AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1,123 ದಿನಗಳ ಬಳಿಕ ರೋಹಿತ್ ಶರ್ಮಾರನ್ನು ಸೊನ್ನೆ ಸುತ್ತಿಸಿದ ಕಿವೀಸ್ ವೇಗಿ!

ಭಾರತ ಮತ್ತು ನ್ಯೂಝಿಲೆಂಡ್ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್​ನಲ್ಲೇ ಟೀಮ್ ಇಂಡಿಯಾದ ಅನುಭವಿ ದಾಂಡಿಗ ರೋಹಿತ್ ಶರ್ಮಾ ನಿರಾಸೆ ಮೂಡಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಹಿಟ್​ಮ್ಯಾನ್ ಮೊದಲ ಓವರ್​ನಲ್ಲೇ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ಬರೋಬ್ಬರಿ 1,123 ದಿನಗಳ ಬಳಿಕ ಶೂನ್ಯದೊಂದಿಗೆ ಹಿಂತಿರುಗಿದ್ದಾರೆ.

1,123 ದಿನಗಳ ಬಳಿಕ ರೋಹಿತ್ ಶರ್ಮಾರನ್ನು ಸೊನ್ನೆ ಸುತ್ತಿಸಿದ ಕಿವೀಸ್ ವೇಗಿ!
Rohit Sharma Image Credit source: GettyImages
ಝಾಹಿರ್ ಯೂಸುಫ್
|

Updated on: Nov 04, 2026 | 1:05 PM

Share

ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನ್ಯೂಝಿಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ದಾಂಡಿಗ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದಾರೆ. ಕಿವೀಸ್ ವೇಗಿ ಕೈಲ್ ಜೇಮಿಸನ್ ಎಸೆತದಲ್ಲಿ ರೋಹಿತ್ ಶರ್ಮಾ ಕೇವಲ 6 ಎಸೆತಗಳನ್ನು ಎದುರಿಸಿ ಯಾವುದೇ ರನ್ ಗಳಿಸದೆ (ಡಕ್ ಔಟ್) ಮಿಚೆಲ್ ಸ್ಯಾಂಟ್ನರ್‌ಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದ್ದಾರೆ. ವಿಶೇಷ ಎಂದರೆ ಏಕದಿನ ಕ್ರಿಕೆಟ್‌ನಲ್ಲಿ ಇದು ಕಳೆದ 1,123 ದಿನಗಳ ನಂತರ ರೋಹಿತ್ ಶರ್ಮಾ ಅವರ ಮೊದಲ ಡಕ್ ಔಟ್ ಆಗಿದೆ.

ಅಂದರೆ 2023ರ ಬಳಿಕ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್​ನಲ್ಲಿ ಒಮ್ಮೆಯೂ ಶೂನ್ಯಕ್ಕೆ ಔಟಾಗಿರಲಿಲ್ಲ. ಆದರೆ ಈ ಬಾರಿ ಕೈಲ್ ಜೇಮಿಸನ್ ಎಸೆದ ಆಫ್-ಸ್ಟಂಪ್‌ಗಿಂತ ಹೊರಗಿದ್ದ ಫುಲ್ ಲೆಂತ್ ಎಸೆತವನ್ನು ರೋಹಿತ್ ಆಡಲು ಪ್ರಯತ್ನಿಸಿದರು. ಆದರೆ ಚೆಂಡು ಪಿಚ್‌ನಲ್ಲಿ ಕೊಂಚ ನಿಧಾನವಾಗಿ ಬಂದಿದ್ದರಿಂದ ಟೈಮಿಂಗ್ ಮಿಸ್ ಆಗಿ, ಮಿಡ್-ಆಫ್‌ನಲ್ಲಿದ್ದ ನ್ಯೂಝಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಅವರ ಕೈಗೆ ನೇರವಾಗಿ ಕ್ಯಾಚ್ ನೀಡಿತು. ಸ್ಯಾಂಟ್ನರ್ ಡೈವ್ ಹೊಡೆದು ಅತ್ಯಾಕರ್ಷಕ ಕ್ಯಾಚ್ ಪಡೆಯುವಲ್ಲಿ ಯಶಸ್ವಿಯಾದರು.

 1,123 ದಿನಗಳ ಸುದೀರ್ಘ ಓಟಕ್ಕೆ ಬ್ರೇಕ್:

  •  ರೋಹಿತ್ ಶರ್ಮಾ ಕೊನೆಯ ಬಾರಿಗೆ ಒಡಿಐ ಮಾದರಿಯಲ್ಲಿ ಶೂನ್ಯಕ್ಕೆ ಔಟ್ ಆಗಿದ್ದು ಅಕ್ಟೋಬರ್ 7, 2023 ರಂದು ಆಸ್ಟ್ರೇಲಿಯಾ ವಿರುದ್ಧದ ಒಡಿಐ ವಿಶ್ವಕಪ್ ಪಂದ್ಯದಲ್ಲಿ.
  • ಅದಾದ ನಂತರ ಸತತ 39 ಏಕದಿನ ಇನ್ನಿಂಗ್ಸ್‌ಗಳಲ್ಲಿ ಅವರು ಒಂದೂ ಬಾರಿಯೂ ಶೂನ್ಯಕ್ಕೆ ಔಟ್ ಆಗದೆ ಸ್ಥಿರ ಪ್ರದರ್ಶನ ಕಾಯ್ದುಕೊಂಡಿದ್ದರು.
  • ಇದೀಗ ಮೂರು ವರ್ಷಗಳ ನಂತರ ಕೈಲ್ ಜೇಮಿಸನ್, ರೋಹಿತ್ ಶರ್ಮಾ ಅವರ ಈ ಸುದೀರ್ಘ ದಾಖಲೆಯ ಓಟಕ್ಕೆ ಬ್ರೇಕ್ ಹಾಕಿದ್ದಾರೆ.

ಏಕದಿನ ಕ್ರಿಕೆಟ್​ ಶೂನ್ಯಶೂರರು:

ಈ ಶೂನ್ಯದೊಂದಿಗೆ ರೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಸೊನ್ನೆ ಸುತ್ತಿದ ಆಟಗಾರರ ಪಟ್ಟಿಯಲ್ಲಿ 7ನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬಾಸ್ಟರ್ ಸಚಿನ್ ತೆಂಡೂಲ್ಕರ್.

ಕ್ರಮಸಂಖ್ಯೆ ಆಟಗಾರರು ಪಂದ್ಯಗಳು ಇನ್ನಿಂಗ್ಸ್ ಶೂನ್ಯ 
1 ಸಚಿನ್ ತೆಂಡೂಲ್ಕರ್ 463 452 20
2 ವಿರಾಟ್ ಕೊಹ್ಲಿ 317 305 19
3 ಜಾವಗಲ್ ಶ್ರೀನಾಥ್ 229 121 19
4 ಯುವರಾಜ್ ಸಿಂಗ್ 304 278 18
5 ಅನಿಲ್ ಕುಂಬ್ಳೆ 271 136 18
6 ಹರಭಜನ್ ಸಿಂಗ್ 234 126 17
7 ರೋಹಿತ್ ಶರ್ಮಾ 292 284 17
8 ಸೌರವ್ ಗಂಗೂಲಿ 308 297 16
Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ
ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು