ಭಾರತ ವಿಶ್ವಕಪ್ ತಂಡದಲ್ಲಿ ಬದಲಾವಣೆಯ ಸುಳಿವು ನೀಡಿದ ರೋಹಿತ್ ಶರ್ಮಾ..!

ICC World Cup 2023: ಏಷ್ಯಾಕಪ್‌ ಫೈನಲ್ ಪಂದ್ಯ ಮುಗಿದ ಬಳಿಕ ಮಾತನಾಡಿದ ರೋಹಿತ್, ಏಕದಿನ ವಿಶ್ವಕಪ್‌ಗಾಗಿ ಸ್ಪಿನ್ ಆಲ್​ರೌಂಡರ್​ಗಳ ಹುಡುಕಾಟ ಇನ್ನು ಮುಂದುವರೆದಿದೆ ಎಂದು ಹೇಳುವ ಮೂಲಕ ಅಶ್ವಿನ್ ಹಾಗೂ ಸುಂದರ್, ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ರೇಸ್​ನಲ್ಲಿದ್ದಾರೆ ಎಂಬುದನ್ನು ದೃಢಪಡಿಸಿದ್ದಾರೆ.

ಭಾರತ ವಿಶ್ವಕಪ್ ತಂಡದಲ್ಲಿ ಬದಲಾವಣೆಯ ಸುಳಿವು ನೀಡಿದ ರೋಹಿತ್ ಶರ್ಮಾ..!
ರೋಹಿತ್ ಶರ್ಮಾ
Follow us
ಪೃಥ್ವಿಶಂಕರ
|

Updated on:Sep 18, 2023 | 10:20 AM

ಹಾಲಿ ಚಾಂಪಿಯನ್ಸ್ ಶ್ರೀಲಂಕಾ ತಂಡವನ್ನು ಮಣಿಸಿ ಏಷ್ಯಾಕಪ್ (Asia Cup 2023) ಎತ್ತಿ ಹಿಡಿದಿರುವ ಟೀಂ ಇಂಡಿಯಾ ಇದೀಗ ವಿಶ್ವಕಪ್​ನತ್ತ ತನ್ನ ದೃಷ್ಟಿ ನೆಟ್ಟಿದೆ. ಭಾರತದಲ್ಲೇ ನಡೆಯುತ್ತಿರುವ ಈ ಮಹಾ ಸಂಭ್ರಮದಲ್ಲಿ ಟೀಂ ಇಂಡಿಯಾ (Team India) ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಈ ವಿಶ್ವಕಪ್‌ಗಾಗಿ (World Cup 2023) ಟೀಂ ಇಂಡಿಯಾ 15 ಸದಸ್ಯರ ತಂಡವನ್ನೂ ಸಹ ಈ ಹಿಂದೆ ಪ್ರಕಟಿಸಿತ್ತು. ಆದರೀಗ ಈ ವಿಶ್ವಕಪ್ ತಂಡದಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳ ಸುಳಿವನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ನೀಡಿದ್ದಾರೆ. ಏಷ್ಯಾಕಪ್‌ ಫೈನಲ್ ಪಂದ್ಯ ಮುಗಿದ ಬಳಿಕ ಮಾತನಾಡಿದ ರೋಹಿತ್, ಏಕದಿನ ವಿಶ್ವಕಪ್‌ಗಾಗಿ ಸ್ಪಿನ್ ಆಲ್​ರೌಂಡರ್​ಗಳ ಹುಡುಕಾಟ ಇನ್ನು ಮುಂದುವರೆದಿದೆ ಎಂದು ಹೇಳುವ ಮೂಲಕ ಅಶ್ವಿನ್ ಹಾಗೂ ಸುಂದರ್ (R Ashwin and Washington Sundar), ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ರೇಸ್​ನಲ್ಲಿದ್ದಾರೆ ಎಂಬುದನ್ನು ದೃಢಪಡಿಸಿದ್ದಾರೆ.

ಅಕ್ಷರ್ ಪಟೇಲ್​ಗೆ ಇಂಜುರಿ

ವಾಸ್ತವವಾಗಿ ಬಾಂಗ್ಲಾದೇಶ ವಿರುದ್ಧದ ಏಷ್ಯಾಕಪ್‌ ಸೂಪರ್ 4 ಸುತ್ತಿನ ಕೊನೆಯ ಪಂದ್ಯದಲ್ಲಿ ತಂಡದ ಆಲ್​ರೌಂಡರ್ ಅಕ್ಷರ್ ಪಟೇಲ್ ಇಂಜುರಿಗೆ ತುತ್ತಾದರು. ಹೀಗಾಗಿ ಅವರು ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಅವರ ಬದಲಿಗೆ ವಾಷಿಂಗ್ಟನ್ ಸುಂದರ್ ಅವರನ್ನು ತಂಡದಲ್ಲಿ ಆಡಿಸಲಾಯಿತು. ಆದರೆ ಪಂದ್ಯ ನಿರೀಕ್ಷೆಗೂ ಮೀರಿದ ರೀತಿಯಲ್ಲಿ ಕೊನೆಗೊಂಡಿದ್ದರಿಂದ ಸುಂದರ್​ಗೆ ಪಂದ್ಯದಲ್ಲಿ ಬೌಲಿಂಗ್ ಆಗಲಿ ಅಥವಾ ಬ್ಯಾಟಿಂಗ್ ಆಗಲಿ ಮಾಡಲು ಸಾಧ್ಯವಾಗಲಿಲ್ಲ.

ಒಬ್ಬರು ಫಿಟ್, ಮತ್ತೊಬ್ಬರು ಡೌಟ್! ಅಕ್ಷರ್- ಅಯ್ಯರ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್

ಇನ್ನು ಪಂದ್ಯ ಮುಗಿದ ಬಳಿಕ ಅಕ್ಷರ್ ಪಟೇಲ್ ಅವರ ಇಂಜುರಿ ಬಗ್ಗೆ ಮಾಹಿತಿ ನೀಡಿದ ರೋಹಿತ್, ಅಕ್ಷರ್ ಇಂಜುರಿಯಿಂದ ಚೇತರಿಸಿಕೊಳ್ಳಲು 7 ರಿಂದ 10 ದಿನಗಳ ಕಾಲ ತೆಗೆದುಕೊಳ್ಳಬಹುದು. ಹೀಗಾಗಿ ಅವರು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಆಡುವುದಿಲ್ಲ ಎಂದಿದ್ದರು.

ವಿಶ್ವಕಪ್ ತಂಡದಲ್ಲಿ ಬದಲಾವಣೆ?

ಹಾಗೆಯೇ ವಿಶ್ವಕಪ್ ತಂಡದಲ್ಲಾಗಬಹುದಾದ ಬದಲಾವಣೆಗಳ ಬಗ್ಗೆಯೂ ಮಾತನಾಡಿದ ರೋಹಿತ್, ‘ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಸುಂದರ್ ಸ್ಪರ್ಧೆಯಲ್ಲಿದ್ದಾರೆ. ಅಲ್ಲದೆ ಈ ಬಗ್ಗೆ ನಾನು ಅಶ್ವಿನ್ ಅವರೊಂದಿಗೆ ಫೋನಿನಲ್ಲಿ ಮಾತನಾಡುತ್ತಿರುವುದಾಗಿಯೂ ಹೇಳಿಕೊಂಡರು. ಸ್ಪಿನ್-ಬೌಲಿಂಗ್ ಆಲ್‌ರೌಂಡರ್‌ಗಳ ಖೋಟಾದಲ್ಲಿ ತಂಡದಲ್ಲಿ ಸ್ಥಾನ ಪಡೆಯಲು ಎಲ್ಲರೂ ಸಾಲಿನಲ್ಲಿದ್ದಾರೆ ಎಂದು ನಾನು ಭಾವಿಸುತ್ತೇನೆ. ಪ್ರಾಮಾಣಿಕವಾಗಿ ಅಶ್ವಿನ್ ಅವರೊಂದಿಗೆ ಫೋನ್ನಲ್ಲಿ ಮಾತನಾಡುತ್ತಿದ್ದೇನೆ. ಅವರೊಂದಿಗೆ ಸುಂದರ್ ಕೂಡ ಪೈಪೋಟಿಯಲ್ಲಿದ್ದಾರೆ. ಚೆಂಡು ಮತ್ತು ಬ್ಯಾಟ್‌ ಎರಡರಲ್ಲೂ ಕೊಡುಗೆ ನೀಡುವ ಹುಡುಗರು ನಮಗೆ ಬೇಕಾಗಿದ್ದಾರೆ’ ಎಂದು ರೋಹಿತ್ ಸುದ್ದಿಗಾರರಿಗೆ ತಿಳಿಸಿದರು.

ಮೂವರು ಸ್ಪಿನ್ನರ್ಸ್​

ಪ್ರಸ್ತುತವಾಗಿ ಭಾರತ ವಿಶ್ವಕಪ್‌ ತಂಡದಲ್ಲಿ ಆಯ್ಕೆಯಾಗಿರುವ 15 ಜನರ ತಂಡದಲ್ಲಿ ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ ಮತ್ತು ಅಕ್ಸರ್ ಅವರ ರೂಪದಲ್ಲಿ ಮೂವರು ಸ್ಪಿನ್ನರ್‌ಗಳನ್ನು ಆಯ್ಕೆ ಮಾಡಿದೆ. ಆದಾಗ್ಯೂ, ತಾತ್ಕಾಲಿಕ ತಂಡದಲ್ಲಿ ಬದಲಾವಣೆ ಮಾಡಲು ಅವರಿಗೆ ಸೆಪ್ಟೆಂಬರ್ 28 ರವರೆಗೆ ಸಮಯವಿದೆ. ಹೀಗಾಗಿ ಅಕ್ಸರ್ ಸಮಯಕ್ಕೆ ಸರಿಯಾಗಿ ಚೇತರಿಸಿಕೊಳ್ಳಲು ವಿಫಲವಾದರೆ, ಭಾರತವು ಸುಂದರ್ ಅಥವಾ ಅಶ್ವಿನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಗಳಿವೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:18 am, Mon, 18 September 23

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ