Rohit Sharma Record: ಕೊಹ್ಲಿ ದಾಖಲೆ ಉಡೀಸ್: ನಾಯಕನಾಗಿ ಮೊದಲ ಸರಣಿಯಲ್ಲೇ ರೋಹಿತ್ ಶರ್ಮಾ ಹಿಟ್

India vs New Zealand T20, Rohit Sharma: ಚುಟುಕು ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಅರ್ಧಶತಕ ಗಳಿಸಿದ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಈವರೆಗೆ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಹಿಟ್​ಮ್ಯಾನ್ ಈ ಸಾಧನೆ ಮಾಡಿದ್ದಾರೆ.

Rohit Sharma Record: ಕೊಹ್ಲಿ ದಾಖಲೆ ಉಡೀಸ್: ನಾಯಕನಾಗಿ ಮೊದಲ ಸರಣಿಯಲ್ಲೇ ರೋಹಿತ್ ಶರ್ಮಾ ಹಿಟ್
Rohit Sharma Record and Virat Kohli

ನ್ಯೂಜಿಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡ (India vs New Zealand) 73 ರನ್‌ಗಳಿಂದ ಗೆದ್ದು ಬೀಗಿದೆ. ಇದರಿಂದ 3 ಪಂದ್ಯಗಳ ಸರಣಿಯನ್ನು 3-0 ಯಿಂದ ಕ್ಲೀನ್‌ಸ್ವೀಪ್ ಮಾಡಿಕೊಂಡಿತು. ಸರಣಿ ಕ್ಲೀನ್‌ಸ್ವೀಪ್ ಸಾಧನೆಯೊಂದಿಗೆ ಹಲವು ದಾಖಲೆಗಳನ್ನು ಟೀಮ್ ಇಂಡಿಯಾ (Team India) ಮತ್ತು ರೋಹಿತ್ ಶರ್ಮ (Rohit Sharma) ಮಾಡಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಸರಣಿಗಳಲ್ಲಿ (T20I Cricket) ಅತಿಹೆಚ್ಚು ಕ್ಲೀನ್‌ಸ್ವೀಪ್ ಸಾಧಿಸಿದ ತಂಡಗಳ ಪೈಕಿ ಭಾರತ ತಂಡ ಪಾಕ್ ಜೊತೆ ಜಂಟಿ ಅಗ್ರಸ್ಥಾನಕ್ಕೇರಿತು. ಇತ್ತ ಟೂರ್ನಿಯುದ್ದಕ್ಕೂ ಅಮೋಘ ಪ್ರದರ್ಶನ ನೀಡಿದ ರೋಹಿತ್ ಎರಡು ಅರ್ಧಶತಕ ಸಹಿತಿ ಒಟ್ಟು 159 ರನ್ ಕಲೆಹಾಕಿ ಸರಣಿಶ್ರೇಷ್ಠ ಪ್ರಶಸ್ತಿಯನ್ನೂ ಬಾಜಿಕೊಂಡರು. ಇದರ ಜೊತೆಗೆ ವಿರಾಟ್ ಕೊಹ್ಲಿ (Virat Kohli) ದಾಖಲೆಯನ್ನು ಹಿಂದಿಕ್ಕಿ ವಿಶೇಷ ಸಾಧನೆ ಕೂಡ ಮಾಡಿದ್ದಾರೆ.

ಚುಟುಕು ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಅರ್ಧಶತಕ ಗಳಿಸಿದ ದಾಖಲೆಯನ್ನು ರೋಹಿತ್ ಶರ್ಮಾ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಈವರೆಗೆ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಅರ್ಧ ಶತಕ ಗಳಿಸುವ ಮೂಲಕ ರೋಹಿತ್ ಶರ್ಮಾ ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಈ ಹಿಂದೆ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ 50ಕ್ಕಿಂತ ಹೆಚ್ಚು ರನ್ ಗಳಿಸಿದ ದಾಖಲೆ, ಭಾರತ ಏಕದಿನ ಮತ್ತು ಟೆಸ್ಟ್ ತಂಡದ ನಾಯಕರಾಗಿರುವ ವಿರಾಟ್ ಕೊಹ್ಲಿ ಅವರ ಹೆಸರಲ್ಲಿತ್ತು. 95 ಟಿ20 ಪಂದ್ಯಗಳನ್ನಾಡಿರುವ ಕೊಹ್ಲಿ 3227 ರನ್‌ಗಳನ್ನು ಗಳಿಸಿದ್ದು 52.04ರ ಸರಾಸರಿಯಲ್ಲಿ 29 ಅರ್ಧ ಶತಕಗಳಿಸಿದ್ದಾರೆ. ಇತ್ತ 119 ಪಂದ್ಯಗಳ 111 ಇನಿಂಗ್ಸ್‌ಗಳಲ್ಲಿ ರೋಹಿತ್ 30 ಬಾರಿ ಐವತ್ತಕ್ಕಿಂತ ಹೆಚ್ಚು ರನ್ ಕಲೆಹಾಕಿದ್ದಾರೆ. ಇದರಲ್ಲಿ 4 ಶತಕಗಳು ಕೂಡ ಸೇರಿವೆ. ಉಳಿದಂತೆ ಪಾಕಿಸ್ತಾನದ ಬಾಬರ್ ಅಜಂ (25), ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ (22) ಮತ್ತು ನ್ಯೂಜಿಲೆಂಡ್‌ನ ಮಾರ್ಟಿನ್ ಗುಪ್ಟಿಲ್ (21) ಕ್ರಮವಾಗಿ 3, 4 ಮತ್ತು 5ನೇ ಸ್ಥಾನಗಳಲ್ಲಿದ್ದಾರೆ.

ಇನ್ನು ಮೂರನೇ ಟಿ20 ಪಂದ್ಯದಲ್ಲಿ ಮೂರು ಭರ್ಜರಿ ಸಿಕ್ಸರ್ ಸಿಡಿಸಿದ ರೋಹಿತ್ ಶರ್ಮಾ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 150 ಸಿಕ್ಸರ್ ಗಡಿ ದಾಟಿದರು. ಅತೀ ಹೆಚ್ಚು ಸಿಕ್ಸರ್ ಬಾರಿಸಿದವರ ಪಟ್ಟಿಯಲ್ಲಿ ರೋಹಿತ್ ಎರಡನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ 165 ಸಿಕ್ಸ್ ಗಳೊಂದಿಗೆ ನ್ಯೂಜಿಲೆಂಡ್​ನ ಮಾರ್ಟಿನ್ ಗಪ್ಟಿಲ್ ಇದ್ದಾರೆ.

ಕೋಲ್ಕತಾದ ಈಡನ್ ಗಾರ್ಡನ್ಸ್​ನಲ್ಲಿ ನಡೆದ ಮೂರನೇ ಟಿ20 ಪಂದ್ಯವನ್ನು ಭಾರತ 73 ರನ್​ಗಳ ಭಾರೀ ಅಂತರಿಂದ ಗೆಲುವು ಸಾಧಿಸಿತು. ಇದರೊಂದಿಗೆ ಟಿ20 ಸರಣಿಯನ್ನ ಭಾರತ 3-0 ಯಿಂದ ಗೆದ್ದುಕೊಂಡಿತು. ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್‌ನಿಂದಾಗಿ ಟೀಮ್ ಇಂಡಿಯಾ 184 ರನ್‌ಗಳನ್ನು ಗಳಿಸಲು ಶಕ್ತವಾಯಿತು. ಗೆಲ್ಲಲು 185 ರನ್ ಗುರಿ ಪಡೆದ ನ್ಯೂಜಿಲೆಂಡ್ ತಂಡ ಕೇವಲ 111 ರನ್​ಗೆ ಆಲೌಟ್ ಆಯಿತು.

Tamil Nadu vs Karnataka: ಇಂದು ಸೈಯದ್ ಮುಷ್ತಾಕ್ ಅಲಿ ಟಿ20 ಫೈನಲ್: ಪ್ರಶಸ್ತಿಗಾಗಿ ಕರ್ನಾಟಕ-ತಮಿಳುನಾಡು ಕಾದಾಟ

Rahul Dravid: ಕ್ಲೀನ್​ಸ್ವೀಪ್ ನಡುವೆ ಎದುರಾಳಿ ಆಟಗಾರರನ್ನು ಮರೆಯದೆ ರಾಹುಲ್ ದ್ರಾವಿಡ್: ಏನಂದ್ರು ಗೊತ್ತೇ?

(Rohit Sharma has created history with the most 50 plus scores surpasses Virat Kohli record)

Click on your DTH Provider to Add TV9 Kannada