AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಹಿಟ್​ಮ್ಯಾನ್ ಅಲ್ಲ, ಟೆಸ್ಟ್ ಮ್ಯಾನ್..! ಏನಾಯ್ತು ರೋಹಿತ್ ಶರ್ಮಾ?

Rohit Sharma's ODI Struggles Continue: ರೋಹಿತ್ ಶರ್ಮಾ 2027ರ ವಿಶ್ವಕಪ್ ಸ್ಥಾನಕ್ಕಾಗಿ ಹೋರಾಡುತ್ತಿದ್ದು, ಇಂಗ್ಲೆಂಡ್ ಪ್ರವಾಸದಲ್ಲಿ ಕಳಪೆ ಪ್ರದರ್ಶನ ನೀಡಿದ್ದಾರೆ. ರನ್ ಗಳಿಸಲು ಹೆಣಗಾಡುತ್ತಿರುವ ರೋಹಿತ್, ಎರಡು ಏಕದಿನ ಪಂದ್ಯಗಳಲ್ಲಿ ಕಡಿಮೆ ರನ್ ಗಳಿಸಿ ವಿಕೆಟ್ ಕಳೆದುಕೊಂಡರು. ಅವರ ಈ ಕಳಪೆ ಫಾರ್ಮ್ 2027ರ ವಿಶ್ವಕಪ್ ಕನಸಿಗೆ ಕುತ್ತು ತರುತ್ತಿದೆ. ಪ್ರಸಕ್ತ ವರ್ಷ ಅವರ ಬ್ಯಾಟಿಂಗ್ ಸರಾಸರಿ 30.12 ಮಾತ್ರ.

IND vs ENG: ಹಿಟ್​ಮ್ಯಾನ್ ಅಲ್ಲ, ಟೆಸ್ಟ್ ಮ್ಯಾನ್..! ಏನಾಯ್ತು ರೋಹಿತ್ ಶರ್ಮಾ?
Rohit Sharma
ಪೃಥ್ವಿಶಂಕರ
|

Updated on:Jul 16, 2026 | 9:02 PM

Share

2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ಗೆ (2027 World Cup) ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಸಲುವಾಗಿ ಹೋರಾಟ ನಡೆಸುತ್ತಿರುವ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾಗೆ (Rohit Sharma) ಯಾವುದೂ ಅಂದುಕೊಂಡಂತೆ ನಡೆಯುತ್ತಿಲ್ಲ. ಅಫ್ಘಾನಿಸ್ತಾನ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ 79 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ಲಯ ಕಂಡುಕೊಳ್ಳುವ ಸುಳಿವು ನೀಡಿದ್ದ ರೋಹಿತ್ ಶರ್ಮಾಗೆ ಇಂಗ್ಲೆಂಡ್‌ ಪ್ರವಾಸ ದುಃಸ್ವಪ್ನವಾಗಿ ಕಾಡುತ್ತಿದೆ. ಹೊಡಿಬಡಿ ಆಟದ ಮೂಲಕ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಡುತ್ತಿದ್ದ ರೋಹಿತ್​ಗೆ ಇಂಗ್ಲೆಂಡ್‌ ನೆಲದಲ್ಲಿ ಮುಕ್ತವಾಗಿ ರನ್ ಕಲೆಹಾಕಲು ಸಾಧ್ಯವಾಗುತ್ತಿಲ್ಲ.

ಒತ್ತಡಕ್ಕೆ ಸಿಲುಕಿದ ರೋಹಿತ್

ಹೀಗಾಗಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲೂ ರೋಹಿತ್ ಶರ್ಮಾ ಕಳಪೆ ಪ್ರದರ್ಶನ ಮುಂದುವರಿಸಿದ್ದಾರೆ. ಮೊದಲ ಏಕದಿನ ಪಂದ್ಯದಲ್ಲಿ ಕೇವಲ 11 ರನ್‌ಗಳಿಗೆ ಔಟಾಗಿದ್ದ ರೋಹಿತ್ ಎರಡನೇ ಪಂದ್ಯದಲ್ಲಿ ಕೇವಲ 26 ರನ್ ಗಳಿಸುವಲ್ಲಿ ಯಶಸ್ವಿಯಾದರು. ಮತ್ತೊಮ್ಮೆ ಸೆಟ್ ಆದ ನಂತರ ವಿಕೆಟ್ ಕಳೆದುಕೊಂಡಿದ್ದು ರೋಹಿತ್ ಅವರ ಕಳಪೆ ಫಾರ್ಮ್​ಗೆ ಹಿಡಿದ ಕೈಗನ್ನಡಿಯಾಗಿತ್ತು. ಅದರಲ್ಲೂ ಕಾರ್ಡಿಫ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್​ಗೆ ಸತತ 10 ಎಸೆತಗಳಿಗೆ ರನ್​ ಕಲೆಹಾಕಲು ಸಾಧ್ಯವಾಗಲಿಲ್ಲ. ಇದರಿಂದ ಒತ್ತಡಕ್ಕೆ ಸಿಲುಕಿದ ರೋಹಿತ್ ಇಲ್ಲದ ಶಾಟ್ ಆಡಲು ಯತ್ನಿಸಿ ವಿಕೆಟ್ ಕೈಚೆಲ್ಲಿದರು.

ಶೇ. 29.1 ರಷ್ಟು ಕಳಪೆ ಶಾಟ್‌

ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಆರಂಭದಿಂದಲೂ ಪ್ರತಿಯೊಂದು ರನ್​ಗೆ ಸಾಕಷ್ಟು ಹೆಣಗಾಟ ನಡೆಸಿದರು. ಹೀಗಾಗಿ ರೋಹಿತ್ ಈ ಪಂದ್ಯದಲ್ಲಿ ಬರೋಬ್ಬರಿ 47 ಎಸೆತಗಳನ್ನು ಎದುರಿಸಿ ಕೇವಲ 26 ರನ್ ಕಲೆಹಾಕಿದರು. ಈ ಹಿಂದೆ ರೋಹಿತ್ ಆಟವನ್ನು ನೋಡಿದವರಿಗೆ ಅವರ ಈ ಹೋರಾಟ ನಿಜಕ್ಕೂ ಅಚ್ಚರಿ ಮೂಡಿಸಿತು. ಕಾರ್ಡಿಫ್ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಶೇ. 29.1 ರಷ್ಟು ಕಳಪೆ ಶಾಟ್‌ ಆಡಿದರು . 2014 ರ ನಂತರ ರೋಹಿತ್ ಶರ್ಮಾ ಅವರ ಕಳಪೆ ಶಾಟ್‌ಗಳ ಶೇಕಡಾವಾರು ಇಷ್ಟೊಂದು ಹೆಚ್ಚಿರುವುದು ಇದೇ ಮೊದಲು. ರೋಹಿತ್ ಇದೇ ರೀತಿಯ ಆಟವನ್ನು ಮುಂದುವರಿಸಿದರೆ, 2027 ರ ವಿಶ್ವಕಪ್‌ವರೆಗೆ ಅವರು ತಂಡದಲ್ಲಿ ಉಳಿಯುವುದು ಕಷ್ಟಕರವಾಗಿರುತ್ತದೆ.

IND vs ENG: 5 ರನ್​​ಗಳ ಅಂತರದಲ್ಲಿ ಪೆವಿಲಿಯನ್‌ ಸೇರಿಕೊಂಡ ರೋಹಿತ್, ಕೊಹ್ಲಿ

ರೋಹಿತ್ ಶರ್ಮಾ ಹೋರಾಟ

ಈ ವರ್ಷ ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅವರ ಪ್ರದರ್ಶನ ತೀರ ಕಳಪೆಯಾಗಿದೆ. 2026 ರಲ್ಲಿ ರೋಹಿತ್ ಆಡಿರುವ ಎಂಟು ಇನ್ನಿಂಗ್ಸ್‌ಗಳಲ್ಲಿ ಕೇವಲ 241 ರನ್ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಬ್ಯಾಟಿಂಗ್ ಸರಾಸರಿ 30.12 ಆಗಿದ್ದು ಕೇವಲ ಒಂದು ಅರ್ಧಶತಕವನ್ನು ಮಾತ್ರ ಬಾರಿಸಿದ್ದಾರೆ. ಇಂಗ್ಲೆಂಡ್ ಏಕದಿನ ಸರಣಿಯ ಸಮಯದಲ್ಲಿ, ಮುಖ್ಯ ಕೋಚ್ ಗೌತಮ್ ಗಂಭೀರ್ ರೋಹಿತ್ ಅವರನ್ನು ಮುಕ್ತವಾಗಿ ಆಡುವಂತೆ ಕೇಳಿಕೊಂಡಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು. ಆದರೆ ಎರಡೂ ಇನ್ನಿಂಗ್ಸ್‌ಗಳಲ್ಲಿ ನಿಧಾನಗತಿಯ ಇನ್ನಿಂಗ್ಸ್‌ ಆಡುವ ಮೂಲಕ ರೋಹಿತ್ ಒತ್ತಡಕ್ಕೆ ಸಿಲುಕಿ ತಮ್ಮ ವಿಕೆಟ್ ಕೈಚೆಲ್ಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:00 pm, Thu, 16 July 26

Follow Us
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ
ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ