IND vs AUS 3rd ODI: ಪೋಸ್ಟ್ ಮ್ಯಾಚ್​ನಲ್ಲಿ ಟ್ರೋಫಿ ಪಡೆದುಕೊಳ್ಳಲು ನಿರಾಕರಿಸಿದ ರೋಹಿತ್ ಶರ್ಮಾ: ಯಾಕೆ ನೋಡಿ

Rohit Sharma handing the trophy to KL Rahul: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ 2-1 ಮುನ್ನಡೆ ಪಡೆದುಕೊಂಡು ಸರಣಿ ವಶಪಡಿಸಿಕೊಂಡ ಭಾರತಕ್ಕೆ ಟ್ರೋಫಿ ಸಿಕ್ಕಿತು. ಆದರೆ, ನಾಯಕ ರೋಹಿತ್ ಶರ್ಮಾ ಟ್ರೋಫಿಯನ್ನು ಪಡೆದುಕೊಳ್ಳಲದೆ ಕೆಎಲ್ ರಾಹುಲ್ ಅವರನ್ನು ಕರೆದರು. ಮೊದಲ ಎರಡು ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದ ಕೆಎಲ್ ರಾಹುಲ್ ತಂಡಕ್ಕೆ ಗೆಲುವು ತಂದುಕೊಟ್ಟು ಸರಣಿ ವಶಪಡಿಸಿಕೊಳ್ಳಲು ಕಾರಣರಾಗಿದ್ದರು.

IND vs AUS 3rd ODI: ಪೋಸ್ಟ್ ಮ್ಯಾಚ್​ನಲ್ಲಿ ಟ್ರೋಫಿ ಪಡೆದುಕೊಳ್ಳಲು ನಿರಾಕರಿಸಿದ ರೋಹಿತ್ ಶರ್ಮಾ: ಯಾಕೆ ನೋಡಿ
Rohit Sharma and KL Rahul
Follow us
Vinay Bhat
|

Updated on: Sep 28, 2023 | 7:57 AM

ರೋಹಿತ್ ಶರ್ಮಾ (Rohit Sharma), ವಿರಾಟ್ ಕೊಹ್ಲಿ, ಜಸ್​ಪ್ರಿತ್ ಬುಮ್ರಾ ಅವರಂತಹ ಸ್ಟಾರ್ ಆಟಗಾರರ ಕಮ್​ಬ್ಯಾಕ್ ಹೊರತಾಗಿಯೂ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡಿತು. ರಾಜ್ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ 66 ರನ್​ಗಳ ಜಯ ಸಾಧಿಸಿ ಕ್ಲೀನ್ ಸ್ವೀಪ್ ಮುಖಭಂಗದಿಂದ ಪಾರಾಯಿತು. ಟೀಮ್ ಇಂಡಿಯಾ 2-1 ಅಂತರದಿಂದ ಸರಣಿ ವಶಪಡಿಸಿಕೊಂಡಿತು. ಆದರೆ, ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ನಾಯಕ ರೋಹಿತ್ ಶರ್ಮಾ ಟ್ರೋಫಿ ಪಡೆದುಕೊಳ್ಳಲು ನಿರಾಕರಿಸಿದರು.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ 2-1 ಮುನ್ನಡೆ ಪಡೆದುಕೊಂಡು ಸರಣಿ ವಶಪಡಿಸಿಕೊಂಡ ಭಾರತಕ್ಕೆ ಟ್ರೋಫಿ ಸಿಕ್ಕಿತು. ಆದರೆ, ನಾಯಕ ರೋಹಿತ್ ಶರ್ಮಾ ಟ್ರೋಫಿಯನ್ನು ಪಡೆದುಕೊಳ್ಳದೆ ಕೆಎಲ್ ರಾಹುಲ್ ಅವರನ್ನು ಕರೆದರು. ಮೊದಲ ಎರಡು ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದ ಕೆಎಲ್ ರಾಹುಲ್ ತಂಡಕ್ಕೆ ಗೆಲುವು ತಂದುಕೊಟ್ಟು ಸರಣಿ ವಶಪಡಿಸಿಕೊಳ್ಳಲು ಕಾರಣರಾಗಿದ್ದರು. ಇದಕ್ಕಾಗಿ ಹಿಟ್​ಮ್ಯಾನ್ ಸರಣಿ ಟ್ರೋಫಿಯನ್ನು ರಾಹುಲ್​ಗೆ ಹಸ್ತಾಂತರಿಸಿದರು. ರೋಹಿತ್ ನಡೆಗೆ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
ಮೂರನೇ ಏಕದಿನ ಪಂದ್ಯ ಮುಗಿದ ಬಳಿಕ ರೋಹಿತ್ ಶರ್ಮಾ ಆಡಿದ ಮಾತುಗಳೇನು ಕೇಳಿ
Image
ಸಿಕ್ಸ್​ ಸಿಡಿಸಿಯೇ ವಿಶ್ವ ದಾಖಲೆ ನಿರ್ಮಿಸಿದ ಹಿಟ್​ಮ್ಯಾನ್
Image
IND vs AUS: ಮೂರನೇ ಪಂದ್ಯ ಸೋತರೂ ಸರಣಿ ಗೆದ್ದ ಟೀಮ್ ಇಂಡಿಯಾ
Image
ವಿರಾಟ್ ಕೊಹ್ಲಿಯ ಆರ್ಭಟಕ್ಕೆ ಪಂಟರ್ ಪಾಂಟಿಂಗ್ ದಾಖಲೆ ಬ್ರೇಕ್

ನೇಪಾಳಿಗರ ಅಬ್ಬರಕ್ಕೆ ಟಿ20 ಕ್ರಿಕೆಟ್​ನ ದಾಖಲೆಗಳು ಧೂಳೀಪಟ

ರೋಹಿತ್ ಶರ್ಮಾ ಟ್ರೋಫಿಯನ್ನು ಕೆಎಲ್ ರಾಹುಲ್​ಗೆ ಹಸ್ತಾಂತರಿಸುತ್ತಿರುವ ವಿಡಿಯೋ:

ಟ್ರೋಫಿ ಹಿಡಿದುಕೊಂಡು ಎಲ್ಲ ಆಟಗಾರರು ಫೋಟೋಕ್ಕೆ ಪೋಸ್ ನೀಡುವಾಗ ಕೂಡ ನಾಯಕ ರೋಹಿತ್ ಶರ್ಮಾ, ಉಪನಾಯಕ ಕೆಎಲ್ ರಾಹುಲ್ ಸ್ಥಳೀಯ ಸೌರಾಷ್ಟ್ರ ಆಟಗಾರರಿಗೆ ಕರೆದು ಅವರಿಗೆ ಟ್ರೋಫಿಯನ್ನು ಹಸ್ತಾಂತರಿಸಿದರು. ಸೌರಾಷ್ಟ್ರ ಆಟಗಾರರಾದ ಧರ್ಮೇಂದ್ರ ಜಡೇಜಾ, ಪ್ರೇರಕ್ ಮಂಕಡ್, ವಿಶ್ವರಾಜ್ ಜಡೇಜಾ ಮತ್ತು ಹಾರ್ವಿಕ್ ದೇಸಾಯಿ ಅವರನ್ನು 3ನೇ ಏಕದಿನದಲ್ಲಿ ಡ್ರಿಂಕ್ಸ್ ಮತ್ತು ಫೀಲ್ಡಿಂಗ್‌ನೊಂದಿಗೆ ಟೀಮ್ ಇಂಡಿಯಾಗೆ ಬೆಂಬಲಿಸಲು ಸೇರಿಸಲಾಗಿತ್ತು. ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅವರ ಈ ನಡೆಗೆ ಅನೇಕ ಅಭಿಮಾನಿಗಳು ಮನಸೋತಿದ್ದಾರೆ.

ಸೌರಾಷ್ಟ್ರ ಆಟಗಾರರು ಟ್ರೋಫಿ ಎತ್ತಿಹಿಡಿದ ಫೋಟೋ:

ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ 50 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿತು. ಮಿಚೆಲ್ ಮಾರ್ಶ್ 84 ಎಸೆತಗಳಲ್ಲಿ 96, ಸ್ಟೀವ್ ಸ್ಮಿತ್ 74, ಲಾಬುಶೇನ್ 72 ಹಾಗೂ ವಾರ್ನರ್ 56 ರನ್ ಸಿಡಿಸಿದರು. ಭಾರತ ಪರ ಬುಮ್ರಾ 3 ವಿಕೆಟ್ ಪಡೆದರು. ಟಾರ್ಗೆಟ್ ಬೆನ್ನಟ್ಟಿದ ಭಾರತ 49.4 ಓವರ್​ಗಳಲ್ಲಿ 286 ರನ್​ಗೆ ಆಲೌಟ್ ಆಯಿತು. ತಂಡದ ಪರ ರೋಹಿತ್ 57 ಎಸೆತಗಳಲ್ಲಿ 81 ರನ್ ಸಿಡಿಸಿದರೆ, ಕೊಹ್ಲಿ 56 ಹಾಗೂ ಶ್ರೇಯಸ್ ಅಯ್ಯರ್ 48 ರನ್ ಗಳಿಸಿದರು. ಉಳಿದ ಬ್ಯಾಟರ್​ಗಳೆಲ್ಲ ವೈಫಲ್ಯ ಅನುಭವಿಸಿದರು. ಆಸೀಸ್ ಪರ ಗ್ಲೆನ್ ಮ್ಯಾಕ್ಸ್​ವೆಲ್ 4 ವಿಕೆಟ್ ಕಿತ್ತು ಮಿಂಚಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ