ICC World Cup: ಕ್ಯಾಪ್ಟನ್ಸಿ ಡೇಯಲ್ಲಿ ಗರಂ ಆದ ರೋಹಿತ್: ವರದಿಗಾರರ ಪ್ರಶ್ನೆಗೆ ಹಿಟ್​ಮ್ಯಾನ್ ಖಡಕ್ ಉತ್ತರ

Rohit Sharma in captain's day roundtable program: ಕ್ಯಾಪ್ಟನ್ಸಿ ಡೇ ಎಂಬ ಕಾರ್ಯಕ್ರಮದಲ್ಲಿ ರೋಹಿತ್ ಶರ್ಮಾ ಅವರಿಗೆ, ನ್ಯೂಝಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ 2019 ರ ವಿಶ್ವಕಪ್ ಫೈನಲ್‌ನ ಕುರಿತು ಪ್ರಶ್ನೆ ಕೇಳಲಾಗಿದೆ. ಇದಕ್ಕೆ ಹಿಟ್​ಮ್ಯಾನ ಖಡಕ್ ಆಗಿ ಉತ್ತರವನ್ನು ನೀಡಿದರು. 2019ರ ವಿಶ್ವಕಪ್ ಫೈನಲ್​ನಲ್ಲಿ ಗೆಲುವು ಕಾಣದಿದ್ದಾಗ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಬೇಕೇ? ಎಂದು ವರದಿಗಾರರು ಪ್ರಶ್ನಿಸಿದ್ದರು.

ICC World Cup: ಕ್ಯಾಪ್ಟನ್ಸಿ ಡೇಯಲ್ಲಿ ಗರಂ ಆದ ರೋಹಿತ್: ವರದಿಗಾರರ ಪ್ರಶ್ನೆಗೆ ಹಿಟ್​ಮ್ಯಾನ್ ಖಡಕ್ ಉತ್ತರ
Rohit Sharma captain's day
Follow us
Vinay Bhat
|

Updated on: Oct 05, 2023 | 9:47 AM

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ (ICC World Cup) ಇಂದು ಚಾಲನೆ ಸಿಗಲಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 2019 ವಿಶ್ವಕಪ್ ಫೈನಲಿಸ್ಟ್​ಗಳಾದ ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ಮುಖಾಮುಖಿ ಆಗಲಿದೆ. ಇದಕ್ಕೂ ಮುನ್ನ ನಿನ್ನೆ (ಅ. 4) ಎಲ್ಲ ನಾಯಕರನ್ನು ಒಟ್ಟುಗೂಡಿಸಿ ಕ್ಯಾಪ್ಟನ್ಸಿ ಡೇ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪತ್ರಕರ್ತರು ಕೂಡ ಹಾಜರಿದ್ದು, ಎಲ್ಲ ತಂಡಗಳ ನಾಯಕರಿಗೆ ಪ್ರಶ್ನೆಗಳನ್ನು ಕೇಳಲಾಯಿತು. ಈ ಸಂದರ್ಭ ಒಂದು ಪ್ರಶ್ನೆಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ನೀಡಿದ ಉತ್ತರ ಎಲ್ಲಡೆ ವೈರಲ್ ಆಗುತ್ತಿದೆ.

ನ್ಯೂಝಿಲೆಂಡ್ ಮತ್ತು ಇಂಗ್ಲೆಂಡ್ ನಡುವಿನ 2019 ರ ವಿಶ್ವಕಪ್ ಫೈನಲ್‌ನ ಕುರಿತು ಕೇಳಿದ ಪ್ರಶ್ನೆಗೆ ರೋಹಿತ್ ಶರ್ಮಾ ಅವರು ಪತ್ರಕರ್ತರಿಗೆ ಖಡಕ್ ಆಗಿ ಉತ್ತರವನ್ನು ನೀಡಿದರು. 2019ರ ವಿಶ್ವಕಪ್ ಫೈನಲ್​ನಲ್ಲಿ ಗೆಲುವು ಕಾಣದಿದ್ದಾಗ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಬೇಕೇ? ಎಂದು ವರದಿಗಾರರು ರೋಹಿತ್ ಅವರನ್ನು ಇಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ
Image
World Cup: ಇಂಗ್ಲೆಂಡ್-ನ್ಯೂಝಿಲೆಂಡ್ ಆಟಗಾರರಿಂದ ಭರ್ಜರಿ ಅಭ್ಯಾಸ
Image
ವಿಶ್ವಕಪ್ ಉದ್ಘಾಟನಾ ಪಂದ್ಯಕ್ಕಿದೆಯಾ ಮಳೆಯ ಆತಂಕ?
Image
ವಿಶ್ವಕಪ್ ಅನ್ನು ಟಿವಿ- ಮೊಬೈಲ್​ನಲ್ಲಿ ಉಚಿತವಾಗಿ ವೀಕ್ಷಿಸುವುದು ಹೇಗೆ?
Image
ಇಂಗ್ಲೆಂಡ್-ನ್ಯೂಜಿಲೆಂಡ್ ವಿಶ್ವಕಪ್‌ ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?

ಇಂಗ್ಲೆಂಡ್ ತಂಡಕ್ಕೆ ಬಿಗ್ ಶಾಕ್; ಸ್ಟಾರ್ ಆಲ್​ರೌಂಡರ್​ಗೆ ಇಂಜುರಿ! ಉದ್ಘಾಟನಾ ಪಂದ್ಯಕ್ಕೆ ಅಲಭ್ಯ?

2019 ರಲ್ಲಿ ಲಾರ್ಡ್ಸ್‌ನಲ್ಲಿ ನಡೆದ ವಿಶ್ವಕಪ್ ಫೈನಲ್​ನಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಪಂದ್ಯ ಟೈ ಆದ ಕಾರಣ ಸೂಪರ್‌ ಓವರ್ ಆಡಿಸಲಾಯಿತು. ಆದರೆ, ಸೂಪರ್ ಓವರ್ ಕೂಡ ಟೈನಲ್ಲಿ ಕೊನೆಗೊಂಡಿತು. ಫೈನಲ್ ಪಂದ್ಯ ಎರಡು ಬಾರಿ ಟೈ ಆಗಿದ್ದರಿಂದ ಐಸಿಸಿ ನಿಯಮದ ಪ್ರಕಾರ ಗೆಲುವನ್ನು ಬೌಂಡರಿಗಳ ಲೆಕ್ಕಾಚಾರದಲ್ಲಿ ನಿರ್ಣಯಿಸಲಾಯಿತು. ಯಾವ ತಂಡ ಹೆಚ್ಚು ಬೌಂಡರಿ (ಫೋರ್+ಸಿಕ್ಸ್) ಬಾರಿಸಿದೆಯೋ ಆ ತಂಡವನ್ನು ವಿಜೇತರೆಂದು ಘೋಷಿಸಲಾಯಿತು. ಹೀಗಾಗಿ ಇಯಾನ್ ಮಾರ್ಗನ್ ನಾಯಕತ್ವದ ಇಂಗ್ಲೆಂಡ್ ಪ್ರಶಸ್ತಿ ಎತ್ತಿ ಹಿಡಿಯಿತು.

ಕ್ಯಾಪ್ಟನ್ಸಿ ಡೇ ಕಾರ್ಯಕ್ರಮದಲ್ಲಿ ರೋಹಿತ್ ಶರ್ಮಾ:

ಈ ಕುರಿತು ಕ್ಯಾಪ್ಟನ್ಸಿ ಡೇ ಕಾರ್ಯಕ್ರಮದಲ್ಲಿ ರೋಹಿತ್ ಶರ್ಮಾಗೆ ಪ್ರಶ್ನೆ ಕೇಳಲಾಯಿತು. ”2019ರ ವಿಶ್ವಕಪ್ ಫೈನಲ್​ನಲ್ಲಿ ಗೆಲುವು ಕಾಣದಿದ್ದಾಗ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಬೇಕೇ?” ಎಂದು ವರದಿಗಾರರು ರೋಹಿತ್ ಬಳಿ ಕೇಳಿದ್ದಾರೆ. ರೋಹಿತ್ ಈ ಪ್ರಶ್ನೆಯಿಂದ ಆಶ್ಚರ್ಯಗೊಂಡು ಅಂತಹ ಪ್ರಶ್ನೆಯು ತನ್ನಲ್ಲಿ ಏಕೆ ಕೇಳಿದರು ಎಂದು ಬೇಸರಗೊಂಡರು. ಬಳಿಕ ಇದಕ್ಕೆ ಉತ್ತರಿಸಿದ ಭಾರತೀಯ ನಾಯಕ, ‘ವಿಜೇತರನ್ನು ಘೋಷಿಸುವುದು ನನ್ನ ಕೆಲಸವಲ್ಲ,’ ಎಂದು ರೋಹಿತ್ ಖಡಕ್ ಆಗಿ ಹೇಳಿದ್ದಾರೆ.

2019 ವಿಶ್ವಕಪ್ ಬಳಿಕ ಮತ್ತೊಮ್ಮೆ ಇಂದು ವಿಶ್ವಕಪ್​ನಲ್ಲಿ ಇಂಗ್ಲೆಂಡ್-ನ್ಯೂಝಿಲೆಂಡ್ ಮುಖಾಮುಖಿ ಆಗಲಿದೆ. ರೋಹಿತ್ ನೇತೃತ್ವದ ಭಾರತ ಭಾನುವಾರ (ಅಕ್ಟೋಬರ್ 8) ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದೆ. ಅಕ್ಟೋಬರ್ 14 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ತನ್ನ ಮೂರನೇ ಪಂದ್ಯದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ