AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ರೋಹಿತ್ ಶರ್ಮಾ ಬದಲಿಗೆ ಏಕದಿನ ತಂಡದಲ್ಲಿ ಯಾರಿಗೆ ಸಿಗಲಿದೆ ಅವಕಾಶ?

Team India's 2027 World Cup Vision:ಇಂಗ್ಲೆಂಡ್ ಸರಣಿ ನಂತರ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆ. ಬಿಸಿಸಿಐ 2027ರ ವಿಶ್ವಕಪ್ ದೃಷ್ಟಿಯಿಂದ ರೋಹಿತ್‌ರನ್ನು ಕೈಬಿಟ್ಟು, ಯಶಸ್ವಿ ಜೈಸ್ವಾಲ್ ಅವರಿಗೆ ಅವಕಾಶ ನೀಡಲು ನಿರ್ಧರಿಸಿದೆ. ಲಾರ್ಡ್ಸ್‌ನಲ್ಲಿ ನಡೆಯುವ ಪಂದ್ಯ ರೋಹಿತ್‌ಗೆ ಕೊನೆಯದ್ದಾಗಬಹುದು. ಜೈಸ್ವಾಲ್ 2025ರಲ್ಲಿ ಪದಾರ್ಪಣೆ ಮಾಡಿ 6 ಪಂದ್ಯಗಳಲ್ಲಿ 2 ಶತಕ ಸಹಿತ 285 ರನ್ ಗಳಿಸಿದ್ದಾರೆ. ಮುಂದಿನ 20 ಏಕದಿನ ಪಂದ್ಯಗಳಲ್ಲಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.

IND vs ENG: ರೋಹಿತ್ ಶರ್ಮಾ ಬದಲಿಗೆ ಏಕದಿನ ತಂಡದಲ್ಲಿ ಯಾರಿಗೆ ಸಿಗಲಿದೆ ಅವಕಾಶ?
Rohit Sharma
ಪೃಥ್ವಿಶಂಕರ
|

Updated on:Jul 17, 2026 | 3:03 PM

Share

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯೊಂದಿಗೆ ಟೀಂ ಇಂಡಿಯಾದ 2027ರ ಏಕದಿನ ವಿಶ್ವಕಪ್ (2027 World Cup) ತಯಾರಿಯೂ ಶುರುವಾಗಿದೆ. ಈ ಪ್ರವಾಸಕ್ಕೆ ಬಿಸಿಸಿಐ (BCCI) ಯಾವ ತಂಡವನ್ನು ಪ್ರಕಟಿಸಿತ್ತೋ ಭಾಗಶಃ ಆ ತಂಡವೇ 2027 ರ ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಇಂಗ್ಲೆಂಡ್‌ ಸರಣಿಯ ನಡುವೆ ಸ್ಫೋಟಕ ಮಾಹಿತಿಯೊಂದು ಟೀಂ ಇಂಡಿಯಾ ಪಾಳಯದಿಂದ ಹೊರಬಿದ್ದಿದೆ. ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಏಕದಿನ ಕ್ರಿಕೆಟ್​ಗೂ ವಿದಾಯ ಹೇಳುತ್ತಿದ್ದು, ಲಾರ್ಡ್ಸ್‌ನಲ್ಲಿ ನಡೆಯಲಿರುವ ಕೊನೆಯ ಏಕದಿನ ಪಂದ್ಯ ರೋಹಿತ್ ವೃತ್ತಿ ಬದುಕಿನ ಕೊನೆಯ ಅಂತರರಾಷ್ಟ್ರೀಯ ಪಂದ್ಯವಾಗಲಿದೆ ಎಂದು ವರದಿಯಾಗಿದೆ. ವರದಿಯಂತೆ ರೋಹಿತ್ ನಿವೃತ್ತಿ ಘೋಷಿಸಿದರೆ ಏಕದಿನ ತಂಡದಲ್ಲಿ ಅವರ ಸ್ಥಾನವನ್ನು ತುಂಬುವವರು ಯಾರು ಎಂಬ ಪ್ರಶ್ನೆ ಮೂಡಿದೆ.

ವರದಿಗಳ ಪ್ರಕಾರ, ಬಿಸಿಸಿಐನ ಹಿರಿಯ ಆಯ್ಕೆ ಸಮಿತಿಯು ರೋಹಿತ್ ಶರ್ಮಾ ಅವರನ್ನು ಏಕದಿನ ತಂಡದಿಂದ ತೆಗೆದುಹಾಕಲು ನಿರ್ಧರಿಸಿದೆ. ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯ ನಂತರ ಅವರನ್ನು ತಂಡದಿಂದ ಕೈಬಿಟ್ಟು ಬೇರೆಯವರಿಗೆ ಅವಕಾಶ ನೀಡಲು ಆಯ್ಕೆ ಮಂಡಳಿ ತೀರ್ಮಾನಿಸಿದೆ. ಅಲ್ಲದೆ ಈ ನಿರ್ಧಾರದ ಬಗ್ಗೆ ರೋಹಿತ್‌ಗೆ ಈಗಾಗಲೇ ತಿಳಿಸಲಾಗಿದ್ದು, ಭವಿಷ್ಯದ ಸಿದ್ಧತೆಗಳಿಗಾಗಿ ಅವರ ಬದಲಿಗಾಗಿ ಸಂಪೂರ್ಣ ಯೋಜನೆಯನ್ನು ಅಂತಿಮಗೊಳಿಸಲಾಗಿದೆ ಎಂದು ವರದಿಯಾಗಿದೆ.

ರೋಹಿತ್ ಸ್ಥಾನವನ್ನು ತುಂಬುವವರು ಯಾರು?

ಮಾಧ್ಯಮ ವರದಿಗಳ ಪ್ರಕಾರ, ಆಯ್ಕೆದಾರರು ರೋಹಿತ್ ಶರ್ಮಾ ಬದಲಿಗೆ 24 ವರ್ಷದ ಯಶಸ್ವಿ ಜೈಸ್ವಾಲ್ ಅವರನ್ನು ಪರಿಗಣಿಸಲು ನಿರ್ಧರಿಸಿದ್ದಾರೆ. 2027 ರ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಸಮಿತಿಯು ಜೈಸ್ವಾಲ್ ಅವರನ್ನು ಈಗ ಆರಂಭಿಕ ಆಟಗಾರನನ್ನಾಗಿ ಆಡಿಸಲು ಬಯಸಿದೆ. ಆದ್ದರಿಂದ, ಇಂಗ್ಲೆಂಡ್ ಸರಣಿ ಮುಗಿದ ತಕ್ಷಣ ಯಶಸ್ವಿ ಜೈಸ್ವಾಲ್ ಅವರಿಗೆ ಏಕದಿನ ತಂಡದಲ್ಲಿ ನಿಯಮಿತ ಅವಕಾಶಗಳನ್ನು ನೀಡಲಾಗುವುದು, ಇದರಿಂದ ಅವರು ಮುಂಬರುವ ಏಕದಿನ ವಿಶ್ವಕಪ್​ಗೆ ಸಿದ್ಧರಾಗಬಹುದು.

ರೋಹಿತ್ ಕೊನೆಯ ಏಕದಿನ ಪಂದ್ಯ

2025 ರ ಚಾಂಪಿಯನ್ಸ್ ಟ್ರೋಫಿಯ ನಂತರ ರೋಹಿತ್ ಅವರನ್ನು ಏಕದಿನ ನಾಯಕತ್ವದಿಂದ ತೆಗೆದುಹಾಕಲಾಯಿತು ಎಂಬುದು ಗಮನಿಸಬೇಕಾದ ಸಂಗತಿ, ಇದು ಎಲ್ಲರನ್ನೂ ಅಚ್ಚರಿಗೊಳಿಸಿತು. ಅಂದಿನಿಂದ, 2027 ರ ವಿಶ್ವಕಪ್​ವರೆಗೆ ರೋಹಿತ್ ತಂಡದಲ್ಲಿ ಉಳಿಯುವುದು ಅನುಮಾನ ಎನ್ನಲಾಗುತ್ತಿತ್ತು. ಅದರಂತೆ ಲಾರ್ಡ್ಸ್‌ನಲ್ಲಿ ನಡೆಯುವ ಮೂರನೇ ಏಕದಿನ ಪಂದ್ಯ ರೋಹಿತ್ ಶರ್ಮಾ ಅವರ ಕೊನೆಯ ಏಕದಿನ ಪಂದ್ಯವಾಗುವ ಸಾಧ್ಯತೆಗಳಿವೆ. ಆದಾಗ್ಯೂ ಈ ಬಗ್ಗೆ ಬಿಸಿಸಿಐ ಆಗಲಿ ಅಥವಾ ರೋಹಿತ್ ಆಗಲಿ ಏನನ್ನು ಖಚಿತವಾಗಿ ಹೇಳಿಲ್ಲ. ಹೀಗಾಗಿ ಲಾರ್ಡ್ಸ್‌ನಲ್ಲಿ ನಡೆಯಲಿರುವ ಕೊನೆಯ ಏಕದಿನ ಪಂದ್ಯದ ಬಳಿಕ ಪರಿಸ್ಥಿತಿ ಸ್ಪಷ್ಟವಾಗಲಿದೆ.

ಏಕದಿನದಲ್ಲಿ ಜೈಸ್ವಾಲ್ ಪ್ರದರ್ಶನ ಹೇಗಿದೆ?

ಇನ್ನು ಏಕದಿನದಲ್ಲಿ ರೋಹಿತ್ ಶರ್ಮಾ ಅವರ ಸ್ಥಾನವನ್ನು ತುಂಬಲಿರುವ ಯಶಸ್ವಿ ಜೈಸ್ವಾಲ್ ಅವರ ಏಕದಿನ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಯಶಸ್ವಿ ಜೈಸ್ವಾಲ್ 2025 ರಲ್ಲಿ ಇದೇ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದರು. ಇದುವರೆಗೆ ಭಾರತ ಪರ ಒಟ್ಟು ಆರು ಏಕದಿನ ಪಂದ್ಯಗಳನ್ನು ಆಡಿರುವ ಜೈಸ್ವಾಲ್, 71.25 ರ ಸರಾಸರಿಯಲ್ಲಿ 285 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಶತಕಗಳು ಸೇರಿವೆ.

ಒಡಿಐನಿಂದಲೂ ರೋಹಿತ್​​ ಶರ್ಮಾ ನಿವೃತ್ತಿ? ಜುಲೈ 19ರಂದು ಲಾರ್ಡ್ಸ್‌ನಲ್ಲಿ ಹಿಟ್​​ಮ್ಯಾನ್​​ ಕೊನೆಯ ಪಂದ್ಯ?

ಮುಂದಿನ ವಿಶ್ವಕಪ್‌ಗೂ ಮುನ್ನ ಭಾರತ ತಂಡ ಸುಮಾರು 20 ಏಕದಿನ ಪಂದ್ಯಗಳನ್ನು ಆಡಬೇಕಾಗಿದೆ ಎಂಬುದು ಗಮನಿಸಬೇಕಾದ ಸಂಗತಿ. ಈ ಎಲ್ಲಾ ಪಂದ್ಯಗಳಲ್ಲಿ ಯಶಸ್ವಿ ಜೈಸ್ವಾಲ್ ಅವರನ್ನು ಆರಂಭಿಕ ಆಟಗಾರನಾಗಿ ಪ್ರಯತ್ನಿಸಲಾಗುತ್ತದೆ. ಭಾರತದ ಮುಂದಿನ ಏಕದಿನ ಸರಣಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿದ್ದು, ಈ ಸರಣಿಯಲ್ಲಿ ಯಶಸ್ವಿ ಜೈಸ್ವಾಲ್ ರೋಹಿತ್ ಶರ್ಮಾ ಅವರನ್ನು ಬದಲಾಯಿಸಬಹುದು. ಇದರ ನಂತರ, ಭಾರತ ತಂಡ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಶ್ರೀಲಂಕಾ ಮತ್ತು ಜಿಂಬಾಬ್ವೆ ವಿರುದ್ಧ ಏಕದಿನ ಸರಣಿಗಳನ್ನು ತವರಿನಲ್ಲಿ ಆಡಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Fri, 17 July 26

Follow Us
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ
ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ
ಹರಿಯಾಣದಲ್ಲಿ ದೇಶದ ಮೊದಲ 'ಹೈಡ್ರೋಜನ್ ರೈಲಿ'ಗೆ ಪಿಎಂ ಮೋದಿ ಇಂದು ಚಾಲನೆ
ಹರಿಯಾಣದಲ್ಲಿ ದೇಶದ ಮೊದಲ 'ಹೈಡ್ರೋಜನ್ ರೈಲಿ'ಗೆ ಪಿಎಂ ಮೋದಿ ಇಂದು ಚಾಲನೆ
Live: ಮೊದಲ ಆಶಾಢ ಶುಕ್ರವಾರದಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆಯ ನೇರಪ್ರಸಾರ
Live: ಮೊದಲ ಆಶಾಢ ಶುಕ್ರವಾರದಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆಯ ನೇರಪ್ರಸಾರ
'ಆಷಾಢ ಮಾಸ ಶಕ್ತಿ ದೇವತೆಗಳ ಆರಾಧನೆಗೆ ಪ್ರಶಸ್ತವಾದ ಮಾಸ'
'ಆಷಾಢ ಮಾಸ ಶಕ್ತಿ ದೇವತೆಗಳ ಆರಾಧನೆಗೆ ಪ್ರಶಸ್ತವಾದ ಮಾಸ'
ಮೊದಲ ಬಾರಿಗೆ ಇರಾನ್ ಮೇಲೆ ದಾಳಿ ನಡೆಸಿದ ಯುಎಇ
ಮೊದಲ ಬಾರಿಗೆ ಇರಾನ್ ಮೇಲೆ ದಾಳಿ ನಡೆಸಿದ ಯುಎಇ
'ದಿನಕ್ಕೆ 17 ಗಂಟೆ ಓದು, ನಿದ್ದೆಯನ್ನೂ ತ್ಯಜಿಸಿದ್ದೆ';NEET UG ಟಾಪರ್ ಮಾತು
'ದಿನಕ್ಕೆ 17 ಗಂಟೆ ಓದು, ನಿದ್ದೆಯನ್ನೂ ತ್ಯಜಿಸಿದ್ದೆ';NEET UG ಟಾಪರ್ ಮಾತು