Rohit Sharma: ಇಂದು ಮಧ್ಯಾಹ್ನ 1 ಗಂಟೆಗೆ ರೋಹಿತ್ ಶರ್ಮಾ ಸುದ್ದಿಗೋಷ್ಠಿ: ಮಹತ್ವದ ಹೇಳಿಕೆ ಸಾಧ್ಯತೆ

IND vs SL 1st test: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭಾರತ-ಶ್ರೀಲಂಕಾ ಮೊದಲ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ ಹಿಟ್​ಮ್ಯಾನ್ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಇದರಲ್ಲಿ ರೋಹಿತ್​ಗೆ ಪ್ರಶ್ನೆಗಳ ಮಳೆ ಸುರಿಯಲಿದೆ.

Rohit Sharma: ಇಂದು ಮಧ್ಯಾಹ್ನ 1 ಗಂಟೆಗೆ ರೋಹಿತ್ ಶರ್ಮಾ ಸುದ್ದಿಗೋಷ್ಠಿ: ಮಹತ್ವದ ಹೇಳಿಕೆ ಸಾಧ್ಯತೆ
Rohit Sharma press conference IND vs SL 1st Test
Follow us
| Updated By: Vinay Bhat

Updated on:Mar 03, 2022 | 12:10 PM

ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವಣ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಮಾರ್ಚ್ 4 ರಂದು ಕ್ವಿಕ್ ಸ್ಟಾರ್ಟ್ ಸಿಗಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಪ್ರಥಮ ಟೆಸ್ಟ್ ನಡೆಯಲಿದ್ದು, ಭಾರತ ತಂಡ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಪ್ರಮುಖವಾಗಿ 100ನೇ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಆಟಕ್ಕೆ ಇಡೀ ಭಾರತವೇ ಕಾದುಕುಳಿತಿದೆ. ಕೊಹ್ಲಿ ಆಟದ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಬಿಸಿಸಿಐ ವಿಶೇಷವಾಗಿ ಅಭಿಮಾನಿಗಳಿಗೂ ಅವಕಾಶ ನೀಡಿದೆ. ಇದರ ನಡುವೆ ರಿಷಭ್ ಪಂತ್, ಮೊಹಮ್ಮದ್ ಶಮಿ ಸೇರಿದಂತೆ ವಿಶ್ರಾಂತಿಯಲ್ಲಿದ್ದ ಕೆಲ ಆಟಗಾರರು ತಂಡಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ. ಇದೀಗ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಮೊದಲ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ ಹಿಟ್​ಮ್ಯಾನ್ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಇದರಲ್ಲಿ ರೋಹಿತ್​ಗೆ ಪ್ರಶ್ನೆಗಳ ಮಳೆ ಸುರಿಯಲಿದೆ.

ರೋಹಿತ್ ಶರ್ಮಾ ಅವರಿಗೆ ಈ ಟೆಸ್ಟ್ ತುಂಬಾನೆ ಮುಖ್ಯವಾಗಿದೆ. ಯಾಕಂದ್ರೆ ಕೊಹ್ಲಿ ನಾಯಕತ್ವ ತ್ಯಜಿಸಿದ ಬಳಿಕ ಮೊದಲ ಬಾರಿಗೆ ಟೆಸ್ಟ್​ ಕ್ಯಾಪ್ಟನ್ ಆಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಸೀಮಿತ ಓವರ್​ಗಳ ಸರಣಿಯಲ್ಲಿ ಸತತ ಗೆಲುವನ್ನು ಕಂಡಿರುವ ರೋಹಿತ್ ಅವರ ಟೆಸ್ಟ್​ ಆರಂಭ ಹೇಗಿರಲಿದೆ ಎಂಬುದು ಕುತೂಹಲ. ಅಲ್ಲದೆ ನಾಯಕನಾಗಿ ಭಾರತದ ಮಧ್ಯಮ ಕ್ರಮಾಂಕವನ್ನು ಯಾವರೀತಿ ನಿಭಾಹಿಸುತ್ತಾರೆ ಎಂದು ನೋಡಬೇಕಿದೆ. ಯಾಕೆಂದರೆ ಹಿರಿಯ ಆಟಗಾರರಾದ ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯಾ ರಹಾನೆ ಅವರನ್ನು ಟೆಸ್ಟ್ ಸರಣಿಯಿಂದ ಕೈಬಿಡಲಾಗಿದೆ. ಹೀಗಾಗಿ ಯುವ ಆಟಗಾರರನ್ನು ರೋಹಿತ್ ಯಾವರೀತಿ ಉಪಯೋಗಿಸಬೇಕೆಂದು ಆಲೋಚಿಸಬೇಕಿದೆ.

ರೋಹಿತ್ ಶರ್ಮಾಗೆ ಸುದ್ದಿಗೋಷ್ಠಿಯಲ್ಲಿ ಎದುರಾಗಬಹುದಾದ ಪ್ರಮುಖ ಪ್ರಶ್ನೆಗಳು:

  • ಟೆಸ್ಟ್ ನಾಯಕತ್ವಕ್ಕೆ ಪದಾರ್ಪಣೆ ಮಾಡಲಿರುವ ಬಗ್ಗೆ ಏನು ಹೇಳಲು ಬಯಸುತ್ತೀರಿ?
  • ವಿರಾಟ್ ಕೊಹ್ಲಿ 100ನೇ ಟೆಸ್ಟ್​ ಬಗ್ಗೆ ನಿಮ್ಮ ಮಾತು
  • ಹನುಮಾ ವಿಹಾರಿ, ಶ್ರೇಯಸ್ ಅಯ್ಯರ್ ಮತ್ತು ಶುಭ್ಮನ್ ಗಿಲ್ ಪೈಕಿ ಯಾರಿಗೆ ಸ್ಥಾನ?
  • ಆರ್. ಅಶ್ವಿನ್ ಇಂಜುರಿಯಿಂದ ಗುಣಮುಖರಾಗಿ ಫಿಟ್ ಆಗಿದ್ದಾರಾ?
  • ಮೊದಲ ಟೆಸ್ಟ್​ಗೆ ಭಾರತದ ಬೌಲಿಂಗ್ ಪಡೆ ಹೇಗಿರಲಿದೆ?

ಮುಖ್ಯವಾಗಿ ರೋಹಿತ್ ಅವರು ಶುಭ್ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಆಡುವ ಬಗ್ಗೆ ಮಾಹಿತಿ ನೀಡುವ ಸಾಧ್ಯತೆ ಇದೆ. ಮಯಾಂಕ್ ಇನ್ನಿಂಗ್ಸ್ ಆರಂಭಿಸಿದರೆ ಗಿಲ್ ಮತ್ತು ಅಯ್ಯರ್ ಮಧ್ಯಮ ಕ್ರಮಾಂಕದಲ್ಲಿ ಟೀಮ್ ಇಂಡಿಯಾಕ್ಕೆ ಬಲ ತುಂಬಲಿದ್ದಾರೆ. ಇನ್ನು ಉಪ ನಾಯಕನಾಗಿರುವ ಜಸ್​ಪ್ರೀತ್ ಬುಮ್ರಾ ಅವರು ಈಗಾಗಲೇ ರವೀಂದ್ರ ಜಡೇಜಾ ಮತ್ತು ಆರ್. ಅಶ್ವಿನ್ ನೆಟ್​ನಲ್ಲಿ ಅತ್ಯುತ್ತಮ ಅಭ್ಯಾಸ ನಡೆಸುತ್ತಿದ್ದಾರೆ ಎಂದು ಹೇಳುವ ಮೂಲಕ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹಿಂಟ್ ಕೊಟ್ಟಿದ್ದಾರೆ.

ಪಂದ್ಯ ಎಷ್ಟು ಗಂಟೆಗೆ ಆರಂಭ?:

ಭಾರತ ಹಾಗೂ ಶ್ರೀಲಂಕಾ ನಡುವಣ ಮೊದಲ ಟೆಸ್ಟ್ ಪಂದ್ಯ ಮೊಹಾಲಿಯ ಪಂಜಾಬ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊದಲ ಟೆಸ್ಟ್ ಆಯೋಜನೆ ಮಾಡಲಾಗಿದೆ. ಬೆಳಗ್ಗೆ 9:30ಕ್ಕೆ ಮ್ಯಾಚ್ ಶುರುವಾಗಲಿದ್ದು, ಸರಿಯಾಗಿ 9 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಟಾರ್ ಸ್ಫೋರ್ಟ್ಸ್​ ನೆಟ್​ವರ್ಕ್​ನಲ್ಲಿ ನೇರಪ್ರಸಾರ ಕಾಣಲಿದೆ. ಆನ್​ಲೈನ್​ನಲ್ಲಾದರೆ ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ನಲ್ಲಿ ಲೈವ್ ವೀಕ್ಷಿಸಬಹುದು.

IND vs SL: ಬಲಿಷ್ಠವಾಗಿದೆ ಭಾರತ: ಮೊದಲ ಟೆಸ್ಟ್​ಗೆ ಟೀಮ್ ಇಂಡಿಯಾ ಪ್ಲೇಯಿಂಗ್ XI ಹೇಗಿರಲಿದೆ?

IND vs SL Test: ಭಾರತ- ಶ್ರೀಲಂಕಾ ಮೊದಲ ಟೆಸ್ಟ್ ಯಾವಾಗ?, ಎಷ್ಟು ಗಂಟೆಗೆ?, ಯಾವುದರಲ್ಲಿ ನೇರಪ್ರಸಾರ?

Published On - 12:10 pm, Thu, 3 March 22

ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್
ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ