ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆ ಹಿಟ್ಮ್ಯಾನ್ ಈ ಸರಣಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿತ್ತು. ಆದರೀಗ ಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯಲು ಇಚ್ಛಿಸಿದ್ದಾರೆ ಎಂದು ತಿಳಿದು ಬಂದಿದೆ.
ರೋಹಿತ್ ಶರ್ಮಾ ಜೊತೆಗೆ ಈ ಸರಣಿಯ ಮೂಲಕ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರೆ. ಈ ಇಬ್ಬರು ಆಟಗಾರರನ್ನು ಈ ಬಾರಿಯ ಟಿ20 ವಿಶ್ವಕಪ್ಗೆ ಆಯ್ಕೆ ಮಾಡಿರಲಿಲ್ಲ.
ಇದೀಗ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೂಲಕ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಮತ್ತೆ ಭಾರತ ತಂಡದದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಾಗ್ಯೂ ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವುದು ಅನುಮಾನ.
ಶ್ರೀಲಂಕಾ ವಿರುದ್ಧದ ಸರಣಿಯಿಂದ ಟೀಮ್ ಇಂಡಿಯಾದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬುಮ್ರಾ ವಿಶ್ರಾಂತಿ ಪಡೆದಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಈ ಇಬ್ಬರು ಆಟಗಾರರು ಈ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.
ಇಲ್ಲಿ ವಿರಾಟ್ ಕೊಹ್ಲಿ ಏಕದಿನ ಸರಣಿಯಿಂದ ಹೊರಗುಳಿದರೆ, ಜಸ್ಪ್ರೀತ್ ಬುಮ್ರಾ ಏಕದಿನ ಮತ್ತು ಟಿ20 ಸರಣಿಗಳಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಬುಮ್ರಾ ಸ್ಥಾನದಲ್ಲಿ ಮೊಹಮ್ಮದ್ ಶಮಿ ಅಥವಾ ಖಲೀಲ್ ಅಹ್ಮದ್ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ.
ಭಾರತ ಮತ್ತು ಶ್ರೀಲಂಕಾ ನಡುವಣ ಸರಣಿಯು ಜುಲೈ 27 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 6 ಪಂದ್ಯಗಳನ್ನಾಡಲಾಗುತ್ತದೆ. ಮೊದಲು 3 ಪಂದ್ಯಗಳ ಟಿ20 ಸರಣಿ ನಡೆದರೆ, ಆ ಬಳಿಕ ಏಕದಿನ ಸರಣಿ ಜರುಗಲಿದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…
ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?