

Harshal Patel: ಪದಾರ್ಪಣೆ ಪಂದ್ಯದಲ್ಲೇ ಪಂದ್ಯಶ್ರೇಷ್ಠ ಸ್ವೀಕರಿಸುವಾಗ ಹರ್ಷಲ್ ಪಟೇಲ್ ಹೇಳಿದ್ದೇನು ಗೊತ್ತಾ?

Rohit Sharma: ಪಂದ್ಯ ಮುಗಿದ ಬಳಿಕ 3ನೇ ಟಿ20 ಬಗ್ಗೆ ರೋಹಿತ್ ಶರ್ಮಾರಿಂದ ಮಹತ್ವದ ಹೇಳಿಕೆ: ಏನದು ಗೊತ್ತೇ?

(Rohit Sharma creates 3 new records Equalling Virat Kohli in 2nd T20I India vs New zealand)

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?