IND vs ENG: ಸೋಲಿನ ಬಳಿಕ ಡಗೌಟ್​ನಲ್ಲಿ ಕಣ್ಣೀರಿಟ್ಟ ರೋಹಿತ್..! ಮಂಕಾದ ಕೊಹ್ಲಿ- ಸೂರ್ಯ; ವಿಡಿಯೋ

T20 World Cup 2022: 10 ವಿಕೆಟ್​ಗಳ ಸೋಲಿನ ಶಾಕ್​ಗೆ ಒಳಗಾದ ನಾಯಕ ರೋಹಿತ್ ಶರ್ಮಾ ಪೋಸ್ಟ್ ಮ್ಯಾಚ್ ಪ್ರೆಸೆಂಟೇಶನ್ ಬಳಿಕ ಡಗೌಟ್​ನಲ್ಲಿ ಕುಳಿತು ಕಣ್ಣೀರಿಟ್ಟಿದ್ದಾರೆ.

IND vs ENG: ಸೋಲಿನ ಬಳಿಕ ಡಗೌಟ್​ನಲ್ಲಿ ಕಣ್ಣೀರಿಟ್ಟ ರೋಹಿತ್..! ಮಂಕಾದ ಕೊಹ್ಲಿ- ಸೂರ್ಯ; ವಿಡಿಯೋ
Image Credit source: Timesnow
Follow us
TV9 Web
| Updated By: ಪೃಥ್ವಿಶಂಕರ

Updated on:Nov 10, 2022 | 6:13 PM

ಟೀಂ ಇಂಡಿಯಾ (Team India) ಟಿ20 ವಿಶ್ವಕಪ್‌ನಿಂದ (T20 World Cup) ಬರಿಗೈಯಲ್ಲಿ ಮರಳುತ್ತಿದೆ. ಎರಡನೇ ಸೆಮಿಫೈನಲ್​ನಲ್ಲಿ ಇಂಗ್ಲೆಂಡ್ ವಿರುದ್ಧ 10 ವಿಕೆಟ್​ಗಳಿಂದ ಸೋತ ರೋಹಿತ್ ಪಡೆ ಅಭಿಮಾನಿಗಳ ನಿರೀಕ್ಷೆಯನ್ನು ಹುಸಿಗೊಳಿಸಿದೆ. ಐಪಿಎಲ್​ನಲ್ಲಿ ತಮ್ಮ ಸಾಮರ್ಥ್ಯ ತೋರುವ ಭಾರತದ ಸ್ಟಾರ್ ಆಟಗಾರರು ಈ ಮಹತ್ವದ ಪಂದ್ಯದಲ್ಲಿ ತೀವ್ರ ನಿರಾಸೆ ಮೂಡಿಸಿದರು. ಈ ಮೂಲಕ ಭಾರೀ ನಿರೀಕ್ಷೆಯೊಂದಿಗೆ ಕಾದಿದ್ದ ಭಾರತೀಯ ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ಇಂಗ್ಲೆಂಡ್ ವಿರುದ್ಧ ಹೀನಾಯವಾಗಿ ಸೋತ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಡಗೌಟ್​ನಲ್ಲಿ ಕುಳಿತು ಕಣ್ಣೀರಿಟ್ಟಿರುವ ವಿಡಿಯೋ ಈಗ ಸಖತ್ ವೈರಲ್ ಆಗುತ್ತಿದೆ.

ಅಡಿಲೇಡ್‌ನಲ್ಲಿ ನಡೆದ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡ ಭಾರತವನ್ನು 10 ವಿಕೆಟ್‌ಗಳಿಂದ ಏಕಪಕ್ಷೀಯವಾಗಿ ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕೊಹ್ಲಿ (Virat Kohli) ಹಾಗೂ ಹಾರ್ದಿಕ್ ಅರ್ಧಶತಕದ ಆದಾರದ ಮೇಲೆ 169 ರನ್ ಗಳಿಸಿತ್ತು. ಇದಕ್ಕುತ್ತರವಾಗಿ ಇಂಗ್ಲೆಂಡ್ ತಂಡ ವಿಕೆಟ್ ನಷ್ಟವಿಲ್ಲದೆ ಗುರಿ ತಲುಪಿತು. ಇಂಗ್ಲೆಂಡ್ ಪರ ಆರಂಭಿಕರಿಬ್ಬರೂ ತಲಾ ಅರ್ಧಶತಕ ಸಿಡಿಸಿ ಮಿಂಚಿದರು.

ಈ ಬಾರಿಯ ವಿಶ್ವಕಪ್​ನಲ್ಲಿ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಆಡಿದ ಪಂದ್ಯಗಳಲ್ಲಿ ಟೀಂ ಇಂಡಿಯಾ ಆರಂಭಿಕರಿಬ್ಬರನ್ನೂ ಬಿಟ್ಟರೆ ಉಳಿದಂತೆ ಅದ್ಭುತ ಪ್ರದರ್ಶನ ನೀಡಿತ್ತು. ಹೀಗಾಗಿ ಆಡಿದ 6 ಪಂದ್ಯಗಳಲ್ಲಿ 5 ಪಂದ್ಯಗಳನ್ನು ಗೆದ್ದುಬೀಗಿದ್ದ ರೋಹಿತ್ ಪಡೆ ಟೇಬಲ್ ಟಾಪರ್ ಆಗಿ ಸೆಮಿಫೈನಲ್ ತಲುಪಿತ್ತು. ಆದರೆ ಇಂಗ್ಲೆಂಡ್ ಎದುರು ರೋಹಿತ್ ಪಡೆ ಈ ರೀತಿಯಾಗಿ ಮುಗ್ಗರಿಸುತ್ತದೆ ಎಂದು ಯಾರೂ ಕೂಡ ಊಹಿಸಿರಲಿಲ್ಲ. ಆದರೆ ಕೋಟ್ಯಾಂತರ ಅಭಿಮಾನಿಗಳು ಊಹಿಸದ ಫಲಿತಾಂಶ ಈ ಪಂದ್ಯದಲ್ಲಿ ಕಂಡುಬಂತು. 10 ವಿಕೆಟ್​ಗಳ ಸೋಲಿನ ಶಾಕ್​ಗೆ ಒಳಗಾದ ನಾಯಕ ರೋಹಿತ್ ಶರ್ಮಾ ಪೋಸ್ಟ್ ಮ್ಯಾಚ್ ಪ್ರೆಸೆಂಟೇಶನ್ ಬಳಿಕ ಡಗೌಟ್​ನಲ್ಲಿ ಕುಳಿತು ಕಣ್ಣೀರಿಟ್ಟಿದ್ದಾರೆ. ರೋಹಿತ್ ತಲೆಬಾಗಿ ಕಣ್ಣೀರಿಟ್ಟಿರುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

ಈ ಪಂದ್ಯದಲ್ಲಿ ರೋಹಿತ್ ಆಟ

ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ 27 ರನ್ ಗಳಿಸಿದ್ದರು. ಆದರೆ, ಅವರು 8 ಅಥವಾ 9 ಎಸೆತಗಳಲ್ಲಿ ಈ ರನ್ ಗಳಿಸಿದ್ದರೆ, ಅದು ವಿಷಯವಾಗುತ್ತಿತ್ತು. ಆದರೆ ರೋಹಿತ್ ಇದನ್ನು ಮಾಡಲಿಲ್ಲ. ಬದಲಿಗೆ ಇಷ್ಟು ರನ್ ಗಳಿಸಲು ಅವರು ಬರೋಬ್ಬರಿ 28 ಎಸೆತಗಳನ್ನು ಎದುರಿಸಿದರು. ಅಲ್ಲದೆ ಅವರ ಇನ್ನಿಂಗ್ಸ್‌ನಲ್ಲಿ ಸ್ಟ್ರೈಕ್ ರೇಟ್ 100 ಕೂಡ ದಾಟಲಿಲ್ಲ. ರೋಹಿತ್ ತಮ್ಮ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಬಾರಿಸಲಷ್ಟೇ ಶಕ್ತರಾಗಿ ಪೆವಿಲಿಯನ್ ಸೇರಿಕೊಂಡರು.

T20 ವಿಶ್ವಕಪ್​ನಲ್ಲಿ ರೋಹಿತ್ ಪ್ರದರ್ಶನ

ಸೆಮಿಫೈನಲ್ ಸೇರಿದಂತೆ, ರೋಹಿತ್ ಶರ್ಮಾ ಈ ಟಿ20 ವಿಶ್ವಕಪ್​ನಲ್ಲಿ ಒಟ್ಟು 6 ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ ಕೇವಲ 116 ರನ್ ಮಾತ್ರ ಗಳಿಸಿದ್ದಾರೆ. 20 ರ ಸರಾಸರಿ ರನ್ ಗಳಿಸಿರುವ ರೋಹಿತ್ 106.42 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದಾರೆ.

Published On - 6:08 pm, Thu, 10 November 22

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು