Rohit Sharma: ಟಿ20 ಕ್ರಿಕೆಟ್ನಲ್ಲಿ ರೋಹಿತ್ ಶರ್ಮಾ ಕಿಂಗ್..ಯಾಕೆ ಗೊತ್ತಾ?
Rohit Sharma: ಶೂನ್ಯಕ್ಕೆ ಔಟಾಗಿರುವ ಕಳಪೆ ದಾಖಲೆಯನ್ನು ಹೊರತುಪಡಿಸಿದರೆ, ಉಳಿದೆಲ್ಲವೂ ಭರ್ಜರಿ ದಾಖಲೆಗಳು ಎಂಬುದು ವಿಶೇಷ. ಹಾಗಿದ್ರೆ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಹೆಸರಿನಲ್ಲಿರುವ ದಾಖಲೆಗಳಾವುವು ಎಂದು ನೋಡೋಣ...
ವೆಸ್ಟ್ ಇಂಡೀಸ್ ವಿರುದ್ದದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ಶೂನ್ಯಕ್ಕೆ ಔಟಾಗಿದ್ದರು. ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ಶೂನ್ಯಕ್ಕೆ ಅತೀ ಹೆಚ್ಚು ಬಾರಿ ಔಟಾದ ಭಾರತೀಯ ಆರಂಭಿಕ ಆಟಗಾರ ಎಂಬ ಕೆಟ್ಟ ದಾಖಲೆಯೊಂದು ಹಿಟ್ಮ್ಯಾನ್ ಪಾಲಾಯಿತು. ವಿಶೇಷ ಎಂದರೆ ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ಹಿಟ್ಮ್ಯಾನ್ 5 ವಿಭಿನ್ನ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದರಲ್ಲಿ ಶೂನ್ಯಕ್ಕೆ ಔಟಾಗಿರುವ ಕಳಪೆ ದಾಖಲೆಯನ್ನು ಹೊರತುಪಡಿಸಿದರೆ, ಉಳಿದೆಲ್ಲವೂ ಭರ್ಜರಿ ದಾಖಲೆಗಳು ಎಂಬುದು ವಿಶೇಷ. ಹಾಗಿದ್ರೆ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಹೆಸರಿನಲ್ಲಿರುವ ದಾಖಲೆಗಳಾವುವು ಎಂದು ನೋಡೋಣ..
ಅತೀ ಹೆಚ್ಚು ರನ್:
- ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತ ಪರ ಹಾಗೂ ವಿಶ್ವದಲ್ಲಿಯೇ ಅತ್ಯಧಿಕ ರನ್ಗಳಿಸಿದ ಆಟಗಾರ ಎಂಬ ದಾಖಲೆ ಹಿಟ್ಮ್ಯಾನ್ ಹೆಸರಿನಲ್ಲಿದೆ. ರೋಹಿತ್ ಶರ್ಮಾ 3443 ರನ್ ಕಲೆಹಾಕಿ ನಂಬರ್ 1 ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
ಶತಕದ ಸರದಾರ:
- ಟೀಮ್ ಇಂಡಿಯಾ ಪರ ಅತ್ಯಧಿಕ ಟಿ20 ಶತಕ ಸಿಡಿಸಿದ್ದು ಕೂಡ ರೋಹಿತ್ ಶರ್ಮಾ. ಹಿಟ್ಮ್ಯಾನ್ ಇದುವರೆಗೆ ಟೀಮ್ ಇಂಡಿಯಾ ಪರ 4 ಟಿ20 ಶತಕಗಳನ್ನು ಬಾರಿಸಿದ್ದಾರೆ.
ಅತ್ಯಧಿಕ ಫೋರ್:
- ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಫೋರ್ ಬಾರಿಸಿದ ದಾಖಲೆ ಕೂಡ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಟೀಮ್ ಇಂಡಿಯಾ ನಾಯಕ ಇದುವರೆಗೆ 310 ಫೋರ್ಗಳನ್ನು ಬಾರಿಸಿದ್ದಾರೆ. ಹಾಗೆಯೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಫೋರ್ ಬಾರಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ 332 ಫೋರ್ ಬಾರಿಸಿರುವ ಐರ್ಲೆಂಡ್ ಪಾಲ್ ಸ್ಟೀರ್ಲಿಂಗ್ ಇದ್ದಾರೆ.
ಅತ್ಯಧಿಕ ಸಿಕ್ಸ್:
- ಭಾರತದ ಪರ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿರುವ ದಾಖಲೆಯನ್ನು ರೋಹಿತ್ ಶರ್ಮಾ ಬರೆದಿದ್ದಾರೆ. ಹಿಟ್ಮ್ಯಾನ್ ಇದುವರೆಗೆ 159 ಸಿಕ್ಸ್ ಸಿಡಿಸಿ ಟೀಮ್ ಇಂಡಿಯಾ ಪರ ಸಿಕ್ಸರ್ ಸರದಾರ ಎನಿಸಿಕೊಂಡಿದ್ದಾರೆ. ಹಾಗೆಯೇ ನ್ಯೂಜಿಲೆಂಡ್ ಮಾರ್ಟಿನ್ ಗಪ್ಟಿಲ್ (169) ಅತೀ ಹೆಚ್ಚು ಸಿಕ್ಸ್ ಸಿಡಿಸಿದ 2ನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.
ಸೊನ್ನೆ ಸರದಾರ:
- ಟೀಮ್ ಇಂಡಿಯಾ ಪರ ಆರಂಭಿಕರಾಗಿ ಅತ್ಯಧಿಕ ಬಾರಿ ಶೂನ್ಯಕ್ಕೆ ಔಟಾದ ಕೆಟ್ಟ ದಾಖಲೆಯೊಂದು ಕೂಡ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಹಿಟ್ಮ್ಯಾನ್ ಇದುವರೆಗೆ ಭಾರತದ ಆರಂಭಿಕರಾಗಿ ಕಣಕ್ಕಿಳಿದು 6 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.
ಅಂದರೆ ಇಲ್ಲಿ ಟೀಮ್ ಇಂಡಿಯಾ ಪರ ಸಿಕ್ಸ್, ಫೋರ್, ರನ್, ಶತಕಗಳ ಅಂಕಿ ಅಂಶಗಳಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನವನ್ನು ಅಲಂಕರಿಸಿದ್ದು, ಈ ಮೂಲಕ ಭಾರತದ ಟಿ20 ಕ್ರಿಕೆಟ್ನ ಕಿಂಗ್ ಎನಿಸಿಕೊಂಡಿದ್ದಾರೆ.