AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಟಿ20 ವಿಶ್ವಕಪ್​ವರೆ​ಗೆ ಈತನೇ ಟೀಂ ಇಂಡಿಯಾದ ನಾಯಕನಾಗಬೇಕು ಎಂದ ಗಂಗೂಲಿ

Sourav Ganguly: ಟೀಂ ಇಂಡಿಯಾದ ಖಾಯಂ ನಾಯಕ ರೋಹಿತ್ ಶರ್ಮಾ, ಟಿ20 ಮಾದರಿಯಿಂದ ದೂರ ಸರಿಯುವ ಚಿಂತನೆ ನಡೆಸಿರುವ ಬಗ್ಗೆ ಬಿಸಿಸಿಐಗೆ ತಿಳಿಸಿದ್ದಾರೆ ಎಂತಲೂ ವರದಿಯಾಗುತ್ತಿದೆ. ಆದರೆ ಈ ಬಗ್ಗೆ ಅಭಿಪ್ರಾಯ ಹೊರಹಾಕಿರುವ ಬಿಸಿಸಿಐನ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ, ರೋಹಿತ್ ಪರ ಬ್ಯಾಟ್ ಬೀಸಿದ್ದಾರೆ.

2024ರ ಟಿ20 ವಿಶ್ವಕಪ್​ವರೆ​ಗೆ ಈತನೇ ಟೀಂ ಇಂಡಿಯಾದ ನಾಯಕನಾಗಬೇಕು ಎಂದ ಗಂಗೂಲಿ
ಸೌರವ್ ಗಂಗೂಲಿ
ಪೃಥ್ವಿಶಂಕರ
|

Updated on:Dec 01, 2023 | 4:10 PM

Share

ತವರಿನಲ್ಲಿ ನಡೆದ ಏಕದಿನ ವಿಶ್ವಕಪ್ (ODI World Cup 2023) ಗೆಲ್ಲುವಲ್ಲಿ ಎಡವಿದ ಟೀಂ ಇಂಡಿಯಾ ಇದೀಗ ಮುಂದಿನ ವರ್ಷ ಅಮೆರಿಕ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ (T20 World Cup 2024) ಮೇಲೆ ಗಮನ ಕೇಂದ್ರಿಕರಿಸಿದೆ. ಇದಕ್ಕಾಗಿ ಯುವ ತಂಡವನ್ನು ಕಟ್ಟುವತ್ತ ಮೊದಲ ಹೆಜ್ಜೆ ಇಟ್ಟಿದೆ. ಇದಕ್ಕಾಗಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾದಲ್ಲಿ ನಡೆಯಲ್ಲಿರುವ ಟಿ20 ಸರಣಿಗೆ ಯುವ ಆಟಗಾರರನ್ನೇ ತಂಡದಲ್ಲಿ ಆಯ್ಕೆ ಮಾಡಿದೆ. ಇದಕ್ಕೆ ಪೂರಕವಾಗಿ ತಂಡದ ಹಿರಿಯ ಆಟಗಾರರಲ್ಲಿ ಪ್ರಮುಖರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಈ ಎರಡೂ ದೇಶಗಳ ವಿರುದ್ಧದ ಟಿ20 ಸರಣಿಯಿಂದ ಹಿಂದೆ ಸರಿದಿದ್ದಾರೆ. ಇದೀಗ ಕೇಳಿಬರುತ್ತಿರುವ ಮಾಹಿತಿ ಪ್ರಕಾರ, ಟೀಂ ಇಂಡಿಯಾದ ಖಾಯಂ ನಾಯಕ ರೋಹಿತ್ ಶರ್ಮಾ, ಟಿ20 ಮಾದರಿಯಿಂದ ದೂರ ಸರಿಯುವ ಚಿಂತನೆ ನಡೆಸಿರುವ ಬಗ್ಗೆ ಬಿಸಿಸಿಐಗೆ ತಿಳಿಸಿದ್ದಾರೆ ಎಂತಲೂ ವರದಿಯಾಗುತ್ತಿದೆ. ಆದರೆ ಈ ಬಗ್ಗೆ ಅಭಿಪ್ರಾಯ ಹೊರಹಾಕಿರುವ ಬಿಸಿಸಿಐನ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly), ರೋಹಿತ್ ಪರ ಬ್ಯಾಟ್ ಬೀಸಿದ್ದಾರೆ.

ಟಿ20 ಸರಣಿಯಿಂದ ದೂರ

ವಾಸ್ತವವಾಗಿ ರೋಹಿತ್ ಶರ್ಮಾ 2022 ರ ಟಿ20 ವಿಶ್ವಕಪ್ ಮುಗಿದ ಬಳಿಕ ಯಾವುದೇ ಟಿ 20 ಅಂತರಾಷ್ಟ್ರೀಯ ಪಂದ್ಯವನ್ನು ಆಡಿಲ್ಲ. ಇದು ಮಾತ್ರವಲ್ಲ, ಮುಂದಿನ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಮೂರು ಪಂದ್ಯಗಳ ಟಿ20 ಅಂತರಾಷ್ಟ್ರೀಯ ಸರಣಿಯ ಭಾಗವೂ ಆಗಿಲ್ಲ. ರೋಹಿತ್ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ವೈಟ್ ಬಾಲ್ ಕ್ರಿಕೆಟ್‌ನಿಂದ ವಿರಾಮ ಕೇಳಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ. ಇದರಿಂದಾಗಿ ಇಬ್ಬರೂ ಏಕದಿನ ಮತ್ತು ಟಿ20 ಅಂತರರಾಷ್ಟ್ರೀಯ ಸರಣಿಗಳಲ್ಲಿ ಆಡುವುದಿಲ್ಲ. ಹೀಗಾಗಿ ಈ ಇಬ್ಬರು ಟಿ20 ಮಾದರಿಯಿಂದ ದೂರ ಸರಿದಿರುವುದು ಖಚಿತ ಎಂಬುದು ಕ್ರಿಕೆಟ್ ಪಂಡಿತರ ಅಭಿಪ್ರಾಯವಾಗಿದೆ.

Virat Kohli: ವಿರಾಟ್ ಕೊಹ್ಲಿಯ ಸಾಧನೆಯ ಪಯಣ ಇನ್ನು ಮುಗಿದಿಲ್ಲ: ಸೌರವ್ ಗಂಗೂಲಿ

ರೋಹಿತ್ ನಾಯಕನಾಗಿ ಮುಂದುವರೆಯಬೇಕು

ಆದರೆ ಈ ಬಗ್ಗೆ ಮಾತನಾಡಿರುವ ಸೌರವ್ ಗಂಗೂಲಿ, ‘ರೋಹಿತ್ ಶರ್ಮಾ 2024 ರಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್​ವರೆಗೆ ಟೀಂ ಇಂಡಿಯಾವನ್ನು ನಾಯಕರಾಗಿ ಮುನ್ನಡೆಸುತ್ತಾರೆ ಎಂದು ನಾನು ಭಾವಿಸುತ್ತೇನೆ’ ಎಂದಿದ್ದಾರೆ. ಇನ್ನು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಒಪ್ಪಂದದ ವಿಸ್ತರಣೆಯ ಬಗ್ಗೆ ಮಾತನಾಡಿದ ಗಂಗೂಲಿ, ‘ಬಿಸಿಸಿಐ ರಾಹುಲ್ ದ್ರಾವಿಡ್ ಮೇಲೆ ವಿಶ್ವಾಸವನ್ನು ತೋರಿಸಿರುವುದನ್ನು ನೋಡಿ ನನಗೆ ಆಶ್ಚರ್ಯವಾಗಿಲ್ಲ. ಆದರೆ ರಾಹುಲ್ ಅವರು ಮತ್ತೆ ಮುಖ್ಯ ಕೋಚ್ ಆಗಲು ಒಪ್ಪುತ್ತಾರೋ ಇಲ್ಲವೋ ಎಂಬ ಪ್ರಶ್ನೆ ಸದಾ ಕಾಡುತ್ತಿತ್ತು’ ಎಂದಿದ್ದಾರೆ.

ಈ ಇಬ್ಬರ ಟೆಸ್ಟ್ ವೃತ್ತಿಬದುಕು ಅಂತ್ಯ?

ದಕ್ಷಿಣ ಆಫ್ರಿಕಾ ಪ್ರವಾಸದ ಟೆಸ್ಟ್ ತಂಡದಲ್ಲಿ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ ಪೂಜಾರ ಸ್ಥಾನ ಪಡೆದಿಲ್ಲ. ಈ ಕುರಿತು ಮಾತನಾಡಿದ ಗಂಗೂಲಿ, ‘ರಹಾನೆ ಮತ್ತು ಪೂಜಾರ ಟೀಂ ಇಂಡಿಯಾಕ್ಕೆ ಸಾಕಷ್ಟು ಯಶಸ್ಸು ತಂದುಕೊಟ್ಟಿದ್ದಾರೆ. ಆದರೆ ಆಯ್ಕೆಗಾರರು ತಂಡದಲ್ಲಿ ಹೊಸ ಮುಖಗಳನ್ನು ನೋಡಲು ಬಯಸುತ್ತಾರೆ ಎಂದು ನಾನು ಭಾವಿಸುತ್ತೇನೆ’ ಎಂದಿದ್ದಾರೆ. ವಾಸ್ತವವಾಗಿ ಅಜಿಂಕ್ಯ ರಹಾನೆ ಮತ್ತು ಚಟೇಶ್ವರ ಪೂಜಾರ ಅವರನ್ನು ದಕ್ಷಿಣ ಆಫ್ರಿಕಾ ಪ್ರವಾಸದ ಟೆಸ್ಟ್ ತಂಡದಲ್ಲಿ ಆಯ್ಕೆಮಾಡಲಾಗಿಲ್ಲ. ಹೀಗಾಗಿ ಈ ಇಬ್ಬರ ಟೆಸ್ಟ್ ವೃತ್ತಿಜೀವನ ಮುಗಿದಿದೆ ಎಂಬುದು ಕೆಲವರ ಅಭಿಪ್ರಾಯವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:05 pm, Fri, 1 December 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ