Rohit Sharma: ಗೆಲುವಿನೊಂದಿಗೆ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್ ಶರ್ಮಾ

Rohit Sharma: ಮೂರನೇ ಟಿ20 ಪಂದ್ಯದಲ್ಲಿ ಶ್ರೀಲಂಕಾವನ್ನು ಸೋಲಿಸಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಹೆಸರಿಗೆ ವಿಶೇಷ ದಾಖಲೆಯೊಂದನ್ನು ಬರೆದುಕೊಂಡಿದ್ದಾರೆ.

Rohit Sharma: ಗೆಲುವಿನೊಂದಿಗೆ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್ ಶರ್ಮಾ
Rohit Sharma
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 28, 2022 | 2:59 PM

ಟೀಮ್ ಇಂಡಿಯಾ (Team India) ಸತತ ಮೂರು ಸರಣಿಗಳನ್ನು ಗೆದ್ದುಕೊಂಡಿದೆ. ಈ ಮೂರು ಸರಣಿಗಳಲ್ಲೂ ಗೆಲುವಿನ ಸಾರಥಿಯಾಗಿದ್ದು ರೋಹಿತ್ ಶರ್ಮಾ (Rohit Sharma) ಎಂಬುದು ವಿಶೇಷ. ನ್ಯೂಜಿಲೆಂಡ್, ವೆಸ್ಟ್​ ಇಂಡೀಸ್ ಹಾಗೂ ಶ್ರೀಲಂಕಾ ವಿರುದ್ದ ಕ್ವೀನ್ ಸ್ವೀಪ್​ ಆಗಿ ಸರಣಿ ಗೆದ್ದಿರುವ ಹಿಟ್​ಮ್ಯಾನ್ ನಾಯಕನಾಗಿ ನಾಗಾಲೋಟ ಮುಂದುವರೆಸಿದ್ದಾರೆ. ಇನ್ನು ಶ್ರೀಲಂಕಾ ವಿರುದ್ದದ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆ ಬರೆದಿದ್ದಾರೆ. ಲಂಕಾ ವಿರುದ್ದದ 3ನೇ ಪಂದ್ಯದಲ್ಲಿ ಆಡುವ ಮೂಲಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಟಿ20 ಪಂದ್ಯವಾಡಿದ ಆಟಗಾರ ಎನಿಸಿಕೊಂಡಿದ್ದಾರೆ.

ಈ ಹಿಂದೆ ಈ ದಾಖಲೆ ಪಾಕಿಸ್ತಾನದ ಶೊಯೇಬ್ ಮಲಿಕ್ ಹೆಸರಿನಲ್ಲಿತ್ತು. ಮಲಿಕ್ ಒಟ್ಟು 124 ಟಿ20 ಪಂದ್ಯಗಳನ್ನು ಆಡಿದ್ದರು. ಇದೀಗ ರೋಹಿತ್ ಶರ್ಮಾ 125 ಟಿ20 ಪಂದ್ಯಗಳನ್ನು ಆಡುವ ಮೂಲಕ ಟೀಮ್ ಇಂಡಿಯಾ ಪರ ಅತೀ ಹೆಚ್ಚು ಟಿ20 ಪಂದ್ಯವಾಡಿದ ದಾಖಲೆ ಬರೆದಿದ್ದಾರೆ. ಜೊತೆಗೆ ಅತೀ ಹೆಚ್ಚು ಟಿ20 ಪಂದ್ಯವಾಡಿದ ವಿಶ್ವ ದಾಖಲೆಯನ್ನೂ ಕೂಡ ನಿರ್ಮಿಸಿದ್ದಾರೆ.

ಅಜೇಯ ಅಯ್ಯರ್:

ಮತ್ತೊಂದೆಡೆ ಶ್ರೇಯಸ್ ಅಯ್ಯರ್ ಕೂಡ ಇಡೀ ಸರಣಿಯಲ್ಲಿ ಗಮನ ಸೆಳೆದಿದ್ದಾರೆ. ವಿಶೇಷ ಎಂದರೆ ಮೂರು ಪಂದ್ಯಗಳಲ್ಲೂ ಅಯ್ಯರ್ ಅಜೇಯರಾಗಿ ಉಳಿದಿದ್ದರು. ವಿರಾಟ್ ಕೊಹ್ಲಿಯ ಅನುಪಸ್ಥಿತಿಯಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಅಯ್ಯರ್, ಮೊದಲ ಟಿ20ಯಲ್ಲಿ 28 ಎಸೆತಗಳಲ್ಲಿ ಅಜೇಯ 57 ರನ್ ಗಳಿಸಿದ್ದರು. ನಂತರ ಎರಡನೇ ಟಿ20ಯಲ್ಲಿ 44 ಎಸೆತಗಳಲ್ಲಿ 74 ರನ್ ಗಳಿಸಿ ಅಜೇಯರಾಗಿ ಉಳಿದರು. ಇನ್ನು ಕೊನೆಯ ಟಿ20 ಪಂದ್ಯದಲ್ಲಿ 45 ಎಸೆತಗಳಲ್ಲಿ 73 ರನ್ ಬಾರಿಸಿದ್ದಾರೆ. ಈ ಮೂಲಕ ಮೂರು ಪಂದ್ಯಗಳಲ್ಲೂ ಔಟಾಗದೇ ಅಜೇಯ ಅರ್ಧಶತಕ ಬಾರಿಸಿ ಗಮನ ಸೆಳೆದಿದ್ದಾರೆ.

ಹಾಗೆಯೇ ಮೂರನೇ ಟಿ20 ಪಂದ್ಯದಲ್ಲಿ ಶ್ರೀಲಂಕಾವನ್ನು ಸೋಲಿಸಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಹೆಸರಿಗೆ ವಿಶೇಷ ದಾಖಲೆಯೊಂದನ್ನು ಬರೆದುಕೊಂಡಿದ್ದಾರೆ. ಲಂಕಾ ವಿರುದ್ದದ ಸರಣಿ ಗೆಲುವಿನೊಂದಿಗೆ ತವರಿನಲ್ಲಿ ಅತೀ ಹೆಚ್ಚು ಟಿ20 ಪಂದ್ಯ ಗೆದ್ದ ನಾಯಕ ಎಂಬ ದಾಖಲೆ ಹಿಟ್​ಮ್ಯಾನ್ ಪಾಲಾಗಿದೆ. ಈ ಮೂಲಕ ಇಂಗ್ಲೆಂಡ್ ನಾಯಕ ಇಯಾನ್ ಮೊರ್ಗನ್ ಮತ್ತು ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಅವರನ್ನು ಹಿಂದಿಕ್ಕಿದ್ದಾರೆ. ಮೊರ್ಗನ್ ಮತ್ತು ವಿಲಿಯಮ್ಸನ್ ತವರಿನಲ್ಲಿ 15 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದರು. ಇದೀಗ ರೋಹಿತ್ ಶರ್ಮಾ 16 ಪಂದ್ಯಗಳಲ್ಲಿ ಜಯ ಸಾಧಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(Rohit Sharma scripts massive T20I world record)