Rohit Sharma: ರೋಹಿತ್ ಶರ್ಮಾ ಜೊತೆ ಇಬ್ಬರು ಆಟಗಾರರ ರಿ-ಎಂಟ್ರಿ
India vs Sri Lanka 2024: ಭಾರತ ಮತ್ತು ಶ್ರೀಲಂಕಾ ನಡುವಣ ಸರಣಿಯು ಜುಲೈ 27 ರಿಂದ ಶುರುವಾಗಲಿದೆ. ಈ ಸರಣಿಯ ಮೂಲಕ ಟೀಮ್ ಇಂಡಿಯಾದ ನೂತನ ಕೋಚ್ ಗೌತಮ್ ಗಂಭೀರ್ ಕಾರ್ಯಾರಂಭ ಮಾಡಲಿದ್ದಾರೆ. ಹೀಗಾಗಿ ಗೌತಿ ಪಾಲಿಗೆ ಇದು ತುಂಬಾ ಮಹತ್ವದ್ದು ಸರಣಿ. ಇನ್ನು ಈ ಸರಣಿಯಲ್ಲಿ ಭಾರತ ತಂಡವು 3 ಏಕದಿನ ಮತ್ತು 3 ಟಿ20 ಪಂದ್ಯಗಳನ್ನಾಡಲಿದೆ.
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆ ಹಿಟ್ಮ್ಯಾನ್ ಈ ಸರಣಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿತ್ತು. ಆದರೀಗ ಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯಲು ಇಚ್ಛಿಸಿದ್ದಾರೆ ಎಂದು ತಿಳಿದು ಬಂದಿದೆ.
ರೋಹಿತ್ ಶರ್ಮಾ ಜೊತೆಗೆ ಈ ಸರಣಿಯ ಮೂಲಕ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರೆ. ಈ ಇಬ್ಬರು ಆಟಗಾರರನ್ನು ಈ ಬಾರಿಯ ಟಿ20 ವಿಶ್ವಕಪ್ಗೆ ಆಯ್ಕೆ ಮಾಡಿರಲಿಲ್ಲ.
ಇದೀಗ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೂಲಕ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಮತ್ತೆ ಭಾರತ ತಂಡದದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಾಗ್ಯೂ ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಅನುಮಾನ.
ಇಬ್ಬರಿಗೆ ವಿಶ್ರಾಂತಿ:
ಶ್ರೀಲಂಕಾ ವಿರುದ್ಧದ ಸರಣಿಯಿಂದ ಟೀಮ್ ಇಂಡಿಯಾದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬುಮ್ರಾ ವಿಶ್ರಾಂತಿ ಪಡೆದಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಈ ಇಬ್ಬರು ಆಟಗಾರರು ಈ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.
ಇಲ್ಲಿ ವಿರಾಟ್ ಕೊಹ್ಲಿ ಏಕದಿನ ಸರಣಿಯಿಂದ ಹೊರಗುಳಿದರೆ, ಜಸ್ಪ್ರೀತ್ ಬುಮ್ರಾ ಏಕದಿನ ಮತ್ತು ಟಿ20 ಸರಣಿಗಳಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಬುಮ್ರಾ ಸ್ಥಾನದಲ್ಲಿ ಮೊಹಮ್ಮದ್ ಶಮಿ ಅಥವಾ ಖಲೀಲ್ ಅಹ್ಮದ್ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ.
ಭಾರತ – ಶ್ರೀಲಂಕಾ ಸರಣಿ ಯಾವಾಗ?
ಭಾರತ ಮತ್ತು ಶ್ರೀಲಂಕಾ ನಡುವಣ ಸರಣಿಯು ಜುಲೈ 27 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 6 ಪಂದ್ಯಗಳನ್ನಾಡಲಾಗುತ್ತದೆ. ಮೊದಲು 3 ಪಂದ್ಯಗಳ ಟಿ20 ಸರಣಿ ನಡೆದರೆ, ಆ ಬಳಿಕ ಏಕದಿನ ಸರಣಿ ಜರುಗಲಿದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…
ಭಾರತ ಮತ್ತು ಶ್ರೀಲಂಕಾ ಸರಣಿ ವೇಳಾಪಟ್ಟಿ:
- ಮೊದಲ ಟಿ20: ಜುಲೈ 27 (ಪಲ್ಲೆಕೆಲೆ) – 7 PM IST
- ಎರಡನೇ ಟಿ20: ಜುಲೈ 28 (ಪಲ್ಲೆಕೆಲೆ) – 7 PM IST
- ಮೂರನೇ ಟಿ20: ಜುಲೈ 30 (ಪಲ್ಲೆಕೆಲೆ) – 7 PM IST
ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?
- ಮೊದಲ ಏಕದಿನ: ಆಗಸ್ಟ್ 2 (ಕೊಲಂಬೊ) – 2.30 PM IST
- ಎರಡನೇ ಏಕದಿನ: ಆಗಸ್ಟ್ 4 (ಕೊಲಂಬೊ) – 2.30 PM IST
- ಮೂರನೇ ಏಕದಿನ: ಆಗಸ್ಟ್ 7 (ಕೊಲಂಬೊ) – 2.30 PM IST