AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma Press Conference: ಇಂದು ಮಧ್ಯಾಹ್ನ ರೋಹಿತ್ ಶರ್ಮಾ ಸುದ್ದಿಗೋಷ್ಠಿ: ತಂಡದಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ

India’s Predicted Playing XI Against West Indies: ಬುಧವಾರ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ಎರಡನೇ ಏಕದಿನ ಪಂದ್ಯ ನಡೆಯಲಿದೆ. ಇದಕ್ಕೂ ಮೊದಲು ಇಂದು ಮಧ್ಯಾಹ್ನ 2 ಗಂಟೆಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಸುದ್ದಿಗೋಷ್ಠಿ ನಡೆಸಲಿದ್ದು, ಮಹತ್ವದ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

Rohit Sharma Press Conference: ಇಂದು ಮಧ್ಯಾಹ್ನ ರೋಹಿತ್ ಶರ್ಮಾ ಸುದ್ದಿಗೋಷ್ಠಿ: ತಂಡದಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ
Captain Rohit Sharma Press Conference
TV9 Web
| Updated By: Vinay Bhat|

Updated on: Feb 08, 2022 | 11:36 AM

Share

ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವೆ ಬುಧವಾರ ಎರಡನೇ ಏಕದಿನ ಪಂದ್ಯ ನಡೆಯಲಿದೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಜುರುಗಿದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 6 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆ ಆಲ್ರೌಂಡ್ ಪ್ರದರ್ಶನ ನೀಡಿತ್ತು. ಇದೀಗ ಎರಡನೇ ಕದನಕ್ಕೆ ಸಜ್ಜಾಗುತ್ತಿರುವ ಭಾರತಕ್ಕೆ ದೊಡ್ಡ ಸಂಕಷ್ಟ ಎದುರಾಗಿದೆ. ಮೊದಲ ಏಕದಿನಕ್ಕೆ ಅಲಭ್ಯರಾಗಿದ್ದ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ತಂಡಕ್ಕೆ ಕಮ್​ಬ್ಯಾಕ್ ಮಾಡಿದ್ದು, ಯಾರ ಸ್ಥಾನವನ್ನು ಇವರಿಬ್ಬರಿಗೆ ಅಥವಾ ಒಬ್ಬರಿಗೆ ನೀಡುವುದು ಎಂಬ ಗೊಂದಲ ಉಂಟಾಗಿದೆ. ಹಾಗೆಯೇ ಎಲ್ಲರ ಕಣ್ಣು ಕುಲ್ದೀಪ್ ಯಾದವ್ ಅವರ ಮೇಲಿದ್ದು ಆಡುವ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುತ್ತಾರ ಎಂಬ ಪ್ರಶ್ನೆ ಎದ್ದಿದೆ. ಇದರ ನಡುವೆ ಇಂದು ಮಧ್ಯಾಹ್ನ 2 ಗಂಟೆಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಸುದ್ದಿಗೋಷ್ಠಿ (Rohit Sharma Press Conference) ನಡೆಸಲಿದ್ದು, ಮಹತ್ವದ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಸುದ್ದಿಗೋಷ್ಠಿಯಲ್ಲಿ ರೋಹಿತ್ ಶರ್ಮಾಗೆ ಎದುರಾಗಬಹುದಾದ ಪ್ರಶ್ನೆಗಳು:

  • ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ತಂಡ ಸೇರಿಕೊಂಡಿರುವ ಕಾರಣ ಇಶಾನ್ ಕಿಶನ್​ರನ್ನು ಕೈಬಿಡಲಾಗುತ್ತಾ?
  • ಕೆಎಲ್ ರಾಹುಲ್ ಆಡಿದರೆ ಅವರಿಗೆ ಯಾವ ಕ್ರಮಾಂಕ?- ಓಪನರ್ ಅಥವಾ ನಂಬರ್ 5?
  • ಕುಲ್ದೀಪ್ ಯಾದವ್​​ಗೆ ಅವಕಾಶ ನೀಡ್ತೀರಾ?
  • 4ನೇ ಕ್ರಮಾಂಕ ರಿಷಭ್ ಪಂತ್​ಗೇ ಫಿಕ್ಸ್?
  • ದೀಪಕ್ ಚಾಹರ್ ಪ್ಲೇಯಿಂಗ್ XI ನಲ್ಲಿ ಕಾಣಿಸ್ತಾರಾ?

ಹೀಗೆ ಮಧ್ಯಾಹ್ನದ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಗಳ ಸುರಿಮಳೆ ರೋಹಿತ್​​ಗೆ ಎದುರಾಗಲಿದೆ. ಹಿಟ್​ಮ್ಯಾನ್ ಪ್ಲೇಯಿಂಗ್ ಇಲೆವೆನ್ ಬಗ್ಗೆ ಏನು ಮಾಹಿತಿ ನೀಡ್ತಾರೆ ಎಂಬುದು ಕುತೂಹಲ ಕೆರಳಸಿದೆ. ಪರಿಪೂರ್ಣ ನಾಯಕನಾಗಿ ತಂಡವನ್ನು ಚೊಚ್ಚಲ ಬಾರಿಗೆ ಏಕದಿನದಲ್ಲಿ ಮುನ್ನಡೆಸಿದ ರೋಹಿತ್ ಶರ್ಮಾ ಅರ್ಧಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದರಲ್ಲಿ ಯುಜ್ವೇಂದ್ರ ಚಹಲ್ ಮತ್ತು ವಾಷಿಂಗ್ಟನ್ ಸುಂದರ್ ಕೂಡ ಬೌಲಿಂಗ್​ನಲ್ಲಿ ಸಂಚಲನ ಸೃಷ್ಟಿಸಿದರು. ಪದಾರ್ಪಣೆ ಪಂದ್ಯವನ್ನು ಆಡಿದ ದೀಪಕ್ ಹೂಡ ಭರವಸೆ ಮೂಡಿಸಿದ್ದಾರೆ. ಹೀಗಾಗಿ ಇವರು ತಂಡದಲ್ಲಿರುವುದು ಖಚಿತ.

ವೈಯಕ್ತಿಕ ಕಾರಣಗಳಿಂದ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದ ಕೆಎಲ್‌ ರಾಹುಲ್‌ ಸೋಮವಾರ ತಂಡವನ್ನು ಸೇರಿಕೊಂಡಿದ್ದಾರೆ. ಆದರೆ, ಅವರು 3 ದಿನಗಳ ಕ್ವಾರಂಟೈನ್‌ನಲ್ಲಿ ಇರ್ತಾರಾ ಅಥವಾ ನೇರವಾಗಿ ಪಂದ್ಯಕ್ಕೆ ಲಭ್ಯರಿರುತ್ತಾರ ಎಂಬುದನ್ನು ಬಿಸಿಸಿಐ ಈವರೆಗೆ ಹೇಳಿಲ್ಲ. ಅವರು ಮೂರು ದಿನಗಳ ಕ್ವಾರಂಟೈನ್​ನಲ್ಲಿ ಇರಬೇಕಾದರೆ ಎರಡನೇ ಏಕದಿನದಿಂದ ಹೊರಗುಳಿಯಬೇಕಾಗುತ್ತದೆ. ಇತ್ತ ಮಾಯಾಂಕ್‌ ಅಗರ್ವಾಲ್‌ ಅವರ ಕ್ವಾರಂಟೈನ್‌ ಅವಧಿ ಕೂಡ ಮುಗಿದಿದೆ. ಹಾಗೆಯೇ ನವದೀಪ್‌ ಸೈನಿ ಕೋವಿಡ್‌ ಪಾಸಿಟಿವ್‌ನಿಂದ ಚೇತರಿಸಿಕೊಂಡಿದ್ದಾರೆ. ಇವರಿಬ್ಬರೂ ತಂಡವನ್ನು ಸೇರಿಕೊಂಡಿದ್ದಾರೆ.

ರಾಹುಲ್ ಆಡುವ ಬಳಗಕ್ಕೆ ಸೇರ್ಪಡೆಯಾದರೆ ಇಶಾನ್ ಕಿಶನ್ ಹೊರಗುಳಿಯುವುದು ಬಹುತೇಕ ಖಚಿತ. ಅಂತೆಯೆ ಮೊದಲ ಏಕದಿನ ಪಂದ್ಯದಲ್ಲಿ ಸ್ಪಿನ್ನರ್​ಗಳು ಮಿಂಚಿರುವುದರಿಂದ ಓರ್ವ ವೇಗಿಯನ್ನು ಕೈಬಿಟ್ಟು ಕುಲ್ದೀಪ್ ಯಾದವ್​ಗೆ ಅವಕಾಶ ನೀಡಿದರೆ ಅಚ್ಚರಿ ಪಡಬೇಕಿಲ್ಲ. ಯಾಕಂದ್ರೆ ಮೊದಲ ಏಕದಿನ ಪಂದ್ಯ ನಡೆದ ಕ್ರೀಡಾಂಗಣದಲ್ಲೇ ಎರಡನೇ ಏಕದಿನ ಪಂದ್ಯ ಕೂಡ ನಡೆಯಲಿದೆ.

ಭಾರತದ ಸಂಭಾವ್ಯ ಪ್ಲೇಯಿಂಗ್ XI:

ರೋಹಿತ್‌ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್‌ ಕೊಹ್ಲಿ, ರಿಷಭ್‌ ಪಂತ್(ವಿ.ಕೀ), ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ವಾಷಿಂಗ್ಟನ್ ಸುಂದರ್, ಶಾರ್ದುಲ್‌ ಠಾಕೂರ್‌/ ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್‌, ಮೊಹಮ್ಮದ್‌ ಸಿರಾಜ್‌, ಪ್ರಸಿಧ್‌ ಕೃಷ್ಣ.

Rahul Dravid: ಬ್ಯಾಟ್ಸ್​ಮನ್​ಗಳಿಗೆ ತಾವೇ ಬೌಲಿಂಗ್ ಮಾಡುತ್ತಿರುವ ಕೋಚ್ ದ್ರಾವಿಡ್: ಭಾರತದ ಕಠಿಣ ಅಭ್ಯಾಸ

Rohit Sharma: ರೋಹಿತ್ ಶರ್ಮಾ ಒಬ್ಬ ಅಂಜುಬುರುಕ: ಹಿಟ್​ಮ್ಯಾನ್ ವಿರುದ್ಧ ಕೆಂಡ ಕಾರುತ್ತಿರುವ ಫ್ಯಾನ್ಸ್

ಹೊಯ್ಸಳ ಡ್ರೈವರ್ ಜತೆ ಗೃಹಿಣಿ ಎಸ್ಕೇಪ್
ಹೊಯ್ಸಳ ಡ್ರೈವರ್ ಜತೆ ಗೃಹಿಣಿ ಎಸ್ಕೇಪ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್