Rohit Sharma: ಕೊಹ್ಲಿ, ಗಪ್ಟಿಲ್​ನ ಹಿಂದಿಕ್ಕಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್

| Updated By: ಝಾಹಿರ್ ಯೂಸುಫ್

Updated on: Jul 30, 2022 | 10:28 AM

India vs West Indies 1st T20: 191 ರನ್​ಗಳ ಬೃಹತ್ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ಟೀಮ್ ಇಂಡಿಯಾದ ಕರಾರುವಾಕ್ ದಾಳಿ ಮುಂದೆ ರನ್​ಗಳಿಸಲು ಪರದಾಡಿದರು. ಪರಿಣಾಮ 101 ರನ್​ಗಳಿಸುವಷ್ಟರಲ್ಲಿ 8 ವಿಕೆಟ್ ಕಳೆದುಕೊಂಡಿತು.

Rohit Sharma: ಕೊಹ್ಲಿ, ಗಪ್ಟಿಲ್​ನ ಹಿಂದಿಕ್ಕಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್
Rohit Sharma
Follow us on

ಭಾರತ-ವೆಸ್ಟ್ ಇಂಡೀಸ್ (WI vs IND) ನಡುವಣ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ (Rohit Sharma) ಅರ್ಧಶತಕ ಬಾರಿಸಿ ಮಿಂಚಿದ್ದರು. ಕೇವಲ 44 ಎಸೆತಗಳಲ್ಲಿ 64 ರನ್ ಬಾರಿಸುವ ಮೂಲಕ ಹಿಟ್​ಮ್ಯಾನ್ ವಿಶ್ವ ದಾಖಲೆಯನ್ನೂ ಕೂಡ ಬರೆದಿದ್ದು ವಿಶೇಷ. ಅಂದರೆ ಇದೀಗ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟ್ಸ್​ಮನ್ ಎಂಬ ದಾಖಲೆ ರೋಹಿತ್ ಶರ್ಮಾ ಪಾಲಾಗಿದೆ.  ಇದಕ್ಕೂ ಮುನ್ನ ಈ ದಾಖಲೆ ನ್ಯೂಜಿಲೆಂಡ್​ನ ಮಾರ್ಟಿನ್ ಗಪ್ಟಿಲ್ ಹೆಸರಿನಲ್ಲಿತ್ತು. ಮಾರ್ಟಿನ್ ಗಪ್ಟಿಲ್ ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 3399 ರನ್ ಬಾರಿಸಿದ್ದಾರೆ. ಇದೀಗ ಈ ದಾಖಲೆಯನ್ನು  ರೋಹಿತ್ ಶರ್ಮಾ ಮುರಿದು ಅಗ್ರಸ್ಥಾನಕ್ಕೇರಿದ್ದಾರೆ.

ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ ಒಟ್ಟು 3443 ರನ್ ಬಾರಿಸುವ ಮೂಲಕ ಅತೀ ಹೆಚ್ಚು ರನ್​ ಬಾರಿಸಿದ ಬ್ಯಾಟ್ಸ್​ಮನ್ ಎಂಬ ವಿಶ್ವದ ದಾಖಲೆ ಬರೆದಿದ್ದಾರೆ. ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದರೆ, ಮಾರ್ಟಿನ್ ಗಪ್ಟಿಲ್ (3399) 2ನೇ ಸ್ಥಾನದಲ್ಲಿದ್ದಾರೆ. ಇನ್ನು ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ (3308) ಇರುವುದು ವಿಶೇಷ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ರೋಹಿತ್ ಶರ್ಮಾ ಅವರ ಅರ್ಧಶತಕ ಹಾಗೂ ದಿನೇಶ್ ಕಾರ್ತಿಕ್ ಅವರ ಸ್ಪೋಟಕ 41 ರನ್​ಗಳ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 190 ರನ್​ ಕಲೆಹಾಕಿತು. 191 ರನ್​ಗಳ ಬೃಹತ್ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ಟೀಮ್ ಇಂಡಿಯಾದ ಕರಾರುವಾಕ್ ದಾಳಿ ಮುಂದೆ ರನ್​ಗಳಿಸಲು ಪರದಾಡಿದರು. ಪರಿಣಾಮ 101 ರನ್​ಗಳಿಸುವಷ್ಟರಲ್ಲಿ 8 ವಿಕೆಟ್ ಕಳೆದುಕೊಂಡಿತು.

ಇದನ್ನೂ ಓದಿ
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದಾಗ್ಯೂ 20 ಓವರ್​ಗಳ ಬ್ಯಾಟಿಂಗ್ ಪೂರ್ಣಗೊಳಿಸಿದ ವಿಂಡೀಸ್ ಅಂತಿಮವಾಗಿ 8 ವಿಕೆಟ್ ನಷ್ಟಕ್ಕೆ 122 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಟೀಮ್ ಇಂಡಿಯಾ 68 ರನ್​ಗಳ ಭರ್ಜರಿ ಜಯ ಸಾಧಿಸಿತು. ಕೇವಲ 19 ಎಸೆತಗಳಲ್ಲಿ 4 ಫೋರ್ ಹಾಗೂ 2 ಭರ್ಜರಿ ಸಿಕ್ಸ್ ಸಿಡಿಸಿ 41 ರನ್​ ಬಾರಿಸಿದ್ದ ದಿನೇಶ್ ಕಾರ್ತಿಕ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.