AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಸೊನ್ನೆ ಸುತ್ತಿ ಅತ್ಯಂತ ಕೆಟ್ಟ ದಾಖಲೆ ಬರೆದ ರೋಹಿತ್ ಶರ್ಮಾ

Rohit Sharma: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

Rohit Sharma: ಸೊನ್ನೆ ಸುತ್ತಿ ಅತ್ಯಂತ ಕೆಟ್ಟ ದಾಖಲೆ ಬರೆದ ರೋಹಿತ್ ಶರ್ಮಾ
Rohit Sharma
TV9 Web
| Edited By: |

Updated on: Aug 02, 2022 | 11:58 AM

Share

ಭಾರತ-ವೆಸ್ಟ್ ಇಂಡೀಸ್ (India vs West Indies) ನಡುವಣ ಐದು ಪಂದ್ಯಗಳ ಸರಣಿಯ 2ನೇ ಪಂದ್ಯವು ಸೋಮವಾರ ಸೇಂಟ್ ಕಿಟ್ಸ್​ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಇನ್ನೂ ನಾಲ್ಕು ಎಸೆತಗಳು ಬಾಕಿ ಇರುವಂತೆಯೇ ವೆಸ್ಟ್ ಇಂಡೀಸ್ ತಂಡ ಗೆಲುವು ದಾಖಲಿಸಿದೆ. ಈ ಮೂಲಕ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಟೀಮ್ ಇಂಡಿಯಾ (Team India) ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕ ರೋಹಿತ್ ಶರ್ಮಾ (Rohit Sharma) ಪಂದ್ಯದ ಮೊದಲ ಎಸೆತದಲ್ಲೇ ಒಬೆಡ್ ಮೆಕಾಯ್​ಗೆ ಶೂನ್ಯಕ್ಕೆ ವಿಕೆಟ್​ ಒಪ್ಪಿಸಿದ್ದರು. ಈ ಡಕ್ ಔಟ್​ನೊಂದಿಗೆ ರೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಅತ್ಯಂತ ಕೆಟ್ಟ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡರು. ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ ಮೊದಲ ಎಸೆತಕ್ಕೆ ಔಟಾದ ಆರಂಭಿಕ ಆಟಗಾರ ಎನ್ನುವ ಹೀನಾಯ ದಾಖಲೆಯೊಂದು ಇದೀಗ ಹಿಟ್​ಮ್ಯಾನ್ ಪಾಲಾಗಿದೆ.

ಹಿಟ್​ಮ್ಯಾನ್ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ 6 ಬಾರಿ ಶೂನ್ಯಕ್ಕೆ ಔಟ್ ಆಗಿದ್ದಾರೆ. ಈ ಮೂಲಕ ಕೆಟ್ಟ ದಾಖಲೆಯೊಂದನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಕೆಎಲ್ ರಾಹುಲ್ ಹೆಸರಿನಲ್ಲಿತ್ತು. ಆದರೀಗ ರಾಹುಲ್​ಗಿಂತ ಮತ್ತೆರಡು ಬಾರಿ ಶೂನ್ಯಕ್ಕೆ ಔಟಾಗುವ ಮೂಲಕ ಹಿಟ್​ಮ್ಯಾನ್ ಕೆಟ್ಟ ದಾಖಲೆಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಆರಂಭಿಕರಾಗಿ ಶೂನ್ಯಕ್ಕೆ ಅತೀ ಹೆಚ್ಚು ಬಾರಿ ಔಟಾದ ಆಟಗಾರರು:

  • ರೋಹಿತ್ ಶರ್ಮಾ- 6
  • ಕೆಎಲ್ ರಾಹುಲ್- 4
  • ಗೌತಮ್ ಗಂಭೀರ್- 2
  • ಅಜಿಂಕ್ಯ ರಹಾನೆ- 2
  • ಶಿಖರ್ ಧವನ್- 2

ಹಿಟ್​ಮ್ಯಾನ್ ವಿಶ್ವ ದಾಖಲೆ: ಇದಾಗ್ಯೂ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ವಿಶ್ವ ದಾಖಲೆ ಹೊಂದಿದ್ದಾರೆ. ಭಾರತ ತಂಡದ ಪರ 130 ಟಿ20 ಪಂದ್ಯಗಳನ್ನು ಆಡಿರುವ ಹಿಟ್​ಮ್ಯಾನ್​ 122 ಇನ್ನಿಂಗ್ಸ್‌ಗಳಲ್ಲಿ 32.17 ಸರಾಸರಿಯಲ್ಲಿ 3443 ರನ್ ಗಳಿಸಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ ನಾಲ್ಕು ಶತಕ ಮತ್ತು 27 ಅರ್ಧ ಶತಕಗಳು ಮೂಡಿಬಂದಿವೆ. ಇನ್ನು ಈ ಪಟ್ಟಿಯಲ್ಲಿ ನ್ಯೂಜಿಲೆಂಡ್ ಆರಂಭಿಕ ಬ್ಯಾಟ್ಸ್‌ಮನ್ ಮಾರ್ಟಿನ್ ಗಪ್ಟಿಲ್ ಎರಡನೇ ಸ್ಥಾನದಲ್ಲಿದ್ದಾರೆ. ಗಪ್ಟಿಲ್ 112 ಇನ್ನಿಂಗ್ಸ್‌ಗಳಲ್ಲಿ 32.37 ಸರಾಸರಿಯಲ್ಲಿ 3399 ರನ್ ಕಲೆಹಾಕಿದ್ದಾರೆ.

Follow Us
TV9 Web
TV9 Web

TV9 Kannada

Read More
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ
ಕಾಂಗ್ರೆಸ್ ನಾಯಕರ ವೈಯಕ್ತಿಕ ಟೀಕೆಗೆ ಯದುವೀರ್ ಒಡೆಯರ್ ಖಡಕ್ ತಿರುಗೇಟು
ಕಾಂಗ್ರೆಸ್ ನಾಯಕರ ವೈಯಕ್ತಿಕ ಟೀಕೆಗೆ ಯದುವೀರ್ ಒಡೆಯರ್ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು