AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ರೋಹಿತ್ ಶರ್ಮಾ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಕೋಚ್ ರಾಹುಲ್ ದ್ರಾವಿಡ್

IND vs ENG: ರೋಹಿತ್ ಶರ್ಮಾ (Rohit Sharma) ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ಟೆಸ್ಟ್​​ ಪಂದ್ಯದಿಂದ ಹೊರ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಟೀಮ್ ಇಂಡಿಯಾ ಕೋಚ್ ರಾಹುಲ್‌ ದ್ರಾವಿಡ್‌ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

Rohit Sharma: ರೋಹಿತ್ ಶರ್ಮಾ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಕೋಚ್ ರಾಹುಲ್ ದ್ರಾವಿಡ್
Rohit Sharma and Rahul Dravid
TV9 Web
| Edited By: |

Updated on:Jun 30, 2022 | 8:40 AM

Share

ಭಾರತ ಹಾಗೂ ಇಂಗ್ಲೆಂಡ್ (England vs India) ನಡುವೆ ಬಾಕಿ ಉಳಿದಿರುವ ಐದನೇ ಟೆಸ್ಟ್​ ಜುಲೈ 1 ರಿಂದ ಆರಂಭವಾಗಲಿದೆ. ಆದರೆ, ಇದಕ್ಕೂ ಮುನ್ನವೇ ನಾಯಕ ರೋಹಿತ್ ಶರ್ಮಾ (Rohit Sharma) ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ಟೆಸ್ಟ್​​ ಪಂದ್ಯದಿಂದ ಹೊರ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್​ಗೂ ಮುನ್ನ ಭಾರತ ತಂಡ ಅಬ್ಯಾಸ ಪಂದ್ಯದಲ್ಲಿ ಭಾಗಿಯಾಗಿತ್ತು. ಈ ಸಂದರ್ಭದಲ್ಲಿ ರೋಹಿತ್ ಶರ್ಮಾಗೆ ಕೊರೊನಾ ವೈರಸ್ ದೃಢಪಟ್ಟಿತ್ತು. ಹೀಗಾಗಿ ರೋಹಿತ್ ಹೋಟೆಲ್‌ನಲ್ಲಿ ಪ್ರತ್ಯೇಕವಾಗಿದ್ದಾರೆ. ಅವರ ಆರ್‌ಟಿ-ಪಿಸಿಆರ್‌ ಫ‌ಲಿತಾಂಶ ಪುನಃ ಪಾಸಿಟಿವ್‌ ಬಂದಿದೆ. ಹೀಗಾಗಿ ರೋಹಿತ್ ಟೆಸ್ಟ್​​ನಿಂದ ಹೊರಗುಳಿಯಲಿದ್ದು ತಂಡದ ಉಪನಾಯಕರಾಗಿರುವ ಜಸ್‌ಪ್ರೀತ್‌ ಬುಮ್ರಾ (Jasprit Bumrah) ಬರ್ಮಿಂಗ್‌ಹ್ಯಾಮ್‌ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡದ ನಾಯಕತ್ವ ವಹಿಸಲಿದ್ದಾರೆ ಎಂದು ಹೇಳಲಾಗಿದೆ.

ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಟೀಮ್ ಇಂಡಿಯಾ ಕೋಚ್ ರಾಹುಲ್‌ ದ್ರಾವಿಡ್‌ ಶಾಕಿಂಗ್ ಹೇಳಿಕೆ ನೀಡಿದ್ದಾರೆ. “ರೋಹಿತ್‌ ಇನ್ನೂ ಟೆಸ್ಟ್‌ ಪಂದ್ಯದಿಂದ ಬೇರ್ಪಟ್ಟಿಲ್ಲ. ಬುಧವಾರ ರಾತ್ರಿ ಮತ್ತು ಗುರುವಾರ ಬೆಳಗ್ಗೆ ಇನ್ನೂ ಎರಡು ಟೆಸ್ಟ್‌ ನಡೆಯಬೇಕಿದೆ. ಇಲ್ಲಿನ ಫ‌ಲಿತಾಂಶ ನಿರ್ಣಾಯಕವಾಗಲಿದೆ,” ಎಂದು ಹೇಳಿದ್ದಾರೆ. ಇಲ್ಲಿ ವರದಿ ನೆಗೆಟಿವ್ ಬಂದರೆ ಹಿಟ್​ಮ್ಯಾನ್ ಕಣಕ್ಕಿಳಿಯುವ ಸಾಧ್ಯತೆ ಇದೆ.

Rohit Sharma: ರೋಹಿತ್ ಶರ್ಮಾ ಅಲಭ್ಯ: ಟೀಮ್ ಇಂಡಿಯಾಗೆ ಹೊಸ ನಾಯಕ

ಇದನ್ನೂ ಓದಿ
Image
T20I Rankings: ರ‍್ಯಾಂಕಿಂಗ್​ನಲ್ಲೂ ಕೊಹ್ಲಿಯ ವಿಶ್ವ ದಾಖಲೆ ಮುರಿದ ಬಾಬರ್ ಆಜಂ
Image
Deepak Hooda: ಭರ್ಜರಿ ಶತಕ ಸಿಡಿಸಿ ಸಚಿನ್ ದಾಖಲೆ ಮುರಿದ ದೀಪಕ್ ಹೂಡಾ
Image
Moeen Ali: ನಾನಾಗಿದ್ರೆ ವಿರಾಟ್ ಕೊಹ್ಲಿಗೆ ನಾಯಕತ್ವ ನೀಡುತ್ತಿದ್ದೆ: ಮೊಯೀನ್ ಅಲಿ
Image
Unmukt Chand: ಟೀಮ್ ಇಂಡಿಯಾಗೆ ಗುಡ್ ಬೈ ಹೇಳಿ ಅಮೆರಿಕದಲ್ಲಿ ಅಬ್ಬರಿಸುತ್ತಿರುವ ಮಾಜಿ ನಾಯಕ..!

ಬಿಸಿಸಿಐನ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ ಬುಧವಾರ ಬರ್ಮಿಂಗ್‌ಹ್ಯಾಮ್‌ಗೆ ತೆರಳಿದ್ದಾರೆ. ಭಾರತೀಯ ತಂಡದ ಕೋಚ್ ರಾಹುಲ್ ದ್ರಾವಿಡ್ ಹಾಗೂ ಚೇತನ್ ಶರ್ಮಾ ಚರ್ಚೆಯನ್ನು ನಡೆಸಲಿದ್ದು ಇಂದು ರೋಹಿತ್ ಶರ್ಮಾ ವಿಚಾರವಾಗಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಸದ್ಯದ ಮಾಹಿತಿಗಳ ಪ್ರಕಾರ ಜಸ್ಪ್ರಿತ್ ಬೂಮ್ರಾಗೆ ನಾಯಕತ್ವದ ಜವಾಬ್ಧಾರಿ ದೊರೆಯಲಿದೆ ಎನ್ನಲಾಗಿದೆ. ಇಂದು ಸಂಜೆಯ ವೇಲೆಗೆ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.

ಇನ್ನು ಬುಮ್ರಾ ಕ್ಯಾಪ್ಟನ್ ಆಗಿದ್ದೇ ಆದಲ್ಲಿ ಭಾರತದ 36ನೇ ಟೆಸ್ಟ್‌ ನಾಯಕರಾಗಲಿದ್ದಾರೆ. ಅಲ್ಲದೇ 35 ವರ್ಷಗಳ ಸುದೀರ್ಘ‌ ಅವಧಿಯ ಬಳಿಕ ಟೆಸ್ಟ್‌ನಲ್ಲಿ ಭಾರತ ವನ್ನು ಮುನ್ನಡೆಸಲಿರುವ ಮೊದಲ ವೇಗದ ಬೌಲರ್‌ ಎಂಬ ಹೆಗ್ಗಳಿಕೆಗೂ ಪಾತ್ರ ರಾಗಲಿದ್ದಾರೆ. ಕೊನೆಯ ಸಲ 1987 ರಲ್ಲಿ ಲೆಜೆಂಡ್ರಿ ಕಪಿಲ್‌ದೇವ್‌ ಭಾರತವನ್ನು ಟೆಸ್ಟ್‌ನಲ್ಲಿ ಮುನ್ನಡೆಸಿದ್ದರು.

ಇತ್ತ ಟೀಮ್ ಇಂಡಿಯಾ ವಿರುದ್ಧದ 5ನೇ ಹಾಗೂ ಸರಣಿ ನಿರ್ಣಾಯಕ ಅಂತಿಮ ಟೆಸ್ಟ್‌ ಪಂದ್ಯವನ್ನಾಡಲು ಇಂಗ್ಲೆಂಡ್ ಸಿದ್ದವಾಗಿದೆ. ಈ ಸಲುವಾಗಿ ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ (ಇಸಿಬಿ) ತನ್ನ ಬಲಿಷ್ಠ ತಂಡವನ್ನು ಪ್ರಕಟ ಮಾಡಿದೆ.

ಇಂಗ್ಲೆಂಡ್ ತಂಡ: ಬೆನ್‌ ಸ್ಟೋಕ್ಸ್‌ (ನಾಯಕ), ಜೋ ರೂಟ್‌, ಜೇಮ್ಸ್‌ ಆಂಡರ್ಸನ್‌, ಜಾನಿ ಬೈರ್‌ಸ್ಟೋವ್‌, ಸ್ಯಾಮ್‌ ಬಿಲ್ಲಿಂಗ್ಸ್‌, ಸ್ಟುವರ್ಟ್‌ ಬ್ರಾಡ್‌, ಹ್ಯಾರಿ ಬ್ರೂಕ್ಸ್‌, ಜಾಕ್‌ ಕ್ರಾವ್ಲೀ, ಬೆನ್‌ ಫೋಕ್ಸ್, ಜಾಕ್‌ ಲೀಚ್‌, ಅಲೆಕ್ಸ್‌ ಲೀಸ್‌, ಕ್ರೇಗ್‌ ಓವರ್ಟರ್ನ್, ಜೇಮಿ ಓವರ್ಟರ್ನ್, ಮ್ಯಾಥ್ಯೂ ಪಾಟ್ಸ್‌ ಮತ್ತು ಓಲ್ಲೀ ಪೋಪ್.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ.

David Warner: ಎಲ್ಲರೂ LBWಗೆ ಮನವಿ ಮಾಡಿದ್ರೆ, ಡೇವಿಡ್ ವಾರ್ನರ್ ಸೂಪರ್​ ಮ್ಯಾನ್ ಕ್ಯಾಚ್ ಹಿಡಿದ್ರು..!

Published On - 8:39 am, Thu, 30 June 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ