ಐಸಿಸಿ ಏಕದಿನ ವಿಶ್ವಕಪ್ 2023 ರ ಟೇಬಲ್ ಟಾಪರ್ನಲ್ಲಿರುವ ನ್ಯೂಝಿಲೆಂಡ್ ಮತ್ತು ಆತಿಥೇಯ ಭಾರತ (India vs New Zealand) ಪಂದ್ಯ ಭಾನುವಾರ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (HPCA) ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಈ ಬಾರಿಯ ಟೂರ್ನಿಯಲ್ಲಿ ಒಂದೇ ಒಂದು ಸೋಲು ಕಾಣದೆ ಮುನ್ನುಗ್ಗುತ್ತಿರುವ ಉಭಯ ತಂಡಗಳ ಕಾದಾಟ ಸಾಕಷ್ಟು ರೋಚಕತೆ ಸೃಷ್ಟಿಸಿದೆ. ಈ ಮಹತ್ವದ ಪಂದ್ಯಕ್ಕಾಗಿ ಈಗಾಗಲೇ ಎರಡೂ ತಂಡ ಧರ್ಮಶಾಲಾಗೆ ತಲುಪಿದ್ದು, ಇಂದು ಅಭ್ಯಾಸದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಿವೀಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿರುವುದರಿಂದ ಇಂದಿನ ಅಭ್ಯಾಸದಲ್ಲಿ ಎಲ್ಲರ ಕಣ್ಣು ಮೊಹಮ್ಮದ್ ಶಮಿ ಮತ್ತು ಸೂರ್ಯಕುಮಾರ್ ಯಾದವ್ ಮೇಲಿದೆ. ಧರ್ಮಶಾಲಾ ಮೇಲ್ಮೈ ವೇಗಿಗಳಿಗೆ ಸಾಕಷ್ಟು ನೆರವು ನೀಡುತ್ತದೆ. ಹೀಗಾಗಿ ಶಮಿ 2023 ಆವೃತ್ತಿಯ ಮೊದಲ ವಿಶ್ವಕಪ್ ಆಡಲಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ರೋಹಿತ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವ ಸಾಧ್ಯತೆ ಇದೆ.
ಕಿವೀಸ್ ವಿರುದ್ಧ ಈ ಅಸ್ತ್ರ ಬಳಸಿದರೆ ಭಾರತಕ್ಕೆ ಗೆಲುವು ಖಚಿತ! ಧರ್ಮಶಾಲಾದ ಪಿಚ್ ಯಾರಿಗೆ ಹೆಚ್ಚು ಸಹಕಾರಿ ಗೊತ್ತಾ?
ಹಾರ್ದಿಕ್ ಅನುಪಸ್ಥಿತಿಯಲ್ಲಿ ಹೆಚ್ಚುವರಿ ಬ್ಯಾಟರ್ ಅಥವಾ ಬೌಲರ್ ಅನ್ನು ಆಡಿಸಬೇಕಾಗಿದೆ. ರೋಹಿತ್ ಶರ್ಮಾ ಅವರು ಹಾರ್ದಿಕ್ ಬದಲಿಗೆ ಸೂರ್ಯಕುಮಾರ್ ಯಾದವ್ ಮತ್ತು ಉತ್ತಮ ಪ್ರದರ್ಶನ ನೀಡದ ಕಾರಣ ಶಾರ್ದೂಲ್ ಠಾಕೂರ್ ಬದಲಿಗೆ ಶಮಿಯನ್ನು ತರಬಹುದು. ಈ ವರ್ಷಗಳಲ್ಲಿ, ಶಮಿ ಬೇಗನೆ ವಿಕೆಟ್‌ಗಳನ್ನು ಪಡೆಯುವ ಮೂಲಕ ಪವರ್‌ಪ್ಲೇ ಸ್ಪೆಷಲಿಸ್ಟ್ ಎಂದು ಗುರುತಿಸಿಕೊಂಡಿದ್ದಾರೆ.
ಧರ್ಮಶಾಲಾ ಮೇಲ್ಮೈ ವೇಗಿಗಳಿಗೆ ಹೆಚ್ಚು ಸಹಾಯ ಮಾಡುತ್ತದೆ, ವಿಶ್ವಕಪ್‌ನಲ್ಲಿ ಆಡಿದ ಮೂರು ಪಂದ್ಯಗಳೇ ಇದಕ್ಕೆ ಸಾಕ್ಷಿ. ಇಂತಹ ಪರಿಸ್ಥಿತಿಗಳಲ್ಲಿ ಶಮಿಯನ್ನು ಆಡಿಸಲು ಸೂಕ್ತ ಸಮಯ. ರೋಹಿತ್ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಇಂದಿನ ಅಭ್ಯಾಸದ ಅವಧಿಯಲ್ಲಿ ಶಮಿ ಅವರು ಹೇಗೆ ಬೌಲಿಂಗ್ ಮಾಡುತ್ತಾರೆ ಎಂಬುದರ ಬಗ್ಗೆ ಸೂಕ್ಷ್ಮವಾಗಿ ಗಮನಿಸಲಿದ್ದಾರೆ.
ನ್ಯೂಝಿಲೆಂಡ್ ಧರ್ಮಶಾಲಾದ HPCA ಸ್ಟೇಡಿಯಂನಲ್ಲಿ ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯ ವರೆಗೆ ಐಚ್ಛಿಕ ತರಬೇತಿ ಅವಧಿಯನ್ನು ನಡೆಸಲಿದೆ. ಇದಕ್ಕೂ ಮುನ್ನ 1:45ಕ್ಕೆ ಮಾಧ್ಯಮಗೋಷ್ಠಿಯಲ್ಲಿ ನಾಯಕ ಪಾಲ್ಗೊಳ್ಳಬೇಕು. ಅಂತೆಯೆ ಸಂಜೆ 6 ಗಂಟೆಯಿಂದ 9 ಗಂಟೆಯ ವರೆಗೆ ಪ್ರ್ಯಾಕ್ಟೀಸ್ ನಡೆಸಲಿದೆ. ನಾಐಕ ರೋಹಿತ್ ಶರ್ಮಾ 5:45ಕ್ಕೆ ಮಾಧ್ಯಮಗೋಷ್ಠಿಯನ್ನು ನಡೆಸಲಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ