AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 416 ರನ್​ಗಳು: ಹಿಟ್​ಮ್ಯಾನ್ ಸಿಡಿಲಬ್ಬರಕ್ಕೆ ಇದುವೇ ಸಾಕ್ಷಿ..!

Rohit Sharma: ವಿಶೇಷ ಎಂದರೆ ಟೀಮ್ ಇಂಡಿಯಾದ ಈ ರನ್​ ಸರದಾರರ ಪಟ್ಟಿಯಲ್ಲಿ ಎಲ್ಲರದ್ದೂ ಒಂದು ಲೆಕ್ಕವಾದರೆ, ಹಿಟ್​ಮ್ಯಾನ್ ರೋಹಿತ್ ಶರ್ಮಾದ್ದು ಮತ್ತೊಂದು ಲೆಕ್ಕ. ಏಕೆಂದರೆ ಈ ಬಾರಿಯ ವಿಶ್ವಕಪ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ರೋಹಿತ್ ಶರ್ಮಾ 10 ಇನಿಂಗ್ಸ್​ಗಳಲ್ಲಿ 1 ಶತಕ ಹಾಗೂ 3 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಬರೋಬ್ಬರಿ 416 ರನ್​ಗಳು: ಹಿಟ್​ಮ್ಯಾನ್ ಸಿಡಿಲಬ್ಬರಕ್ಕೆ ಇದುವೇ ಸಾಕ್ಷಿ..!
Rohit Sharma
TV9 Web
| Edited By: |

Updated on: Nov 16, 2023 | 8:39 PM

Share

ಈ ಬಾರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ರನ್ ಪ್ರವಾಹವೇ ಹರಿಸಿದ್ದಾರೆ. ಇದಕ್ಕೆ ಸಾಕ್ಷಿಯೇ ರನ್​ ಸರದಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಂಡಿರುವುದು.

ಇಲ್ಲಿ ವಿರಾಟ್ ಕೊಹ್ಲಿ 711 ರನ್​ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, 550 ರನ್​ ಪೇರಿಸಿರುವ ರೋಹಿತ್ ಶರ್ಮಾ 5ನೇ ಸ್ಥಾನದಲ್ಲಿದ್ದಾರೆ. ಇನ್ನು ಶ್ರೇಯಸ್ ಅಯ್ಯರ್ 526 ರನ್​ಗಳೊಂದಿಗೆ 6ನೇ ಸ್ಥಾನದಲ್ಲಿದ್ದಾರೆ. ಹಾಗೆಯೇ 386 ರನ್ ಕಲೆಹಾಕಿರುವ ಕೆಎಲ್ ರಾಹುಲ್ 14ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಟೀಮ್ ಇಂಡಿಯಾದ ಈ ರನ್​ ಸರದಾರರ ಪಟ್ಟಿಯಲ್ಲಿ ಎಲ್ಲರದ್ದೂ ಒಂದು ಲೆಕ್ಕವಾದರೆ, ಹಿಟ್​ಮ್ಯಾನ್ ರೋಹಿತ್ ಶರ್ಮಾದ್ದು ಮತ್ತೊಂದು ಲೆಕ್ಕ. ಏಕೆಂದರೆ ಈ ಬಾರಿಯ ವಿಶ್ವಕಪ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ರೋಹಿತ್ ಶರ್ಮಾ 10 ಇನಿಂಗ್ಸ್​ಗಳಲ್ಲಿ 1 ಶತಕ ಹಾಗೂ 3 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಇದೇ ವೇಳೆ ವಿರಾಟ್ ಕೊಹ್ಲಿ 3 ಶತಕ ಹಾಗೂ 5 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಮತ್ತೊಂದೆಡೆ ಶ್ರೇಯಸ್ ಅಯ್ಯರ್ 2 ಶತಕ ಹಾಗೂ 3 ಅರ್ಧಶತಕಗಳನ್ನು ಬಾರಿಸಿದ್ದಾರೆ. ಆದರೆ ಇತರೆ ಬ್ಯಾಟರ್​ಗಳ ನಡುವೆ ರೋಹಿತ್ ಶರ್ಮಾ ಅವರು ವಿಭಿನ್ನವಾಗಿ ನಿಲ್ಲುವುದು ತಮ್ಮ ಸಿಡಿಲಬ್ಬರದ ಬ್ಯಾಟಿಂಗ್​ನಿಂದಾಗಿ ಎಂಬುದು ವಿಶೇಷ.

ಏಕೆಂದರೆ ಈ ಬಾರಿಯ ವಿಶ್ವಕಪ್​ನಲ್ಲಿ ಹಿಟ್​ಮ್ಯಾನ್ ಕಲೆಹಾಕಿರುವ 550 ರನ್​ಗಳಲ್ಲಿ 416 ರನ್​ಗಳು ಬೌಂಡರಿಗಳಿಂದಲೇ ಮೂಡಿಬಂದಿವೆ.

ರೋಹಿತ್ ಶರ್ಮಾ 10 ಇನಿಂಗ್ಸ್​ಗಳಲ್ಲಿ ಒಟ್ಟು 62 ಫೋರ್​ಗಳನ್ನು ಹಾಗೂ 28 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕವೇ 416 ರನ್​ ಪೇರಿಸಿ ಅಬ್ಬರಿಸಿದ್ದಾರೆ. ಅಂದರೆ ಗಳಿಸಿದ ಒಟ್ಟು ರನ್​ಗಳ ಶೇ.75 ಕ್ಕಿಂತ ಹೆಚ್ಚಿನ ರನ್​ಗಳು ಬೌಂಡರಿಗಳಿಂದಲೇ ಕಲೆಹಾಕಿರುವುದು ವಿಶೇಷ.

ಇದೇ ವೇಳೆ 711 ರನ್​ ಪೇರಿಸಿರುವ ವಿರಾಟ್ ಕೊಹ್ಲಿ 9 ಸಿಕ್ಸ್ ಹಾಗೂ 64 ಫೋರ್​ಗಳನ್ನು ಬಾರಿಸಿದ್ದಾರೆ. ಹಾಗೆಯೇ ಶ್ರೇಯಸ್ ಅಯ್ಯರ್ 24 ಸಿಕ್ಸ್ ಹಾಗೂ 36 ಫೋರ್​ಗಳನ್ನು ಸಿಡಿಸಿದ್ದಾರೆ.

ಇದನ್ನೂ ಓದಿ: Virat Kohli: ಸಚಿನ್ ಅವರ 3 ವಿಶ್ವ ದಾಖಲೆ ಮುರಿದ ಕಿಂಗ್ ಕೊಹ್ಲಿ

ಇತ್ತ ಟೀಮ್ ಇಂಡಿಯಾಗೆ ಸಿಡಿಲಬ್ಬರದ ಆರಂಭ ಒದಗಿಸುವ ಮೂಲಕ ರೋಹಿತ್ ಶರ್ಮಾ ಉಳಿದ ಬ್ಯಾಟರ್​ಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಿರುವುದು ಸ್ಪಷ್ಟ. ಇದೇ ಕಾರಣದಿಂದಾಗಿ ಈ ಬಾರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದು ಬೃಹತ್ ಮೊತ್ತ ಪೇರಿಸಲು ಸಾಧ್ಯವಾಗುತ್ತಿದೆ ಎಂದರೆ ತಪ್ಪಾಗಲಾರದು.

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್