AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಐನಿಂದಲೂ ರೋಹಿತ್​​ ಶರ್ಮಾ ನಿವೃತ್ತಿ? ಜುಲೈ 19ರಂದು ಲಾರ್ಡ್ಸ್‌ನಲ್ಲಿ ಹಿಟ್​​ಮ್ಯಾನ್​​ ಕೊನೆಯ ಪಂದ್ಯ?

Rohit Sharma: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಅಂತಿಮ ಏಕದಿನ ಪಂದ್ಯದ ಬೆನ್ನಲ್ಲೇ ರೋಹಿತ್ ಶರ್ಮಾ ಒಡಿಐ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ. ಜುಲೈ 19ರ ಲಾರ್ಡ್ಸ್ ಪಂದ್ಯವೇ ಹಿಟ್‌ಮ್ಯಾನ್ ಕೊನೆಯ ಪಂದ್ಯವಾಗುವ ಸಾಧ್ಯತೆಯಿದೆ.  ಇದೇ ವೇಳೆ, ರೋಹಿತ್ ಶರ್ಮಾ ಅವರ ಪೋಷಕರಾದ ಗುರುನಾಥ್ ಶರ್ಮಾ ಮತ್ತು ಪೂರ್ಣಿಮಾ ಶರ್ಮಾ ಅವರು ಕೂಡ ಲಂಡನ್‌ಗೆ ಆಗಮಿಸಿದ್ದಾರೆ ಎಂಬ ಮಾಹಿತಿಯೂ ಹೊರಬಿದ್ದಿರೋದು ಅನುಮಾನ ಹೆಚ್ಚಿಸಿದೆ.

ಒಡಿಐನಿಂದಲೂ ರೋಹಿತ್​​ ಶರ್ಮಾ ನಿವೃತ್ತಿ? ಜುಲೈ 19ರಂದು ಲಾರ್ಡ್ಸ್‌ನಲ್ಲಿ ಹಿಟ್​​ಮ್ಯಾನ್​​ ಕೊನೆಯ ಪಂದ್ಯ?
ರೋಹಿತ್​​ ಶರ್ಮಾ ನಿವೃತ್ತಿ
ಪ್ರಸನ್ನ ಹೆಗಡೆ
|

Updated on:Jul 17, 2026 | 1:01 PM

Share

ಭಾರತ-ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯಕ್ಕೂ ಮುನ್ನ ಭಾರತ ತಂಡದ ಹಿರಿಯ ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಅವರ ಭವಿಷ್ಯ ಕುರಿತು ಭಾರೀ ಚರ್ಚೆ ಆರಂಭವಾಗಿದೆ. ವರದಿಗಳ ಪ್ರಕಾರ, ಜುಲೈ 19ರಂದು ಲಾರ್ಡ್ಸ್‌ನಲ್ಲಿ ನಡೆಯಲಿರುವ ಪಂದ್ಯವೇ ರೋಹಿತ್ ಅವರ ಕೊನೆಯ ಏಕದಿನ ಪಂದ್ಯವಾಗಬಹುದು ಎಂಬ ಮಾತುಗಳು ಕೇಳಿಬಂದಿವೆ.

ಏಕದಿನ ತಂಡಕ್ಕೆ ಆಯ್ಕೆ ಮಾಡದಿರಲು ನಿರ್ಧಾರ?

ಬಿಸಿಸಿಐ ಆಯ್ಕೆ ಸಮಿತಿ ಹಾಗೂ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ರೋಹಿತ್ ಶರ್ಮಾ ಅವರೊಂದಿಗೆ ಭವಿಷ್ಯದ ಯೋಜನೆಗಳ ಕುರಿತು ಮಾತುಕತೆ ನಡೆಸಿದ್ದು, 2027ರ ಏಕದಿನ ವಿಶ್ವಕಪ್‌ನ್ನು ಗಮನದಲ್ಲಿಟ್ಟುಕೊಂಡು ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡುವ ಉದ್ದೇಶದಿಂದ ರೋಹಿತ್ ಅವರನ್ನು ಮುಂದಿನ ಏಕದಿನ ತಂಡಕ್ಕೆ ಆಯ್ಕೆ ಮಾಡದಿರಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಐಎಎನ್‌ಎಸ್‌ಗೆ ಮಾತನಾಡಿರುವುದಾಗಿ ಹೇಳಲಾಗಿರುವ ಬಿಸಿಸಿಐ ಮೂಲವೊಂದು, ಇನ್ನು ಮುಂದೆ ರೋಹಿತ್ ಶರ್ಮಾ ಅವರನ್ನು ಏಕದಿನ ತಂಡಕ್ಕೆ ಆಯ್ಕೆ ಮಾಡದಿರಲು ಆಯ್ಕೆ ಸಮಿತಿ ನಿರ್ಧರಿಸಿದೆ. ಅವರು ಗೌರವಯುತವಾಗಿ ನಿವೃತ್ತಿ ಘೋಷಿಸಬೇಕೇ ಅಥವಾ ಇನ್ನೂ ಮುಂದುವರಿಯಬೇಕೇ ಎಂಬುದು ಅವರ ವೈಯಕ್ತಿಕ ನಿರ್ಧಾರ. ಆದರೆ ಆಯ್ಕೆ ಸಮಿತಿಯ ಸಂದೇಶ ಸ್ಪಷ್ಟವಾಗಿದೆ ಎಂದು ತಿಳಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ರೂಟ್ ಅಜೇಯ 99 ರನ್; 2ನೇ ಏಕದಿನ ಗೆದ್ದ ಇಂಗ್ಲೆಂಡ್

ಲಂಡನ್​​ ತಲುಪಿರುವ ಹಿಟ್​​ಮ್ಯಾನ್​​​ ಪೋಷಕರು!

ಇದೇ ವೇಳೆ, ರೋಹಿತ್ ಶರ್ಮಾ ಅವರ ಪೋಷಕರಾದ ಗುರುನಾಥ್ ಶರ್ಮಾ ಮತ್ತು ಪೂರ್ಣಿಮಾ ಶರ್ಮಾ ಅವರು ಕೂಡ ಲಂಡನ್‌ಗೆ ಆಗಮಿಸಿದ್ದಾರೆ ಎಂಬ ಮಾಹಿತಿಯೂ ಹೊರಬಿದ್ದಿದೆ. ರೋಹಿತ್​​ ಕೊನೆ ಪಂದ್ಯವನ್ನು ವೀಕ್ಷಿಸುವ ಸಲುವಾಗಿ ಅವರು ಲಂಡನ್‌ಗೆ ತೆರಳಿದ್ದಾರೆ ಎನ್ನಲಾಗಿದೆಯಾದರೂ, ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ.

ಏಕದಿನ ಕ್ರಿಕೆಟ್​​ನಲ್ಲಿ ರೋಹಿತ್​​ ಶರ್ಮಾ ಸಾಧನೆ

2025ರ ಮೇ 7ರಂದು ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಬಳಿಕ ಟೆಸ್ಟ್ ತಂಡದ ನಾಯಕತ್ವವನ್ನು ಶುಭಮನ್ ಗಿಲ್ ವಹಿಸಿಕೊಂಡಿದ್ದರು. ಏಕದಿನ ಕ್ರಿಕೆಟ್‌ನಲ್ಲಿ ಇದುವರೆಗೆ 286 ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ 11,731 ರನ್‌ಗಳನ್ನು ಗಳಿಸಿದ್ದು, ಭಾರತದ ಶ್ರೇಷ್ಠ ಆರಂಭಿಕ ಬ್ಯಾಟರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ನಾಯಕನಾಗಿ 56 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ ಅವರು, 2023ರ ಏಕದಿನ ವಿಶ್ವಕಪ್‌ನಲ್ಲಿ ಭಾರತವನ್ನು ಫೈನಲ್‌ಗೆ ಕೊಂಡೊಯ್ದಿದ್ದರು. ಅಲ್ಲದೆ, 2025ರ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನೂ ಭಾರತಕ್ಕೆ ಗೆದ್ದುಕೊಟ್ಟಿದ್ದರು.

ಇಂಗ್ಲೆಂಡ್ ವಿರುದ್ಧದ ಪ್ರಸ್ತುತ ಏಕದಿನ ಸರಣಿಯಲ್ಲಿ ರೋಹಿತ್ ಅವರ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿಲ್ಲ. ಮೊದಲ ಪಂದ್ಯದಲ್ಲಿ 11 ರನ್ ಗಳಿಸಿದ್ದ ಅವರು, ಎರಡನೇ ಪಂದ್ಯದಲ್ಲಿ 47 ಎಸೆತಗಳಲ್ಲಿ 26 ರನ್‌ಗಳಿಗೆ ಸೀಮಿತರಾದರು. ಈ ಹಿನ್ನೆಲೆ, ಅವರ ಏಕದಿನ ಭವಿಷ್ಯದ ಬಗ್ಗೆ ಚರ್ಚೆಗಳು ಮತ್ತಷ್ಟು ತೀವ್ರಗೊಂಡಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:55 pm, Fri, 17 July 26

Follow Us
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ
ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ
ಹರಿಯಾಣದಲ್ಲಿ ದೇಶದ ಮೊದಲ 'ಹೈಡ್ರೋಜನ್ ರೈಲಿ'ಗೆ ಪಿಎಂ ಮೋದಿ ಇಂದು ಚಾಲನೆ
ಹರಿಯಾಣದಲ್ಲಿ ದೇಶದ ಮೊದಲ 'ಹೈಡ್ರೋಜನ್ ರೈಲಿ'ಗೆ ಪಿಎಂ ಮೋದಿ ಇಂದು ಚಾಲನೆ
Live: ಮೊದಲ ಆಶಾಢ ಶುಕ್ರವಾರದಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆಯ ನೇರಪ್ರಸಾರ
Live: ಮೊದಲ ಆಶಾಢ ಶುಕ್ರವಾರದಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆಯ ನೇರಪ್ರಸಾರ
'ಆಷಾಢ ಮಾಸ ಶಕ್ತಿ ದೇವತೆಗಳ ಆರಾಧನೆಗೆ ಪ್ರಶಸ್ತವಾದ ಮಾಸ'
'ಆಷಾಢ ಮಾಸ ಶಕ್ತಿ ದೇವತೆಗಳ ಆರಾಧನೆಗೆ ಪ್ರಶಸ್ತವಾದ ಮಾಸ'
ಮೊದಲ ಬಾರಿಗೆ ಇರಾನ್ ಮೇಲೆ ದಾಳಿ ನಡೆಸಿದ ಯುಎಇ
ಮೊದಲ ಬಾರಿಗೆ ಇರಾನ್ ಮೇಲೆ ದಾಳಿ ನಡೆಸಿದ ಯುಎಇ
'ದಿನಕ್ಕೆ 17 ಗಂಟೆ ಓದು, ನಿದ್ದೆಯನ್ನೂ ತ್ಯಜಿಸಿದ್ದೆ';NEET UG ಟಾಪರ್ ಮಾತು
'ದಿನಕ್ಕೆ 17 ಗಂಟೆ ಓದು, ನಿದ್ದೆಯನ್ನೂ ತ್ಯಜಿಸಿದ್ದೆ';NEET UG ಟಾಪರ್ ಮಾತು
ಬೀಳುವ ಸ್ಥಿತಿಯಲ್ಲಿ 141 ವರ್ಷಗಳ ಇತಿಹಾಸವಿರುವ ಹಾರವಾಡ ಸರ್ಕಾರಿ ಶಾಲೆ
ಬೀಳುವ ಸ್ಥಿತಿಯಲ್ಲಿ 141 ವರ್ಷಗಳ ಇತಿಹಾಸವಿರುವ ಹಾರವಾಡ ಸರ್ಕಾರಿ ಶಾಲೆ