ರೋಹಿತ್ ಶರ್ಮಾ ಜತೆ ಬಿಸಿಸಿಐ ‘ಗಂಭೀರ’ ಸಭೆ

Team India: ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 22 ರಿಂದ ಆರಂಭವಾಗಲಿದ್ದು, ಮೊದಲಿಗೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಸರಣಿಗೂ ಮುನ್ನ ಬಿಸಿಸಿಐ ವಿಶೇಷ ಸಭೆ ಕರೆದಿದ್ದು, ಈ ಸಭೆಯಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಮುಖ್ಯ ಕೋಚ್ ಗೌತಮ್ ಗಂಭೀರ್ ಪಾಲ್ಗೊಳ್ಳಲಿದ್ದಾರೆ.

ರೋಹಿತ್ ಶರ್ಮಾ ಜತೆ ಬಿಸಿಸಿಐ 'ಗಂಭೀರ' ಸಭೆ
Rohit - GG- Ajit
Follow us
ಝಾಹಿರ್ ಯೂಸುಫ್
|

Updated on: Jan 11, 2025 | 11:41 AM

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಹೀನಾಯ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ ಬಗ್ಗೆ ಸ್ಪಷ್ಟನೆ ಕೇಳಲು ಬಿಸಿಸಿಐ ವಿಶೇಷ ಸಭೆ ಕರೆದಿದೆ. ಮುಂಬೈನಲ್ಲಿ ನಡೆಯಲಿರುವ ಈ ಸಭೆಯಲ್ಲಿ ಬಿಸಿಸಿಐ ಅಧಿಕಾರಿಗಳೊಂದಿಗೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಮುಖ್ಯ ಕೋಚ್ ಗೌತಮ್ ಗಂಭೀರ್, ಆಯ್ಕೆ ಸಮಿತಿ ಮುಖ್ಯ ಅಜಿತ್ ಅಗರ್ಕರ್ ಭಾಗವಹಿಸಲಿದ್ದಾರೆ.

ನ್ಯೂಝಿಲೆಂಡ್ ವಿರುದ್ಧದ ಶೋಚನೀಯ ಸೋಲು, ಆಸ್ಟ್ರೇಲಿಯಾ ವಿರುದ್ಧದ 3-1 ಅಂತರದ ಪರಾಜಯದ ಬಗ್ಗೆ ಈ ಸಭೆಯಲ್ಲಿ ಸ್ಪಷನೆ ಕೇಳಲಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಮುಂಬರುವ ಇಂಗ್ಲೆಂಡ್ ವಿರುದ್ಧದ ಸರಣಿಗೆ ಮತ್ತು ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾ ಹೇಗಿರಬೇಕೆಂದು ಇದೇ ವೇಳೆ ಚರ್ಚಿಸಲಾಗುತ್ತದೆ.

ರೋಹಿತ್ ಶರ್ಮಾಗೆ ಗಡುವು:

ಈ ಸಭೆಯಲ್ಲಿ ರೋಹಿತ್ ಶರ್ಮಾ ಅವರ ಕೆರಿಯರ್ ಬಗ್ಗೆ ಕೂಡ ಚರ್ಚಿಸುವ ಸಾಧ್ಯತೆಯಿದೆ. ಏಕೆಂದರೆ 37 ವರ್ಷದ ಹಿಟ್​ಮ್ಯಾನ್ ಇದೀಗ ನಿವೃತ್ತಿ ಅಂಚಿನಲ್ಲಿದ್ದು, ಹೀಗಾಗಿ ಅವರ ವಿದಾಯಕ್ಕೆ ಗಡುವು ವಿಧಿಸುವ ಸಾಧ್ಯತೆ ಹೆಚ್ಚಿದೆ.

ಅದರಂತೆ ಚಾಂಪಿಯನ್ಸ್ ಟ್ರೋಫಿ ಮೂಲಕ ರೋಹಿತ್ ಶರ್ಮಾಗೆ ಏಕದಿನ ಕ್ರಿಕೆಟ್​ನಿಂದ ನಿವೃತ್ತರಾಗಲು ಸೂಚಿಸಬಹುದು. ಅಲ್ಲದೆ ಟೆಸ್ಟ್ ತಂಡಕ್ಕೆ ಪರಿಗಣಿಸುವುದಿಲ್ಲ ಎಂಬುದನ್ನು ಇದೇ ವೇಳೆ ಪ್ರಸ್ತಾಪಿಸುವ ಸಾಧ್ಯತೆಯಿದೆ.

​ ಕೋಚ್ ಸ್ಥಾನಕ್ಕೂ ಕುತ್ತು:

ಟೀಮ್ ಇಂಡಿಯಾ ಗೌತಮ್ ಗಂಭೀರ್ ಅವರ ಗರಡಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡುತ್ತಿಲ್ಲ. ಹೀಗಾಗಿ ಗಂಭೀರ್ ಪಾಲಿಗೆ ಚಾಂಪಿಯನ್ಸ್ ಟ್ರೋಫಿ ನಿರ್ಣಾಯಕ. ಒಂದು ವೇಳೆ ಚಾಂಪಿಯನ್ಸ್ ಟ್ರೋಫಿಯಲ್ಲೂ ಟೀಮ್ ಇಂಡಿಯಾ ಕಳಪೆ ಪ್ರದರ್ಶನ ನೀಡಿದರೆ, ಏಕದಿನ ಮತ್ತು ಟೆಸ್ಟ್ ತಂಡಗಳಿಗೆ ಹೊಸ ನೇಮಕವಾಗುವ ಸಾಧ್ಯತೆಯಿದೆ.

ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಪಾಲಿಗೆ ಅಗ್ನಿ ಪರೀಕ್ಷೆ ಎನ್ನಬಹುದು. ಈ ಟೂರ್ನಿಯೊಂದಿಗೆ ಅವರ ಕೋಚ್ ಭವಿಷ್ಯ ಕೂಡ ನಿರ್ಧಾರವಾಗಲಿದೆ.

ಇಂಗ್ಲೆಂಡ್ ವಿರುದ್ಧದ ಸರಣಿ ಯಾವಾಗ ಶುರು?

ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 22 ರಿಂದ ಆರಂಭವಾಗಲಿದ್ದು, ಮೊದಲಿಗೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಇದಾದ ಬಳಿಕ ಮೂರು ಮ್ಯಾಚ್​​ಗಳ ಏಕದಿನ ಸರಣಿಯನ್ನು ಆಡಲಾಗುತ್ತದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

  • 1ನೇ T20I: ಜನವರಿ 22 (ಚೆನ್ನೈ)
  • 2ನೇ T20I: ಜನವರಿ 25 (ಕೋಲ್ಕತ್ತಾ)
  • 3ನೇ T20I: ಜನವರಿ 28 (ರಾಜ್‌ಕೋಟ್)
  • 4ನೇ T20I: ಜನವರಿ 31 (ಪುಣೆ)
  • 5ನೇ T20I: ಫೆಬ್ರವರಿ 2 (ಮುಂಬೈ)

ಇದನ್ನೂ ಓದಿ: ಅವರಿಲ್ಲ, ಇವರಿಲ್ಲ… ಸಿರಾಜ್ ಬೆನ್ನು ಮೂಳೆ ಮುರಿಯುತ್ತಿರುವ ಬಿಸಿಸಿಐ

  • 1ನೇ ODI: ಫೆಬ್ರವರಿ 6 (ನಾಗ್ಪುರ)
  • 2ನೇ ODI: ಫೆಬ್ರವರಿ 9 (ಕಟಕ್)
  • 3ನೇ ODI: ಫೆಬ್ರವರಿ 12 (ಅಹಮದಾಬಾದ್)

ಚಾಂಪಿಯನ್ಸ್ ಟ್ರೋಫಿ ಯಾವಾಗ ಆರಂಭ?

2025ರ ಚಾಂಪಿಯನ್ಸ್ ಟ್ರೋಫಿಯು ಫೆಬ್ರವರಿ 19 ರಿಂದ ಆರಂಭವಾಗಲಿದೆ. ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಈ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಅದರಂತೆ ಭಾರತದ ಪಂದ್ಯಗಳು ದುಬೈನಲ್ಲಿ ಜರುಗಲಿದ್ದು, ಉಳಿದ ಮ್ಯಾಚ್​ಗಳಿಗೆ ಪಾಕಿಸ್ತಾನ್ ಆತಿಥ್ಯವಹಿಸಲಿದೆ. ಈ ಟೂರ್ನಿಯ ಭಾರತದ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ.

  • ಭಾರತ vs ಬಾಂಗ್ಲಾದೇಶ್: ಫೆಬ್ರವರಿ 20 (ದುಬೈ)
  • ಭಾರತ vs ಪಾಕಿಸ್ತಾನ್: ಫೆಬ್ರವರಿ 23 (ದುಬೈ)
  • ಭಾರತ vs ನ್ಯೂಝಿಲೆಂಡ್: ಮಾರ್ಚ್ 2 (ದುಬೈ)
  • ಸೆಮಿಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 4 (ದುಬೈ)
  • ಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 9 (ದುಬೈ)
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ