ಒಬ್ಬರು ಫಿಟ್, ಮತ್ತೊಬ್ಬರು ಡೌಟ್! ಅಕ್ಷರ್- ಅಯ್ಯರ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್

Rohit Sharma: ಗೆಲುವಿನ ನಂತರ ಸುದ್ದಿಗೋಷ್ಠಿಯಲ್ಲಿ ನಾಯಕ ರೋಹಿತ್ ಇಬ್ಬರ ಗಾಯಗಳ ಕುರಿತು ಮಾಹಿತಿ ನೀಡಿದ್ದು, ಅಕ್ಷರ್ ಇಂಜುರಿಯಿಂದ ಚೇತರಿಸಿಕೊಳ್ಳಲು ಬಹುಶಃ ಒಂದು ವಾರ ಅಥವಾ 10 ದಿನಗಳು ಬೇಕಾಗಬಹುದು ಎಂದಿದ್ದಾರೆ. ಇದರರ್ಥ ಅಕ್ಷರ್ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಆಡುವುದಿಲ್ಲ ಎಂಬುದು ಖಚಿತವಾಗಿದೆ.

ಒಬ್ಬರು ಫಿಟ್, ಮತ್ತೊಬ್ಬರು ಡೌಟ್! ಅಕ್ಷರ್- ಅಯ್ಯರ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್
ರೋಹಿತ್ ಶರ್ಮಾ, ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್
Follow us
|

Updated on:Sep 18, 2023 | 7:14 AM

ಐದು ವರ್ಷಗಳ ನಂತರ ಭಾರತ ಮತ್ತೊಮ್ಮೆ ಏಷ್ಯಾಕಪ್ (Asia Cup 2023) ಪ್ರಶಸ್ತಿ ಗೆದ್ದುಕೊಂಡಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಫೈನಲ್‌ನಲ್ಲಿ ಶ್ರೀಲಂಕಾವನ್ನು (India vs Sri lanka) 10 ವಿಕೆಟ್‌ಗಳಿಂದ ಸೋಲಿಸಿ ಎಂಟನೇ ಬಾರಿಗೆ ಈ ಪಂದ್ಯಾವಳಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕೊಲಂಬೊದಲ್ಲಿ ನಡೆದ ಈ ಫೈನಲ್ ಪಂದ್ಯದ ಗೆಲುವು ವಿಶ್ವಕಪ್‌ಗೆ ಮುನ್ನ ಟೀಂ ಇಂಡಿಯಾದ ಸಿದ್ಧತೆಯ ಉತ್ತಮ ಚಿತ್ರಣವನ್ನು ನೀಡಿದ್ದು, ಭರವಸೆ ಮೂಡಿಸಿದೆ. ಆದರೆ ಇಂಜುರಿಯಿಂದಾಗಿ ತಂಡದಿಂದ ಹೊರಗುಳಿದಿರುವ ಶ್ರೇಯಸ್ ಅಯ್ಯರ್ (Shreyas Iyer) ಮತ್ತು ಅಕ್ಷರ್ ಪಟೇಲ್ (Axar Patel) ಅವರ ಫಿಟ್ನೆಸ್ ಟೀಂ ಇಂಡಿಯಾಗೆ ಸ್ವಲ್ಪ ಟೆನ್ಷನ್ ಹೆಚ್ಚಿಸಿದೆ. ಇದೀಗ ಈ ಇಬ್ಬರ ಫಿಟ್ನೆಸ್ ಬಗ್ಗೆ ನಾಯಕ ರೋಹಿತ್ ಶರ್ಮಾ (Rohit Sharma) ಅಪ್​ಡೇಟ್ ನೀಡಿದ್ದು, ಯಾರು ಯಾವಾಗ ತಂಡ ಸೇರಿಕೊಳ್ಳಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಸೆಪ್ಟೆಂಬರ್ 17 ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಏಕಪಕ್ಷೀಯವಾಗಿ ಆತಿಥೇಯ ಶ್ರೀಲಂಕಾ ತಂಡವನ್ನು ಸೋಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ಮೊಹಮ್ಮದ್ ಸಿರಾಜ್ ಸೇರಿದಂತೆ ಟೀಂ ಇಂಡಿಯಾದ ವೇಗದ ಬೌಲರ್‌ಗಳ ದಾಳಿಗೆ ತತ್ತಿರಿಸಿ ಕೇವಲ 50 ರನ್‌ಗಳಿಗೆ ಆಲೌಟ್ ಆಯಿತು. ಇದಾದ ಬಳಿಕ ಶುಭ್​ಮನ್ ಗಿಲ್ ಮತ್ತು ಇಶಾನ್ ಕಿಶನ್ ಕೇವಲ 6.1 ಓವರ್​ಗಳಲ್ಲಿ ಗುರಿ ತಲುಪಿ ತಂಡವನ್ನು ಚಾಂಪಿಯನ್ ಮಾಡಿದರು. ಇದು ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾದ ಆತ್ಮವಿಶ್ವಾಸವನ್ನು ಕೂಡ ಹೆಚ್ಚಿಸಿದೆ. ಆದರೆ ಆ ಇಬ್ಬರು ಆಟಗಾರರ ಇಂಜುರಿ ತಂಡಕ್ಕೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ.

ರೋಹಿತ್ ಪಡೆಗೆ ಬಿಗ್ ಶಾಕ್; ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ಸ್ಟಾರ್ ಆಲ್​ರೌಂಡರ್ ಅಲಭ್ಯ..!

ಅಕ್ಷರ್ ಪಟೇಲ್ ಸ್ಥಿತಿ ಏನು?

ಟೂರ್ನಿಯ ಆರಂಭದಲ್ಲೇ ಇಂಜುರಿಗೆ ತುತ್ತಾದ ಶ್ರೇಯಸ್ ಅಯ್ಯರ್ ಪಾಕ್ ವಿರುದ್ಧದ ಪಂದ್ಯದ ಬಳಿಕ ಯಾವುದೇ ಪಂದ್ಯವನ್ನು ಆಡಲು ಸಾಧ್ಯವಾಗಲಿಲ್ಲ. ಇವರ ನಂತರ ಬಾಂಗ್ಲಾದೇಶದ ವಿರುದ್ಧದ ಸೂಪರ್ 4 ಸುತ್ತಿನ ಪಂದ್ಯದಲ್ಲಿ ಗಾಯಗೊಂಡ ಎಡಗೈ ಸ್ಪಿನ್-ಆಲ್-ರೌಂಡರ್ ಅಕ್ಷರ್ ಪಟೇಲ್​ಗೆ ಫೈನಲ್‌ನಲ್ಲಿ ಆಡಲು ಸಾಧ್ಯವಾಗಲಿಲ್ಲ. ಇದೀಗ ಗೆಲುವಿನ ನಂತರ ಸುದ್ದಿಗೋಷ್ಠಿಯಲ್ಲಿ ನಾಯಕ ರೋಹಿತ್ ಇಬ್ಬರ ಗಾಯಗಳ ಕುರಿತು ಮಾಹಿತಿ ನೀಡಿದ್ದು, ‘ಅಕ್ಷರ್ ಇಂಜುರಿಯಿಂದ ಚೇತರಿಸಿಕೊಳ್ಳಲು ಬಹುಶಃ ಒಂದು ವಾರ ಅಥವಾ 10 ದಿನಗಳು ಬೇಕಾಗಬಹುದು’ ಎಂದಿದ್ದಾರೆ. ಇದರರ್ಥ ಅಕ್ಷರ್ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಆಡುವುದಿಲ್ಲ ಎಂಬುದು ಖಚಿತವಾಗಿದೆ.

ಏಕದಿನ ಸರಣಿ ಆಡ್ತಾರಾ ಶ್ರೇಯಸ್?

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಅಕ್ಷರ್ ಆಡುವುದು ಕಷ್ಟ ಎಂದು ರೋಹಿತ್ ಈಗಾಗಲೇ ಹೇಳಿದ್ದಾರೆ. ಇನ್ನು ಶ್ರೇಯಸ್ ಅಯ್ಯರ್ ಅವರ ಫಿಟ್ನೆಸ್ ಬಗ್ಗೆ ಮಾಹಿತಿ ನೀಡಿದ ರೋಹಿತ್, ‘ಅಯ್ಯರ್ ಬಹುತೇಕ ಚೇತರಿಸಿಕೊಂಡಿದ್ದಾರೆ. ಶ್ರೇಯಸ್ ಅಯ್ಯರ್ 99 ಪ್ರತಿಶತ ಫಿಟ್‌ನೆಸ್ ಸಾಭೀತುಪಡಿಸಿದ್ದಾರೆ. ಹೀಗಾಗಿ ಅವರು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಫಿಟ್ ಆಗಲಿದ್ದಾರೆ’ ಎಂದು ರೋಹಿತ್ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:10 am, Mon, 18 September 23

ತಾಜಾ ಸುದ್ದಿ
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​