AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Gambhir: ರೋಹಿತ್ ಶರ್ಮಾ 5 ಟ್ರೋಫಿ ಗೆದ್ದಿದ್ದಾರೆ, ಕೆಲವರು ಒಂದೇ ಒಂದು ಕಪ್ ಗೆದ್ದಿಲ್ಲ..!

ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್​ ಅಭಿಯಾನ ಆರಂಭಿಸಲಿದೆ.

Gautam Gambhir: ರೋಹಿತ್ ಶರ್ಮಾ 5 ಟ್ರೋಫಿ ಗೆದ್ದಿದ್ದಾರೆ, ಕೆಲವರು ಒಂದೇ ಒಂದು ಕಪ್ ಗೆದ್ದಿಲ್ಲ..!
Gambhir-Virat Kohli-Rohit
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 18, 2023 | 6:16 PM

ಟೀಮ್ ಇಂಡಿಯಾ ಏಷ್ಯಾಕಪ್​ನಲ್ಲಿ ಚಾಂಪಿಯನ್​ ಪಟ್ಟ ಅಲಂಕರಿಸಿದೆ. ಈ ಭರ್ಜರಿ ಗೆಲುವಿನ ಬೆನ್ನಲ್ಲೇ ಭಾರತ ತಂಡದ ನಾಯಕ ರೋಹಿತ್ ಶರ್ಮಾ ನಾಯಕತ್ವವನ್ನು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹಾಡಿ ಹೊಗಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಗೌತಮ್ ಗಂಭೀರ್, ರೋಹಿತ್ ಶರ್ಮಾ ಅವರ ನಾಯಕತ್ವದ ಬಗ್ಗೆ ಯಾವುದೇ ನನಗೆ ಯಾವುದೇ ಅನುಮಾನವಿರಲಿಲ್ಲ. ಏಕೆಂದರೆ ರೋಹಿತ್ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್​ ಐಪಿಎಲ್​ನಲ್ಲಿ 5 ಬಾರಿ ಟ್ರೋಫಿ ಗೆದ್ದಿದೆ.

ಅದೇ ಕೆಲವರು ತಮ್ಮ ಕ್ಯಾಪ್ಟನ್ಸಿಯಲ್ಲಿ ಒಂದೇ ಒಂದು ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದ ಗುಣಗಳ ಬಗ್ಗೆ ಯಾವುದೇ ಸಂದೇಹವಿರಲಿಲ್ಲ ಎಂದು ಗಂಭೀರ್ ತಿಳಿಸಿದ್ದಾರೆ.

ಇಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವವನ್ನು ಹೊಗಳುವ ನೆಪದಲ್ಲಿ ಗಂಭೀರ್ ಪರೋಕ್ಷವಾಗಿ ವಿರಾಟ್ ಕೊಹ್ಲಿಯ ಕ್ಯಾಪ್ಟನ್ಸಿಯನ್ನು ಅಣಕಿಸಿದ್ದಾರೆ ಎನ್ನಲಾಗುತ್ತಿದೆ. ಏಕೆಂದರೆ ಕಿಂಗ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಯಾವುದೇ ಕಪ್ ಗೆದ್ದಿಲ್ಲ. ಅಷ್ಟೇ ಅಲ್ಲದೆ ಕೊಹ್ಲಿಯನ್ನು ಟೀಮ್ ಇಂಡಿಯಾ ನಾಯಕತ್ವದಿಂದ ಕೆಳಗಿಳಿಸಿ ರೋಹಿತ್ ಶರ್ಮಾಗೆ ಪಟ್ಟ ಕಟ್ಟಲಾಗಿದೆ. ಇದೇ ಕಾರಣದಿಂದಾಗಿ ಕೆಲವರು ಕಪ್ ಗೆದ್ದಿಲ್ಲ ಎಂದು ಅಣಕಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ರೋಹಿತ್ ಶರ್ಮಾ ಮುಂದಿದೆ ಅಗ್ನಿಪರೀಕ್ಷೆ:

ಮುಂದಿನ ಹದಿನೈದು ದಿನಗಳ ನಂತರ ರೋಹಿತ್ ಶರ್ಮಾ ಅವರ ನಿಜವಾದ ಪರೀಕ್ಷೆಯನ್ನು ಎದುರಿಸಲಿದ್ದಾರೆ. ಏಕೆಂದರೆ ಏಕದಿನ ವಿಶ್ವಕಪ್ ಶುರುವಾಗಲಿದ್ದು, ಇಲ್ಲಿ ಟೀಮ್ ಇಂಡಿಯಾ ಹೇಗೆ ಪ್ರದರ್ಶನ ನೀಡಲಿದೆ ಎಂಬುದರ ಬಗ್ಗೆ ರೋಹಿತ್ ಶರ್ಮಾ ಅವರ ನಾಯಕತ್ವ ನೆಲೆ ನಿಲ್ಲಲಿದೆ.

ಪ್ರಸ್ತುತ ತಂಡದಲ್ಲಿ 15-18 ಅತ್ಯುತ್ತಮ ಆಟಗಾರರಿದ್ದಾರೆ. ಅವರನ್ನು ಹೇಗೆ ಬಳಸಿಕೊಳ್ಳುತ್ತೀರಿ, ಅವರು ಹೇಗೆ ಪ್ರದರ್ಶನ ನೀಡಲಿದ್ದಾರೆ ಎಂಬುದು ಈಗ ಪ್ರಶ್ನಾರ್ಥಕ ಚಿಹ್ನೆಗಳಾಗಿ ಉಳಿದಿವೆ. ಒಂದು ವೇಳೆ ರೋಹಿತ್ ಶರ್ಮಾ ವಿಶ್ವಕಪ್​ನಲ್ಲಿ ವಿಫಲರಾದರೆ ಅವರ ಬಗ್ಗೆ ಕೂಡ ಟೀಕೆಗಳಿಗೆ ಗುರಿಯಾಗಲಿದ್ದಾರೆ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಪ್ರತಿ ವಿಶ್ವಕಪ್ ನಂತರ ತಂಡದ ನಾಯಕತ್ವದ ಬಗ್ಗೆ ಪ್ರಶ್ನೆಗಳನ್ನು ಎತ್ತಲಾಗುತ್ತದೆ. ಇದನ್ನು ಟೀಮ್ ಇಂಡಿಯಾದ ಮಾಜಿ ವಿರಾಟ್ ಕೊಹ್ಲಿ ಕೂಡ ಎದುರಿಸಿದ್ದರು. 2007 ರಲ್ಲಿ ರಾಹುಲ್ ದ್ರಾವಿಡ್​ ಕೂಡ ಇಂತಹ ಪ್ರಶ್ನೆಗಳಿಗೆ ಗುರಿಯಾಗಿದ್ದರು. ಇದೀಗ ರೋಹಿತ್ ಶರ್ಮಾ ಮುಂದಾಳತ್ವದಲ್ಲಿ ಭಾರತ ತಂಡ ವಿಶ್ವಕಪ್ ಆಡುತ್ತಿದೆ.

ಇದನ್ನೂ ಓದಿ: ಈ ಏಕೈಕ ವ್ಯಕ್ತಿಯಿಂದಾಗಿ ಇಂದು ಟೀಮ್ ಇಂಡಿಯಾ ಪರ ಆಡುತ್ತಿರುವ ಸಿರಾಜ್..!

2023 ರ ವಿಶ್ವಕಪ್​ನಲ್ಲಿ ಭಾರತ ತಂಡ ವಿಫಲರಾದರೆ ರೋಹಿತ್ ಶರ್ಮಾ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳು ಉದ್ಭವಿಸುತ್ತವೆ. ಆದರೆ ಪ್ರಸ್ತುತ ಪ್ರದರ್ಶನ ಗಮನಿಸಿದರೆ ವಿಶ್ವಕಪ್​ನ ಫೈನಲ್​ ಹಂತಕ್ಕೇರುವ ಸಾಮರ್ಥ್ಯ ಈ ತಂಡಕ್ಕಿದೆ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಏಕದಿನ ವಿಶ್ವಕಪ್ ಯಾವಾಗ ಶುರು?

ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್​ ಅಭಿಯಾನ ಆರಂಭಿಸಲಿದೆ.

ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ