AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಒಂದು ಸಿಕ್ಸ್ ಸಿಡಿಸಿದರೆ ರೋಹಿತ್ ಶರ್ಮಾ ಹೆಸರಿಗೆ ಹೊಸ ದಾಖಲೆ ಸೇರ್ಪಡೆ

India vs England 5th Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ 4 ಮ್ಯಾಚ್​ಗಳು ಮುಗಿದಿದೆ. ಹೈದರಾಬಾದ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದರೆ, ವಿಶಾಖಪಟ್ಟಣಂ, ರಾಜ್​ಕೋಟ್ ಮತ್ತು ರಾಂಚಿಯಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಮೂಲಕ 3-1 ಅಂತರದಿಂದ ಸರಣಿಯಲ್ಲಿ ಮುನ್ನಡೆ ಪಡೆದುಕೊಂಡಿದೆ.

Rohit Sharma: ಒಂದು ಸಿಕ್ಸ್ ಸಿಡಿಸಿದರೆ ರೋಹಿತ್ ಶರ್ಮಾ ಹೆಸರಿಗೆ ಹೊಸ ದಾಖಲೆ ಸೇರ್ಪಡೆ
Rohit Sharma
TV9 Web
| Updated By: ಝಾಹಿರ್ ಯೂಸುಫ್|

Updated on: Mar 05, 2024 | 8:59 AM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಐದನೇ ಟೆಸ್ಟ್ ಪಂದ್ಯವು ಫೆಬ್ರವರಿ 7 ರಿಂದ ಶುರುವಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಿಶೇಷ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಮುಂದಿದೆ. ಅಂದರೆ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಹಿಟ್​ಮ್ಯಾನ್ ಬ್ಯಾಟ್​ನಿಂದ ಒಂದು ಸಿಕ್ಸ್ ಮೂಡಿಬಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 50 ಸಿಕ್ಸ್ ಬಾರಿಸಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ.

  • ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇದುವರೆಗೆ 31 ಪಂದ್ಯಗಳಲ್ಲಿ 53 ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ 49 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.
  • ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಎಂಬುದು ವಿಶೇಷ. ಸ್ಟೋಕ್ಸ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇದುವರೆಗೆ 44 ಪಂದ್ಯಗಳಲ್ಲಿ 81 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 78 ಸಿಕ್ಸ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
  • ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಒಂದು ಸಿಕ್ಸ್ ಬಾರಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 50 ಸಿಕ್ಸ್ ಬಾರಿಸಿದ ಮೊದಲ ಭಾರತೀಯ ಹಾಗೂ ವಿಶ್ವದ 2ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.
  • ವಿಶೇಷ ಎಂದರೆ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಕೂಡ ಕಾಣಿಸಿಕೊಂಡಿದ್ದಾರೆ. ಕೇವಲ 8 ಟೆಸ್ಟ್ ಪಂದ್ಯಗಳನ್ನಾಡಿರುವ ಜೈಸ್ವಾಲ್ ಈಗಾಗಲೇ 26 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.

ಸರಣಿ ಗೆದ್ದಿರುವ ಟೀಮ್ ಇಂಡಿಯಾ:

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಈಗಾಗಲೇ ಟೀಮ್ ಇಂಡಿಯಾ ವಶಪಡಿಸಿಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಗೆದ್ದರೆ, ಉಳಿದ ಮೂರು ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಭಾರತ ತಂಡ ಜಯ ಸಾಧಿಸಿತ್ತು. ಅದರಂತೆ 3-1 ಅಂತರದಿಂದ ಟೀಮ್ ಇಂಡಿಯಾ ಸರಣಿ ಗೆದ್ದುಕೊಂಡಿದೆ. ಇದೀಗ ಐದನೇ ಟೆಸ್ಟ್ ಪಂದ್ಯವು ಭಾರತ ತಂಡದ ಪಾಲಿಗೆ ಔಪಚಾರಿಕ.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

ಅತ್ತ ಇಂಗ್ಲೆಂಡ್ ತಂಡವು ಕೊನೆಯ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿ ಸೋಲಿನ ಅಂತರವನ್ನು ಕಡಿಮೆ ಮಾಡಿಕೊಳ್ಳುವ ವಿಶ್ವಾಸದಲ್ಲಿದೆ. ಹೀಗಾಗಿ ಧರ್ಮಶಾಲಾದಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯದಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ