ಭಾರತ ಕ್ರಿಕೆಟ್ ತಂಡ ಬಾಂಗ್ಲಾದೇಶ (India vs Bangladesh) ನಾಡಿಗೆ ತೆರಳಿದ್ದು ಏಕದಿನ ಮತ್ತು ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಈಗಾಗಲೇ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಸೇರಿದಂತೆ ಏಕದಿನ ಸರಣಿಗೆ ಆಯ್ಕೆ ಆಗಿರುವ ಎಲ್ಲ ಆಟಗಾರರು ಢಾಕಾದಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ಐಸಿಸಿ ಟಿ20 ವಿಶ್ವಕಪ್ ಬಳಿಕ ವಿಶ್ರಾಂತಿಯಲ್ಲಿದ್ದ ಪ್ಲೇಯರ್ಸ್ ಈ ಸರಣಿ ಮೂಲಕ ತಂಡ ಸೇರಿಕೊಂಡಿದ್ದಾರೆ. ವಿಶ್ವಕಪ್ನ ಸೆಮಿ ಫೈನಲ್ನಲ್ಲಿ ಸೋತು ನಿರಾಸೆ ಅನುಭವಿಸಿದ್ದ ಭಾರತ ಇದೀಗ ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್ (ODI World Cup) ಮೇಲೆ ಕಣ್ಣಿಟ್ಟಿದೆ. ಇದಕ್ಕಾಗಿ ಈ ಸರಣಿ ಮೂಲಕವೇ ಕಾರ್ಯತಂತ್ರ ರೂಪಿಸಬೇಕಿದೆ. ಭಾನುವಾರ ಢಾಕಾದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವೆ ಮೊದಲ ಏಕದಿನ ಪಂದ್ಯ ನಡೆಯಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಇಂದು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ.
cಮುಖ್ಯವಾಗಿ ಉಪ ನಾಯಕ ಕೆಎಲ್ ರಾಹುಲ್ ಫಾರ್ಮ್ ಬಗ್ಗೆ ಪ್ರಶ್ನೆಗಳು ಏಳಲಿವೆ. ಕಳೆದ ಕೆಲವು ತಿಂಗಳುಗಳಿಂದ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿರುವ ರಾಹುಲ್ ಸ್ಥಾನದ ಬಗ್ಗೆ ರೋಹಿತ್ ತೀರ್ಮಾನ ಏನು ನೋಡಬೇಕಿದೆ. ಧವನ್ ಕೂಡ ತಂಡದಲ್ಲಿ ಇರುವುದರಿಂದ ಓಪನಿಂಗ್ ಜೋಡಿ ಯಾರು ಎಂಬ ಪ್ರಶ್ನೆ ಕೂಡ ಕಾಡಿದೆ.
ಭಾರತೀಯರ ಭರ್ಜರಿ ಅಭ್ಯಾಸ:
ಟೀಮ್ ಇಂಡಿಯಾ ಆಟಗಾರರು ಢಾಕಾದಲ್ಲಿ ಶುಕ್ರವಾರ ಕೆಲ ಹೊತ್ತು ಅಭ್ಯಾಸ ನಡೆಸಿದರು. ರೋಹಿತ್, ರಾಹುಲ್ ಹಾಗೂ ಕೊಹ್ಲಿ ನೆಟ್ನಲ್ಲಿ ಬ್ಯಾಟಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವುದು ಕಂಡುಬಂತು. ಇಂದು ಇಡೀ ದಿನ ಎಲ್ಲ ಆಟಗಾರರು ಅಭ್ಯಾಸ ಸೆಷನ್ನಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮುನ್ನ ಭಾರತ ತಂಡದ ಆಟಗಾರರನ್ನು ಢಾಕಾದಲ್ಲಿ ಮಕ್ಕಳು ಹೂ ನೀಡುವ ಮೂಲಕ ಸ್ವಾಗತಿಸಿದರು. ನ್ಯೂಜಿಲೆಂಡ್ ಪ್ರವಾಸದಲ್ಲಿದ್ದ ಶಿಖರ್ ಧವನ್, ವಾಷಿಂಗ್ಟನ್ ಸುಂದರ್ ಮತ್ತು ಇತರರು ತಡವಾಗಿ ಬಾಂಗ್ಲಾಕ್ಕೆ ಆಗಮಿಸಿದ್ದಾರೆ.
ಕಾಮೆಂಟರಿ ವೇಳೆ ರಿಕಿ ಪಾಂಟಿಂಗ್ಗೆ ಎದೆನೋವು; ಆಸ್ಪತ್ರೆಗೆ ದಾಖಲಾದ ಆಸೀಸ್ ಮಾಜಿ ನಾಯಕ
ವೇಳಾಪಟ್ಟಿ:
ಬಾಂಗ್ಲಾದೇಶ ವಿರುದ್ಧ ಭಾರತ ಮೂರು ಪಂದ್ಯಗಳ ಏಕದಿನ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಡಿಸೆಂಬರ್ 4 ರಂದು ಮೊದಲ ಏಕದಿನ ಪಂದ್ಯ ನಡೆಯಲಿದ್ದು, ಡಿ. 7 ರಂದು ದ್ವಿತೀಯ ಏಕದಿನ ಮತ್ತು ತೃತೀಯ ಪಂದ್ಯ ಡಿಸೆಂಬರ್ 10ಕ್ಕೆ ಆಯೋಜಿಸಲಾಗಿದೆ. ಮೂರೂ ಏಕದಿನ ಪಂದ್ಯ ಢಾಕಾದ ಬಾಂಗ್ಲಾದೇಶ ರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ. ಬಳಿಕ ಚಿತ್ತಗಾಂಗ್ನಲ್ಲಿ ಜರುಗಲಿರುವ ಮೊದಲ ಟೆಸ್ಟ್ ಡಿಸೆಂಬರ್ 14-18ರ ವರೆಗೆ ಇರಲಿದೆ. ನಂತರ ಡಿಸೆಂಬರ್ 22-26 ಎರಡನೇ ಟೆಸ್ಟ್ ಇದ್ದು ಢಾಕಾದಲ್ಲಿ ಆಯೋಜಿಸಲಾಗಿದೆ.
ಬಾಂಗ್ಲಾದೇಶ ತಂಡ: ತಮೀಮ್ ಇಕ್ಬಾಲ್ (ನಾಯಕ), ಲಿಟನ್ ದಾಸ್, ಅನಾಮುಲ್ ಹಕ್ ಬಿಜೋಯ್, ಶಕಿಬ್ ಅಲ್ ಹಸನ್, ಮುಷ್ಫೀಕುರ್ ರಹೀಮ್, ಅಫೀಫ್ ಹುಸೇನ್, ಯಾಸಿರ್ ಅಲಿ, ಮೆಹಿದಿ ಹಸನ್ ಮಿರಾಜ್, ಮುಸ್ತಫಿಜುರ್ ರೆಹಮಾನ್, ಹಸನ್ ಮಹಮೂದ್, ಎಬಾಡೋತ್ ಹುಸೇನ್, ನಸ್ಮದ್, ನಸ್ಮದ್, ನಸ್ಮದ್ ಶಾಂತೋ, ನೂರುಲ್ ಹಸನ್ ಸೋಹನ್.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪ ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಶಹ್ಬಾಜ್ ಅಹಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್, ಕುಲದೀಪ್ ಸೇನ್.
ಹೆಚ್ಚಿನ ಕ್ರೀಡಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:59 am, Sat, 3 December 22