ಆಸ್ಟ್ರೇಲಿಯಾ ನಮಗಿಂತ ಉತ್ತಮ ತಂಡ, ಅದುವೇ ಸೋಲಿಗೆ ಕಾರಣ: ರೋಹಿತ್ ಶರ್ಮಾ

|

Updated on: Dec 08, 2024 | 12:55 PM

Australia vs India: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತ್ತು. ಪರ್ತ್​​ನಲ್ಲಿ ನಡೆದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಭಾರತೀಯ ಪಡೆ 295 ರನ್​​ಗಳಿಂದ ಬಗ್ಗು ಬಡಿದಿತ್ತು. ಇದೀಗ ಅಡಿಲೇಡ್​ನಲ್ಲಿ ಕಂಬ್ಯಾಕ್ ಮಾಡಿರುವ ಆಸ್ಟ್ರೇಲಿಯಾ ಟೀಮ್ ಇಂಡಿಯಾವನ್ನು 10 ವಿಕೆಟ್​ಗಳಿಂದ ಸೋಲಿಸಿದೆ.

ಆಸ್ಟ್ರೇಲಿಯಾ ನಮಗಿಂತ ಉತ್ತಮ ತಂಡ, ಅದುವೇ ಸೋಲಿಗೆ ಕಾರಣ: ರೋಹಿತ್ ಶರ್ಮಾ
Rohit sharma
Follow us on

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 2ನೇ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ 10 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​​ನಲ್ಲಿ 180 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್​​ನಲ್ಲಿ 337 ರನ್ ಪೇರಿಸಿ 157 ರನ್​​ಗಳ ಮುನ್ನಡೆ ಪಡೆಯಿತು.

157 ರನ್​​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 175 ರನ್​​ಗಳಿಗೆ ಆಲೌಟ್ ಆಗಿದೆ. ಅತ್ತ ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​​ನಲ್ಲಿ ಕೇವಲ 19 ರನ್​​​ಗಳ ಟಾರ್ಗೆಟ್ ಪಡೆದ ಆಸ್ಟ್ರೇಲಿಯಾ ತಂಡವು 3.2 ಓವರ್​​ಗಳಲ್ಲಿ ಗುರಿ ಮುಟ್ಟುವ ಮೂಲಕ 10 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ.

ಈ ಹೀನಾಯ ಸೋಲಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಂಡದ ಪ್ರದರ್ಶನವು ನಿರಾಶಾದಾಯಕವಾಗಿತ್ತು ಎಂದಿದ್ದಾರೆ . ಅಲ್ಲದೆ ನಾವು ಈ ಪಂದ್ಯವನ್ನು ಗೆಲ್ಲುವಷ್ಟು ಚೆನ್ನಾಗಿ ಆಡಲಿಲ್ಲ ಎಂದು ಬಹಿರಂಗವಾಗಿಯೇ ತಿಳಿಸಿದ್ದಾರೆ.

ಇನ್ನು ಸೋಲಿಗೆ ಮುಖ್ಯ ಕಾರಣವೇನು ಎಂಬ ಪ್ರಶ್ನೆಗೆ, ಆಸ್ಟ್ರೇಲಿಯಾ ತಂಡವು ನಮಗಿಂತ ಉತ್ತಮವಾಗಿ ಆಡಿದೆ. ಈ ಅದ್ಭುತ ಪ್ರದರ್ಶನದ ಫಲವಾಗಿ ಆಸೀಸ್ ಪಡೆ ಗೆದ್ದಿದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ನಾವು ಪರ್ತ್​​ನಲ್ಲಿ ಚೆನ್ನಾಗಿಯೇ ಆಡಿದ್ದೆವು. ಆದರೆ ಅಡಿಲೇಡ್​ನಲ್ಲಿ ಹಲವು ಅವಕಾಶಗಳನ್ನು ಕೈಚೆಲ್ಲಿಕೊಂಡೆವು. ಇಲ್ಲಿ ಮುಖ್ಯವಾಗಿ ಪಿಂಕ್ ಬಾಲ್​ನಲ್ಲಿ ಆಡುವುದು ದೊಡ್ಡ ಸವಾಲು. ಮೊದಲೇ ಹೇಳಿದಂತೆ ಆಸ್ಟ್ರೇಲಿಯಾ ತಂಡವು ನಮಗಿಂತ ಉತ್ತಮವಾಗಿದೆ. ಇದಾಗ್ಯೂ ನಾವು ಗಬ್ಬಾ ಟೆಸ್ಟ್​ನಲ್ಲಿ ಕಂಬ್ಯಾಕ್ ಮಾಡುವ ವಿಶ್ವಾಸವಿದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಸರಣಿ ಸಮಬಲ:

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತ್ತು. ಪರ್ತ್​​ನಲ್ಲಿ ನಡೆದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಭಾರತೀಯ ಪಡೆ 295 ರನ್​​ಗಳಿಂದ ಬಗ್ಗು ಬಡಿದಿತ್ತು. ಇದೀಗ ಅಡಿಲೇಡ್​ನಲ್ಲಿ ಕಂಬ್ಯಾಕ್ ಮಾಡಿರುವ ಆಸ್ಟ್ರೇಲಿಯಾ ಟೀಮ್ ಇಂಡಿಯಾವನ್ನು 10 ವಿಕೆಟ್​ಗಳಿಂದ ಸೋಲಿಸಿದೆ.

ಇದನ್ನೂ ಓದಿ: ಅಂಕ ಪಟ್ಟಿಯಲ್ಲಿ ಭಾರೀ ಕುಸಿತ: ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ WTC ಶಾಕ್

ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು 5 ಪಂದ್ಯಗಳ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದೆ. ಇನ್ನು ಈ ಸರಣಿಯ ಮೂರನೇ ಪಂದ್ಯವು ಡಿಸೆಂಬರ್ 14 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಬ್ರಿಸ್ಬೇನ್​ನ ಗಬ್ಬಾ ಮೈದಾನ ಆತಿಥ್ಯವಹಿಸಲಿದೆ.