AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN Test ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್​ಗೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಔಟ್, ಕನ್ನಡಿಗ ಕ್ಯಾಪ್ಟನ್

ಬಾಂಗ್ಲಾದೇಶದ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಮೊದಲ ಪಂದ್ಯದಿಂದ ನಾಯಕ ರೋಹಿತ್ ಶರ್ಮ ಔಟ್ ಆಗಿದ್ದಾರೆ.

IND vs BAN Test ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್​ಗೆ ಟೀಂ ಇಂಡಿಯಾ ಪ್ರಕಟ: ರೋಹಿತ್  ಔಟ್, ಕನ್ನಡಿಗ ಕ್ಯಾಪ್ಟನ್
Rishabh Pant, rohit sharma
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Dec 11, 2022 | 9:24 PM

Share

ಮುಂಬೈ: ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿ ಸೋತು ಮುಖಭಂಗ ಅನುಭವಿಸಿರುವ ಟೀಂ ಇಂಡಿಯಾ ಇದೀಗ ಟೆಸ್ಟ್ ಸರಣಿಯಲ್ಲಿ ತಿರುಗೇಟು ನೀಡಲು ಸನ್ನದ್ಧವಾಗಿದೆ. ಅದಕ್ಕಾಗಿ ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ 17 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದ್ದು,.ನಾಯಕ ರೋಹಿತ್ ಶರ್ಮಾ ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಇನ್ನು ಟೀಂ ಇಂಡಿಯಾವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ.

ಇದನ್ನೂ ಓದಿ: IND vs BAN Test: ಶಮಿ ಔಟ್, ರೋಹಿತ್-ಜಡೇಜಾ ಡೌಟ್: ಭಾರತ-ಬಾಂಗ್ಲಾದೇಶ ಮೊದಲ ಟೆಸ್ಟ್ ಪಂದ್ಯ ಯಾವಾಗ?

ಏಕದಿನ ಪಂದ್ಯದ ವೇಳೆ ಕೈಬೆರಳಿಗೆ ಗಾಯ ಮಾಡಿಕೊಂಡಿರುವ ರೋಹಿತ್ ಶರ್ಮಾ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ಅಳಭ್ಯತೆಯಿಂದ ಟೀಂ ಇಂಡಿಯಾವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ. ಇನ್ನು ಇದೀಗ ರೋಹಿತ್ ಶರ್ಮಾ ಸ್ಥಾನಕ್ಕೆ ಪಶ್ಚಿಮ ಬಂಗಾಳದ ಯುವ ಕ್ರಿಕೆಟಿಗ ಅಭಿಮನ್ಯು ಈಶ್ವರನ್ ಆಯ್ಕೆಯಾಗಿದ್ದಾರೆ.

ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಇಂತಿದೆ

ಕೆಎಲ್ ರಾಹುಲ್(ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ನವದೀಪ್ ಸೈನಿ, ಸೌರಬ್ ಕುಮಾರ್, ಜಯದೇವ್ ಉನಾದ್ಕಟ್.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ