Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್ ಬಳಿಕ ಇದೇ ಮೊದಲ ಬಾರಿಗೆ ಕಾಣಿಸಿಕೊಂಡ ರೋಹಿತ್ ಶರ್ಮಾ: ಬೇಸರಗೊಂಡ ಫ್ಯಾನ್ಸ್

Rohit Sharma returned home: ವಿಶ್ವಕಪ್ ಸೋಲಿನ ಬಳಿಕ ಲಂಡನ್‌ ಪ್ರವಾಸ ತೆರಳಿದ್ದ ರೋಹಿತ್ ಶರ್ಮಾ ಅವರು ತಮ್ಮ ಕುಟುಂಬದೊಂದಿಗೆ ಇದೀಗ ತವರಿಗೆ ಮರಳಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಪತ್ನಿ ರಿತಿಕಾ ಸಜ್ದೇಹ್ ಮತ್ತು ಮಗಳು ಸಮೈರಾ ಅವರೊಂದಿಗೆ ಹಿಟ್​ಮ್ಯಾನ್ ಕಾಣಿಸಿಕೊಂಡಿದ್ದಾರೆ. ಇದರ ವಿಡಿಯೋ ವೈರಲ್ ಆಗುತ್ತಿದೆ.

ವಿಶ್ವಕಪ್ ಬಳಿಕ ಇದೇ ಮೊದಲ ಬಾರಿಗೆ ಕಾಣಿಸಿಕೊಂಡ ರೋಹಿತ್ ಶರ್ಮಾ: ಬೇಸರಗೊಂಡ ಫ್ಯಾನ್ಸ್
Rohit Sharma
Follow us
Vinay Bhat
|

Updated on: Dec 05, 2023 | 6:56 AM

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಸುದೀರ್ಘ ರಜೆಯ ಬಳಿಕ ತವರಿಗೆ ಮರಳಿದ್ದಾರೆ. 2023ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೋಲಿನ ನಂತರ ರೋಹಿತ್ ಸಾರ್ವಜನಿಕರ ಮುಂದೆ ಕಾಣಿಸಿಕೊಂಡಿರಲಿಲ್ಲ. ವಿಶ್ವಕಪ್ ನವೆಂಬರ್ 19 ರಂದು ಕೊನೆಗೊಂಡಿತ್ತು ಮತ್ತು ಅದರ ನಂತರ ಹಿಟ್​ಮ್ಯಾನ್ ತಮ್ಮ ಕುಟುಂಬದೊಂದಿಗೆ ವಿದೇಶಿ ಪ್ರವಾಸ ತೆರಳಿದ್ದರು. ಇದೀಗ ರೋಹಿತ್ ಭಾರತಕ್ಕೆ ಬಂದಿದ್ದಾರೆ.

ರೋಹಿತ್ ಶರ್ಮಾ ಮುಂಬೈ ವಿಮಾನ ನಿಲ್ದಾಣದಲ್ಲಿ ಪತ್ನಿ ರಿತಿಕಾ ಸಜ್ದೇಹ್ ಮತ್ತು ಮಗಳು ಸಮೈರಾ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ. ಏರ್ಪೋರ್ಟ್​ನಲ್ಲಿ ಅವರ ವಿಡಿಯೋಗಳು ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿವೆ. ಅಭಿಮಾನಿಗಳು ರೋಹಿತ್ ಶರ್ಮಾ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ರೋಹಿತ್ ಮೊಗದಲ್ಲಿ ದೊಡ್ಡ ನಗು ಇರಲಿಲ್ಲ. ವಿಶ್ವಕಪ್ ಸೋಲಿನಿಂದ ಹೊರಬಂದಂತೆ ಕಾಣುತ್ತಿಲ್ಲ. ಇದನ್ನು ಕಂಡು ಅಭಿಮಾನಿಗಳು ಕೂಡ ಬೇಸರಗೊಂಡಿದ್ದಾರೆ.

ಇದನ್ನೂ ಓದಿ
Image
IPL 2024: ಕೈ ಕೊಡುವ ಭಯದಲ್ಲೇ ಸ್ಟಾರ್ ಆಟಗಾರನ ಕೈ ಬಿಟ್ಟ RCB..!
Image
ಧೋನಿ ನಿವೃತ್ತಿ ಬಳಿಕ CSK ತಂಡಕ್ಕೆ ರಿಷಭ್ ಪಂತ್ ಎಂಟ್ರಿ..!
Image
IPL 2024: CSK ರಾಯುಡು ಸ್ಥಾನಕ್ಕೆ ಕನ್ನಡಿಗ: ಅಶ್ವಿನ್ ಭವಿಷ್ಯ
Image
ಸೂರ್ಯನ ಸಿಡಿಲಬ್ಬರಕ್ಕೆ ಕಿಂಗ್ ಕೊಹ್ಲಿ ದಾಖಲೆ ಶೇಕಿಂಗ್..!

IPL 2024: ಐಪಿಎಲ್ ಆಡದಂತೆ ಸ್ಟಾರ್ ಆಟಗಾರನಿಗೆ ಸೂಚನೆ..!

ಏರ್ಪೋರ್ಟ್​ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ:

ವಿಶ್ವಕಪ್ ಮುಗಿದ ತಕ್ಷಣ ರೋಹಿತ್ ಶರ್ಮಾ ಅವರು ತಮ್ಮ ಕುಟುಂಬದೊಂದಿಗೆ ಲಂಡನ್‌ಗೆ ತೆರಳಿದ್ದರು. ರೋಹಿತ್ ಹೊರತುಪಡಿಸಿ, ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಮತ್ತು ರವೀಂದ್ರ ಜಡೇಜಾ ಸೇರಿದಂತೆ ಇತರ ಆಟಗಾರರು ತಮ್ಮ ವಿದೇಶಿ ಪ್ರವಾಸಕ್ಕೆ ಹೋಗಿದ್ದರು.

ರೋಹಿತ್ ಆಫ್ರಿಕಾ ಸರಣಿಯಲ್ಲಿ ಆಡುವುದಿಲ್ಲ

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಪ್ರವಾಸದಿಂದ ವಿರಾಮ ತೆಗೆದುಕೊಂಡಿದ್ದಾರೆ. ಅವರು ಕೇವಲ ಟೆಸ್ಟ್ ಸರಣಿಯ ಭಾಗವಾಗಲಿದ್ದಾರೆ. ಏಕದಿನ ಮತ್ತು ಟಿ-20 ನಲ್ಲಿ ಆಡದಿರಲು ನಿರ್ಧರಿಸಿದ್ದಾರೆ. ರೋಹಿತ್ ಜೊತೆಗೆ, ವಿರಾಟ್ ಕೊಹ್ಲಿ ಕೂಡ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ವೈಟ್ ಬಾಲ್ ಸರಣಿಯ ಭಾಗವಾಗುವುದಿಲ್ಲ.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿತು. ಸತತ 10 ಪಂದ್ಯಗಳನ್ನು ಗೆದ್ದಿದೆ. ಆದರೆ, ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿದ್ದು, ಇದರೊಂದಿಗೆ ವಿಶ್ವಕಪ್ ಗೆಲ್ಲುವ ಕನಸು ಕೂಡ ಭಗ್ನಗೊಂಡಿತು. ವಿಶ್ವಕಪ್ ಗೆಲ್ಲಲು ಇದಕ್ಕಿಂತ ಉತ್ತಮ ಅವಕಾಶ ಮತ್ತೊಂದಿಲ್ಲ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಮುಂದಿನ ಏಕದಿನ ವಿಶ್ವಕಪ್ ಆಡುವುದು ಅನುಮಾನ. ಟಿ20 ವಿಶ್ವಕಪ್​ನಲ್ಲಿ ರೋಹಿತ್ ನಾಯಕನಾಗಿ ಮುನ್ನಡೆಸಲಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ