IND vs AUS 3rd ODI: ನಾಳೆ ತೃತೀಯ ಏಕದಿನ: ಇನ್ನೂ ತಂಡ ಸೇರಿಕೊಳ್ಳದ ರೋಹಿತ್ ಶರ್ಮಾ?

Rohit Sharma likely to join Today Team India: ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ರಾಜ್ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಸೆಪ್ಟೆಂಬರ್ 27 ರಂದು ನಡೆಯಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ರಾಜ್ಕೋಟ್​ಗೆ ತಲುಪಿದ್ದಾರೆ. ಆದರೆ, ರೋಹಿತ್ ಶರ್ಮಾ ಮಾತ್ರ ಇನ್ನೂ ಬಂದಿಲ್ಲ.

IND vs AUS 3rd ODI: ನಾಳೆ ತೃತೀಯ ಏಕದಿನ: ಇನ್ನೂ ತಂಡ ಸೇರಿಕೊಳ್ಳದ ರೋಹಿತ್ ಶರ್ಮಾ?
Rohit Sharma
Follow us
Vinay Bhat
|

Updated on: Sep 26, 2023 | 7:04 AM

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಭಾರತ (India vs Australia) 2-0 ಅಂತರದಿಂದ ಸರಣಿ ವಶಪಡಿಸಿಕೊಂಡಾಗಿದೆ. ಭಾನುವಾರ ಇಂದೋರ್​ನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಶುಭ್​ಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಮನಮೋಹಕ ಶತಕದ ನೆರವಿನಿಂದ ಟೀಮ್ ಇಂಡಿಯಾ ಬೃಹತ್ ಮೊತ್ತ ಕಲೆಹಾಕಿ ಜಯ ಸಾಧಿಸಿತು. ಇದೀಗ ಭಾರತ ಸರಣಿ ಕ್ಲೀನ್​ಸ್ವೀಪ್ ಮೇಲೆ ಕಣ್ಣಿಟ್ಟಿರುವ ಭಾರತ ತಂಡ ರಾಜ್ಕೋಟ್​ಗೆ ತಲುಪಿದೆ. ಆದರೆ, ರೋಹಿತ್ ಶರ್ಮಾ ಮಾತ್ರ ಇನ್ನೂ ಬಂದಿಲ್ಲ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ರಾಜ್ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಸೆಪ್ಟೆಂಬರ್ 27 ರಂದು ನಡೆಯಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ರಾಜ್ಕೋಟ್​ಗೆ ತಲುಪಿದ್ದಾರೆ.

ಇದನ್ನೂ ಓದಿ
Image
ವಿಶ್ವಕಪ್​ನಲ್ಲಿ ಸೆಮಿಫೈನಲ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಇರ್ಫಾನ್
Image
ಈ ಸಲ ವಿಶ್ವಕಪ್ ನಮ್ದೆ​: ಟೀಮ್ ಇಂಡಿಯಾ ಅಭಿಮಾನಿಗಳ​ ಹೀಗೊಂದು ಲೆಕ್ಕಾಚಾರ
Image
ಧೋನಿ ದಾಖಲೆ ಮುರಿದ ಇಮ್ರಾನ್ ತಾಹಿರ್
Image
VIDEO: ಕಪಿಲ್ ದೇವ್ ಕಿಡ್ನಾಪ್ ವಿಡಿಯೋ? ಕಳವಳ ವ್ಯಕ್ತಪಡಿಸಿದ ಗಂಭೀರ್

ರಾಜ್ಕೋಟ್​ಗೆ ತಲುಪಿದ ಟೀಮ್ ಇಂಡಿಯಾ ಆಟಗಾರರ ವಿಡಿಯೋ:

ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ ಹಾಗೂ ಇನ್ನೂ ಕೆಲ ಆಟಗಾರರು ಮೊದಲೆರಡು ಏಕದಿನ ಪಂದ್ಯದಿಂದ ವಿಶ್ರಾಂತಿ ಪಡೆದುಕೊಂಡಿದ್ದರು. ಇವರು ಮೂರನೇ ಪಂದ್ಯದಲ್ಲಿ ಆಡಲಿದ್ದಾರೆ. ಕೊಹ್ಲಿ, ಪಾಂಡ್ಯ ಸೇರಿದಂತೆ ಉಳಿದ ಆಟಗಾರರೆಲ್ಲ ತಂಡ ಸೇರಿದ್ದಾರೆ. ಹಿಟ್​ಮ್ಯಾನ್ ಇನ್ನೂ ಬಂದಿಲ್ಲ ಎನ್ನಲಾಗಿದೆ. ಮೂಲಗಳ ಪ್ರಕಾರ ರೋಹಿತ್ ಇಂದು ತಂಡ ಸೇರಿಕೊಳ್ಳುತ್ತಾರಂತೆ.

ಶಾರ್ದೂಲ್ ಠಾಕೂರ್ ಅರ್ಧಂಬರ್ಧ ಆಟಗಾರ: ಮಾಜಿ ಕ್ರಿಕೆಟಿಗ ಟೀಕೆ

ಭಾರತೀಯ ಆಟಗಾರರು ಎರಡನೇ ಏಕದಿನ ಮುಗಿದ ಬಳಿಕ ಇಂದೋರ್​ನಲ್ಲಿ ಹೆಚ್ಚು ವಿಶ್ರಾಂತಿಯನ್ನು ತೆಗೆದುಕೊಳ್ಳದೆ ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಆರ್. ಅಶ್ವಿನ್ ಸೇರಿದಂತೆ ಇಬ್ಬರು ಆಟಗಾರರನ್ನು ಹೊರತು ಪಡಿಸಿ ಉಳಿದೆಲ್ಲ ಪ್ಲೇಯರ್ಸ್ ರಾಜ್ಕೋಟ್​ಗೆ ಬಂದಿದ್ದಾರೆ. ಶುಭ್​ಮನ್ ಗಿಲ್ ಹಾಗೂ ಶಾರ್ದೂಲ್ ಠಾಕೂರ್ ಪ್ರಯಾಣ ಬೆಳೆಸಿಲ್ಲ.

ಅಂತಿಮ ಏಕದಿನ ಪಂದ್ಯದಿಂದ ಗಿಲ್ ಹಾಗೂ ಠಾಕೂರ್​ಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್‌ಮೆಂಟ್ ನಿರ್ಧರಿಸಿದೆ. ಇವರಿಬ್ಬರು ಭಾರತವು ತಮ್ಮ ಐಸಿಸಿ ಏಕದಿನ ವಿಶ್ವಕಪ್ ಪ್ರಯಾಣವನ್ನು ಪ್ರಾರಂಭಿಸುವ ಗುವಾಹಟಿಯಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಭಾರತ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಇವರ ಜೊತೆಗೆ ಹಾರ್ದಿಕ್, ಕುಲ್ದೀಪ್ ಕೂಡ ಕಮ್​ಬ್ಯಾಕ್ ಮಾಡುತ್ತಾರೆ. ವಿಶ್ರಾಂತಿಯ ಕಾರಣ ಜಸ್ಪ್ರೀತ್ ಬುಮ್ರಾ ಎರಡನೇ ಏಕದಿನ ಪಂದ್ಯದಲ್ಲಿ ಆಡಲಿಲ್ಲ. ತಂಡದ ಮ್ಯಾನೇಜ್‌ಮೆಂಟ್ ಅವರಿಗೆ ಕುಟುಂಬವನ್ನು ನೋಡಲು ಮತ್ತು ಸ್ವಲ್ಪ ವಿರಾಮ ತೆಗೆದುಕೊಳ್ಳಲು ಅವಕಾಶ ಮಾಡಿಕೊಟ್ಟಿತು. ಬುಮ್ರಾ 3ನೇ ಏಕದಿನಕ್ಕೆ ಲಭ್ಯರಾಗಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್