Rohit Sharma: ಟೆಸ್ಟ್ ತಂಡದ ಉಪ ನಾಯಕತ್ವದಿಂದ ಅಜಿಂಕ್ಯಾ ರಹಾನೆ ವಜಾ ಸಾಧ್ಯತೆ: ರೋಹಿತ್ ಶರ್ಮಾಗೆ ಹೊಸ ಪಟ್ಟ

Ajinkya Rahane: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮುಗಿದ ಬಳಿಕ ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಬೆಳೆಸಲಿದೆ. ಇಲ್ಲಿ ಅಜಿಂಕ್ಯಾ ರಹಾನೆ ಅವರ ಬದಲು ರೋಹಿತ್ ಶರ್ಮಾ ಅವರು ಭಾರತ ಟೆಸ್ಟ್ ತಂಡ ಉಪ ನಾಯಕನ ಪಟ್ಟ ಅಲಂಕರಿಸಲಿದ್ದಾರಂತೆ.

Rohit Sharma: ಟೆಸ್ಟ್ ತಂಡದ ಉಪ ನಾಯಕತ್ವದಿಂದ ಅಜಿಂಕ್ಯಾ ರಹಾನೆ ವಜಾ ಸಾಧ್ಯತೆ: ರೋಹಿತ್ ಶರ್ಮಾಗೆ ಹೊಸ ಪಟ್ಟ
Ajinkya Rahane Rohit Sharma Vice Captain
Follow us
TV9 Web
| Updated By: Vinay Bhat

Updated on: Dec 04, 2021 | 11:52 AM

ಭಾರತ ಟೆಸ್ಟ್ ಕ್ರಿಕೆಟ್ (Indian Test Cricket Team) ತಂಡದ ಉಪ ನಾಯಕ ಅಜಿಂಕ್ಯಾ ರಹಾನೆ (Ajinkya Rahane) ಕಳಪೆ ಫಾರ್ಮ್ ಕ್ರಿಕೆಟ್ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕಳೆದ ಕೆಲವು ಸಮಯಗಳಿಂದ ಫಾರ್ಮ್ ಸಮಸ್ಯೆ ಎದುರಿಸುತ್ತಿರುವ ರಹಾನೆ ಕೆಟ್ಟ ಪ್ರದರ್ಶನ ಸದ್ಯ ಸಾಗುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲೂ (India vs New Zealand Test) ಮುಂದುವರೆದಿದೆ. ಕಿವೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ (Virat Kohli) ವಿಶ್ರಾಂತಿ ಪಡೆದ ಕಾರಣ ಭಾರತ ತಂಡದ ನಾಯಕತ್ವದ ಜವಾಬ್ದಾರಿಯನ್ನು ಅಜಿಂಕ್ಯಾ ರಹಾನೆ ಹೊತ್ತಿದ್ದರು. ಇಲ್ಲಿ ಭಾರತ (Team India) ಗೆಲುವಿನ ಸನಿಹ ಬಂದು ಅಂತಿಮವಾಗಿ ಪಂದ್ಯ ಡ್ರಾ ಆಯಿತು. ಈ ಪಂದ್ಯದಲ್ಲೂ ರಹಾನೆ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸಲಿಲ್ಲ. ಎರಡನೇ ಟೆಸ್ಟ್​ಗೆ (2nd Test) ಇವರನ್ನು ಕೈಬಿಡಬೇಕೆಂದು ಕೂಗು ಜೋರಾಗಿ ಕೇಳಿಬಂತು. ಇದರ ನಡುವೆ ಇಂಜುರಿಗೆ ತುತ್ತಾದ ಪರಿಣಾಮ ಮುಂಬೈ ಟೆಸ್ಟ್​ನಿಂದ ಹೊರಬಿದ್ದರು. ಸದ್ಯ ರಹಾನೆ ಉಪ ನಾಯಕತ್ವದ (Vice Captain) ಸ್ಥಾನಕ್ಕೂ ಕುತ್ತುಬಂದಿದೆ.

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮುಗಿದ ಬಳಿಕ ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಬೆಳೆಸಲಿದೆ. ಈ ಸರಣಿಗೆ ಭಾರತ ತಂಡ ಇನ್ನಷ್ಟೆ ಪ್ರಕಟವಾಗಬೇಕಿದೆ. ಇದಕ್ಕಾಗಿ ಕೆಲವೇ ದಿನಗಳಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸಭೆ ಕರೆದಿದೆ. ಇದರಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಿದೆಯಂತೆ. ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ರಹಾನೆ ಅವರ ಬದಲು ರೋಹಿತ್ ಶರ್ಮಾ ಅವರಿಗೆ ಉಪ ನಾಯಕನ ಪಟ್ಟ ನೀಡುವ ಬಗ್ಗೆ ಚರ್ಚೆ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ಖಾಸಗಿ ಇಂಗ್ಲಿಶ್ ಪತ್ರಿಕೆಯೊಂದಕ್ಕೆ ತಿಳಿಸಿದೆ.

“ಕೆಲವೇ ದಿನಗಳಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಸಭೆ ನಡೆಸಲಿದೆ. ಇದರಲ್ಲಿ ರೋಹಿತ್ ಶರ್ಮಾ ಅವರನ್ನು ಭಾರತ ಟೆಸ್ಟ್ ತಂಡದ ಉಪ ನಾಯಕನಾಗಿ ಆಯ್ಕೆ ಮಾಡಲಿದ್ದೇವೆ. ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಇವರು ಆಯ್ಕೆಯಾಗಲಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸ ನಿಗದಿ ಮಾಡಿರುವ ಸಮಯಕ್ಕೆ ಆಗುವುದು ಕಷ್ಟ. ಬಿಸಿಸಿಐ ಕ್ರಿಕೆಟ್ ಸೌತ್ ಆಫ್ರಿಕಾ ಜೊತೆ ಮಾತುಕತೆ ನಡೆಸುತ್ತಿದೆ. ಬಾಕ್ಸಿಂಗ್ ಡೇ ಟೆಸ್ಟ್ ಮೂಲಕ ಸರಣಿ ಆರಂಭಿಸುವ ಯೋಜನೆಯಲ್ಲಿದ್ದೇವೆ” ಎಂದು ಬಿಸಿಸಿಐ ಅಧಿಕೃತ ಮೂಲಗಳು ತಿಳಿಸಿವೆ.

ಅಜಿಂಕ್ಯಾ ರಹಾನೆ ಕಳೆದೊಂದು ವರ್ಷದಿಂದ ಸತತವಾಗಿ ಕಳಪೆ ಪ್ರದರ್ಶನ ನೀಡುವುದರ ಮೂಲಕ ಭಾರಿ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಪದೇ ಪದೇ ಕಳಪೆ ಪ್ರದರ್ಶನ ನೀಡುತ್ತಿರುವ ಅಜಿಂಕ್ಯ ರಹಾನೆಗೆ ತಂಡದಲ್ಲಿ ಸ್ಥಾನ ನೀಡುವ ಬದಲು ಯುವ ಪ್ರತಿಭಾವಂತ ಆಟಗಾರರಿಗೆ ಅವಕಾಶಗಳನ್ನು ನೀಡಬೇಕೆಂದು ನೆಟ್ಟಿಗರು ಅಜಿಂಕ್ಯ ರಹಾನೆ ಆಯ್ಕೆ ಕುರಿತು ವಿರೋಧ ವ್ಯಕ್ತಪಡಿಸಿದ್ದಾರೆ. ಕಳೆದ 15 ಟೆಸ್ಟ್‌ ಪಂದ್ಯಗಳಲ್ಲಿ ರಹಾನೆ 24ರ ಸರಾಸರಿಯಲ್ಲಿ 644 ರನ್‌ಗಳನ್ನು ಮಾತ್ರವೇ ಗಳಿಸಿದ್ದಾರೆ. 33 ವರ್ಷದ ಅನುಭವಿ ಬಲಗೈ ಬ್ಯಾಟ್ಸ್‌ಮನ್‌ ರನ್‌ ಗಳಿಸಲು ಕಷ್ಟ ಪಡುತ್ತಿದ್ದು, ಪ್ರತಿ ಪಂದ್ಯದಲ್ಲೂ ವಿಭಿನ್ನ ರೀತಿ ವಿಕೆಟ್‌ ಒಪ್ಪಿಸಿದ್ದಾರೆ.

IND vs NZ 2nd Test, Day 2 LIVE Score:

MS Dhoni: ಧೋನಿ ಜೊತೆಗಿನ ಬ್ರೇಕ್ ಅಪ್ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ಯಾಂಡಲ್​​ವುಡ್ ನಟಿಯ ವಿಡಿಯೋ ವೈರಲ್

(Rohit Sharma set to replace Ajinkya Rahane as vice-captain of the Indian Test team announcement soon)

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​