- TV9 Kannada Sports Cricket news Rohit Sharma's Historic ODI 50: Surpasses Dravid, Ganguly; Oldest Indian to Score Half-Century
1100 ಬೌಂಡರಿಗಳು, 95 ನೇ ಐವತ್ತು ಪ್ಲಸ್ ಸ್ಕೋರ್! ರೋಹಿತ್ ಬರೆದ ದಾಖಲೆಗಳ ಪಟ್ಟಿ
Rohit Sharma's Historic ODI 50: ಚೆನ್ನೈನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಅಂತಿಮ ODI ಪಂದ್ಯದಲ್ಲಿ ರೋಹಿತ್ ಶರ್ಮಾ ಇತಿಹಾಸ ಸೃಷ್ಟಿಸಿದ್ದಾರೆ. 79 ರನ್ ಗಳಿಸಿದ ರೋಹಿತ್ 95 ನೇ ಐವತ್ತು ಪ್ಲಸ್ ಸ್ಕೋರ್ ದಾಖಲಿಸಿ ರಾಹುಲ್ ದ್ರಾವಿಡ್ ಮತ್ತು ಸೌರವ್ ಗಂಗೂಲಿ ಅವರ ದಾಖಲೆಗಳನ್ನು ಹಿಂದಿಕ್ಕಿದರು. ಏಕದಿನದಲ್ಲಿ ಅರ್ಧಶತಕ ಗಳಿಸಿದ ಅತ್ಯಂತ ಹಿರಿಯ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಅಲ್ಲದೆ, ಏಕದಿನದಲ್ಲಿ 1100 ಬೌಂಡರಿಗಳನ್ನು ಪೂರೈಸಿ ಹಲವು ಮೈಲಿಗಲ್ಲುಗಳನ್ನು ಸ್ಥಾಪಿಸಿದರು.
Updated on: Jun 20, 2026 | 9:52 PM

ಚೆನ್ನೈನಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಹೊಸ ಇತಿಹಾಸ ಬರೆದರು. ಈ ಪಂದ್ಯದಲ್ಲಿ ಅದ್ಭುತ ಅರ್ಧಶತಕದ ಇನ್ನಿಂಗ್ಸ್ ಆಡಿದ ರೋಹಿತ್ಗೆ ಇದು ಈ ವರ್ಷದ ಮೊದಲ ಅರ್ಧಶತಕವಾಗಿದೆ. ಕಳೆದ ವರ್ಷದ ಡಿಸೆಂಬರ್ನಲ್ಲಿ ಏಕದಿನದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ್ದ ರೋಹಿತ್ ಅಂದಿನಿಂದ ಒಂದೇ ಒಂದು ಪಂದ್ಯದಲ್ಲಿ ಅರ್ಧಶತಕ ಬಾರಿಸಿರಲಿಲ್ಲ (PC-PTI).

ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯ ಮೊದಲೆರಡು ಪಂದ್ಯಗಳಲ್ಲೂ ರೋಹಿತ್ಗೆ ಅರ್ಧಶತಕ ಬಾರಿಸಲು ಸಾಧ್ಯವಾಗಿರಲಿಲ್ಲ. ಆದರೆ ಕೊನೆಯ ಪಂದ್ಯದಲ್ಲಿ 69 ಎಸೆತಗಳನ್ನು ಎದುರಿಸಿದ ರೋಹಿತ್ 9 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 79 ರನ್ ಬಾರಿಸಿ ಔಟಾದರು. ಈ ಅರ್ಧಶತಕದ ಮೂಲಕ ರೋಹಿತ್ ಟೀಂ ಇಂಡಿಯಾದ ದಂತಕಥೆಗಳಾದ ರಾಹುಲ್ ದ್ರಾವಿಡ್ ಮತ್ತು ಸೌರವ್ ಗಂಗೂಲಿ ಅವರ ಸಾರ್ವಕಾಲಿಕ ದಾಖಲೆಗಳನ್ನು ಮೀರಿಸಿದರು (PC-PTI).

ವಾಸ್ತವವಾಗಿ ಇದು ಏಕದಿನ ಪಂದ್ಯಗಳಲ್ಲಿ ರೋಹಿತ್ ಅವರ 95 ನೇ ಐವತ್ತು ಪ್ಲಸ್ (50+) ಸ್ಕೋರ್ ಆಗಿದೆ. ಇದರೊಂದಿಗೆ, ರೋಹಿತ್ 94 ಬಾರಿ ಈ ಸಾಧನೆ ಮಾಡಿದ್ದ ರಾಹುಲ್ ದ್ರಾವಿಡ್ ಮತ್ತು 93 ಬಾರಿ ಈ ಸಾಧನೆ ಮಾಡಿದ್ದ ಸೌರವ್ ಗಂಗೂಲಿ ಅವರನ್ನು ಹಿಂದಿಕ್ಕಿದರು. ಇದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಬಾರಿಸಿದ ಮೂರನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು (PC-PTI).

ಭಾರತ ಪರ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು 50+ ಸ್ಕೋರ್‌ಗಳನ್ನು ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ (145) ಅಗ್ರಸ್ಥಾನದಲ್ಲಿದ್ದರೆ, ರನ್ ಮೆಷಿನ್ ವಿರಾಟ್ ಕೊಹ್ಲಿ (131) ಎರಡನೇ ಸ್ಥಾನದಲ್ಲಿದ್ದಾರೆ. ಇದೀಗ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ದ್ರಾವಿಡ್ ಹಾಗೂ ಗಂಗೂಲಿ ಅವರನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ್ದಾರೆ (PC-PTI).

ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತೊಂದು ಅದ್ಭುತ ದಾಖಲೆ ನಿರ್ಮಿಸಿದ್ದು, 39 ವರ್ಷ 51 ದಿನಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಅರ್ಧಶತಕ ಬಾರಿಸಿದ ಅತ್ಯಂತ ಹಿರಿಯ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 1989 ರಲ್ಲಿ ಪಾಕಿಸ್ತಾನ ವಿರುದ್ಧ 39 ವರ್ಷ 21 ದಿನಗಳಲ್ಲಿ ಅರ್ಧಶತಕ ಗಳಿಸಿದ್ದ ಮೊಹಿಂದರ್ ಅಮರನಾಥ್ ಅವರ ದೀರ್ಘಕಾಲದ ದಾಖಲೆಯನ್ನು ರೋಹಿತ್ ಇಂದು ಮುರಿದಿದ್ದಾರೆ (PC-PTI).

ಹಾಗೆಯೇ ಈ ಪಂದ್ಯದಲ್ಲಿ 9 ಬೌಂಡರಿಗಳನ್ನು ಬಾರಿಸಿದ ರೋಹಿತ್, ಈ ಬೌಂಡರಿಗಳ ಸಹಾಯದಿಂದ ಏಕದಿನದಲ್ಲಿ 1100 ಬೌಂಡರಿಗಳನ್ನು ಪೂರ್ಣಗೊಳಿಸಿದರು. ಇದರೊಂದಿಗೆ, ಅವರು ಸಚಿನ್ ತೆಂಡೂಲ್ಕರ್ ಮತ್ತು ಸನತ್ ಜಯಸೂರ್ಯ ಅವರ ವಿಶೇಷ ಪಟ್ಟಿಗೆ ಸೇರಿದರು. ಪ್ರಸ್ತುತ ಈ ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿರುವ ರೋಹಿತ್, ಈ ಸಾಧನೆ ಮಾಡಿದ ಭಾರತೀಯರ ಪಟ್ಟಿಯಲ್ಲಿ 5ನೇ ಸ್ಥಾನವನ್ನು ಪಡೆದಿಕೊಂಡಿದ್ದಾರೆ (PC-PTI).




