AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅದು ನನಗೆ ಮುಖ್ಯವಲ್ಲ’; ನಿವೃತ್ತಿ ವದಂತಿ ಬಗ್ಗೆ ಮೌನ ಮುರಿದ ರೋಹಿತ್

Rohit Sharma's Fiery Reply to Retirement Rumors: ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಐತಿಹಾಸಿಕ ಶತಕ ಸಿಡಿಸಿ, ತಮ್ಮ ನಿವೃತ್ತಿ ವದಂತಿಗಳಿಗೆ ಬ್ಯಾಟ್​ನಿಂದಲೇ ಉತ್ತರ ನೀಡಿದ್ದಾರೆ. ಏಕದಿನ ತಂಡದಲ್ಲಿ ತಮ್ಮ ಸ್ಥಾನದ ಬಗ್ಗೆ ಕೇಳಿಬರುತ್ತಿದ್ದ ಟೀಕೆಗಳಿಗೆ ಪ್ರತಿಕ್ರಿಯಿಸಿದ ಹಿಟ್‌ಮ್ಯಾನ್, ಈ ರೀತಿಯ ಮಾತುಗಳು ತನ್ನ ಆಟದ ಮೇಲೆ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ. ದೇಶಕ್ಕಾಗಿ ಆಡುವುದು ಮತ್ತು ರನ್ ಗಳಿಸುವುದೇ ತನ್ನ ಗುರಿ ಎಂದು ಹೇಳುವ ಮೂಲಕ, ತಂಡಕ್ಕೆ ಕೊಡುಗೆ ನೀಡುವ ಬಗ್ಗೆ ತನ್ನ ಬದ್ಧತೆಯನ್ನು ಸ್ಪಷ್ಟಪಡಿಸಿದ್ದಾರೆ.

‘ಅದು ನನಗೆ ಮುಖ್ಯವಲ್ಲ’; ನಿವೃತ್ತಿ ವದಂತಿ ಬಗ್ಗೆ ಮೌನ ಮುರಿದ ರೋಹಿತ್
Rohit SharmaImage Credit source: BCCI X
ಪೃಥ್ವಿಶಂಕರ
|

Updated on:Jul 20, 2026 | 7:22 PM

Share

ಇಂಗ್ಲೆಂಡ್‌ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಐತಿಹಾಸಿಕ ಶತಕ ಬಾರಿಸುವ ಮೂಲಕ ರೋಹಿತ್ ಶರ್ಮಾ (Rohit Sharma) ತಮ್ಮ ನಿವೃತ್ತಿ ಕೇಳುತ್ತಿದ್ದವರಿಗೆ ಬ್ಯಾಟ್​ನಿಂದಲೇ ಉತ್ತರ ನೀಡಿದ್ದಾರೆ. ಆದಾಗ್ಯೂ ಏಕದಿನ ತಂಡದಲ್ಲಿ ರೋಹಿತ್ ಅವರ ಸ್ಥಾನ ಇನ್ನು ಪ್ರಶ್ನಾರ್ಥಕವಾಗಿಯೇ ಉಳಿದಿದೆ. ಪ್ರತಿ ಸರಣಿಯ ಕೊನೆಯ ಪಂದ್ಯದಲ್ಲಿ ಮಿಂಚುವ ರೋಹಿತ್ ಉಳಿದ ಪಂದ್ಯಗಳಲ್ಲಿ ಸಪ್ಪೆ ಪ್ರದರ್ಶನ ನೀಡುತ್ತಾರೆ. ಹೀಗಾಗಿ ಕೊನೆಯ ಪಂದ್ಯದಲ್ಲಿ ಒಂದೊಳ್ಳೆ ಇನ್ನಿಂಗ್ಸ್ ಆಡಿ ಮುಂದಿನ ಸರಣಿಗೆ ತಂಡದಲ್ಲಿ ಸ್ಥಾನ ಪಡೆಯುತ್ತಿದ್ದಾರೆ ಎಂಬ ಆರೋಪವೂ ರೋಹಿತ್ ಮೇಲೆ ಇದೆ. ಇದೆಲ್ಲದರ ನಡುವೆ ಲಾರ್ಡ್ಸ್‌ನಲ್ಲಿ (Lord’s) ಕೊನೆಯ ಏಕದಿನ ಪಂದ್ಯ ಮುಗಿದ ಬಳಿಕ ತಮ್ಮ ನಿವೃತ್ತಿ ವದಂತಿಯ ಬಗ್ಗೆ ಮಾತನಾಡಿದ ರೋಹಿತ್ ತಮ್ಮನ್ನು ಟೀಕಿಸುವವರಿಗೆ ಸರಿಯಾಗಿಯೇ ಉತ್ತರ ನೀಡಿದ್ದಾರೆ.

ಟೀಕೆಗಳು ಕೇಳಿಬರುತ್ತಲೇ ಇವೆ

ಲಾರ್ಡ್ಸ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 138 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ ರೋಹಿತ್ ಶರ್ಮಾ, ಪಂದ್ಯದ ನಂತರ ಬಿಸಿಸಿಐ ಟಿವಿಯೊಂದಿಗಿನ ಸಂಭಾಷಣೆಯಲ್ಲಿ, ಹೊರಗಿನ ಚರ್ಚೆಗಳು ತಮ್ಮ ಆಟದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ. ‘ನಾನು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದಾಗಿನಿಂದಲೂ ಈ ರೀತಿಯ ಟೀಕೆಗಳು ಕೇಳಿಬರುತ್ತಲೇ ಇವೆ. ನಾನು ಆಡುವುದನ್ನು ನಿಲ್ಲಿಸುವವರೆಗೂ ಈ ರೀತಿಯ ಟೀಕೆಗಳು ಹರಿದುಬರುವುದು ಮುಂದುವರಿಯುತ್ತದೆ. ಹೀಗಾಗಿ ನನಗೆ ಈ ರೀತಿಯ ಟೀಕೆಗಳು ಮತ್ತು ವದಂತಿಗಳು ಮುಖ್ಯವಲ್ಲ. ನನಗೆ, ಅತ್ಯಂತ ಮುಖ್ಯವಾದ ವಿಷಯವೆಂದರೆ ನಾನು ಮೈದಾನದಲ್ಲಿ ಏನು ಮಾಡುತ್ತೇನೆ ಮತ್ತು ತಂಡದ ಯಶಸ್ಸಿಗೆ ನಾನು ಎಷ್ಟು ಕೊಡುಗೆ ನೀಡುತ್ತೇನೆ ಎಂಬುದು.

ನನ್ನ ಕೆಲಸ ಬ್ಯಾಟಿಂಗ್‌ನಲ್ಲಿ ಪ್ರದರ್ಶನ ನೀಡುವುದು

ಅಷ್ಟಕ್ಕೂ ಈ ರೀತಿಯ ವದಂತಿಗಳು ಇಲ್ಲದಿದ್ದರೆ ಯಾವುದೇ ಮೋಜು ಇರುವುದಿಲ್ಲ. ದೇಶಕ್ಕಾಗಿ ಆಡುವುದು ಮತ್ತು ರನ್ ಗಳಿಸುವುದು ಯಾವಾಗಲೂ ನನ್ನ ಗುರಿಯಾಗಿದೆ. ನನ್ನ ಕೆಲಸ ಬ್ಯಾಟಿಂಗ್‌ನಲ್ಲಿ ಪ್ರದರ್ಶನ ನೀಡುವುದು ಮತ್ತು ದೇಶವನ್ನು ಪ್ರತಿನಿಧಿಸುವುದು. ನನ್ನ ಚೊಚ್ಚಲ ಪಂದ್ಯದಿಂದಲೂ ನಾನು ಹೊಂದಿರುವ ಜವಾಬ್ದಾರಿ ಅದು, ಮತ್ತು ನಾನು ಅದನ್ನು ಮುಂದುವರಿಸುತ್ತೇನೆ ಎಂದಿದ್ದಾರೆ.

IND vs ENG: ಬಾಲ್ಯದ ಗೆಳೆಯ ನೀಡಿದ ಬ್ಯಾಟ್​ನಿಂದ ಲಾರ್ಡ್ಸ್‌ನಲ್ಲಿ ಶತಕ ಬಾರಿಸಿದ ರೋಹಿತ್

ಇಡೀ ತಂಡಕ್ಕೆ ಬೇಸರವಾಗಿದೆ

ಇನ್ನು ತಂಡದ ಸರಣಿ ಸೋಲಿನ ಬಗ್ಗೆ ಮಾತನಾಡಿದ ರೋಹಿತ್, ‘ಈ ಸೋಲಿನಿಂದಾಗಿ ಇಡೀ ತಂಡಕ್ಕೆ ಬೇಸರವಾಗಿದೆ. ನಾವು ಬರ್ಮಿಂಗ್ಹ್ಯಾಮ್‌ನಲ್ಲಿ ಉತ್ತಮವಾಗಿ ಪ್ರಾರಂಭಿಸಿದೆವು ಮತ್ತು ಉತ್ತಮ ಕ್ರಿಕೆಟ್ ಆಡಿದೆವು. ಆದರೆ ಕಾರ್ಡಿಫ್‌ನಲ್ಲಿ, ನಾವು ಬ್ಯಾಟಿಂಗ್‌ನಲ್ಲಿ ಸಾಕಷ್ಟು ರನ್ ಗಳಿಸಲು ಸಾಧ್ಯವಾಗಲಿಲ್ಲ. ಇತ್ತ ಲಾರ್ಡ್ಸ್‌ನಲ್ಲಿ ಗುರಿ ಸಾಕಷ್ಟು ದೊಡ್ಡದಾಗಿತ್ತು. ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸಿದೆವು ಆದರೆ 20-25 ರನ್‌ಗಳ ಅಂತರದಲ್ಲಿ ಸೋತಿದ್ದೇವೆ’ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:20 pm, Mon, 20 July 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ