India vs New Zealand: ಭಾರತ- ನ್ಯೂಜಿಲೆಂಡ್ ಪಂದ್ಯದ ನಡುವೆ ಮೊಹಮ್ಮದ್ ಸಿರಾಜ್​ಗೆ ಹೊಡೆದ ರೋಹಿತ್ ಶರ್ಮಾ

Rohit Sharma ‘slap’ Mohammed Siraj: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅತ್ತ ಭಾರತವನ್ನು ಗೆಲುವಿನ ದಡ ಸೇರಿಸುವತ್ತ ಹೋರಾಟ ನಡೆಸುತ್ತಿದ್ದರೆ, ಇತ್ತ ರೋಹಿತ್ ಶರ್ಮಾ ಡಗೌಟ್​ನಲ್ಲಿ ಕುಳಿತು ಪಂದ್ಯ ವೀಕ್ಷಿಸುತ್ತಿದ್ದರು. ಈ ಸಂದರ್ಭ ರೋಹಿತ್ ಮೊಹಮ್ಮದ್ ಸಿರಾಜ್​ಗೆ ಹೊಡೆದ ಘಟನೆ ನಡೆದಿದೆ.

India vs New Zealand: ಭಾರತ- ನ್ಯೂಜಿಲೆಂಡ್ ಪಂದ್ಯದ ನಡುವೆ ಮೊಹಮ್ಮದ್ ಸಿರಾಜ್​ಗೆ ಹೊಡೆದ ರೋಹಿತ್ ಶರ್ಮಾ
Rohit Sharma Mohammed Siraj
Follow us
TV9 Web
| Updated By: Vinay Bhat

Updated on: Nov 18, 2021 | 9:47 AM

ಬುಧವಾರ ಜೈಪುರದಲ್ಲಿ ನ್ಯೂಜಿಲೆಂಡ್ ವಿರುದ್ಧ ಆರಂಭವಾದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ (India vs New Zealand) ತಂಡ ರೋಚಕ ಗೆಲುವು ಸಾಧಿಸಿತು. ಕಿವೀಸ್ ಪಡೆ ನೀಡಿದ್ದ 164 ರನ್ ಮೊತ್ತಕ್ಕೆ ಪ್ರತಿಯಾಗಿ ಭಾರತ 19.4 ಓವರ್​ನಲ್ಲಿ 2 ಎಸೆತ ಇರುವಂತೆ ಚೇಸ್ ಮಾಡಿ ಗೆದ್ದಿತು. ಈ ಪಂದ್ಯದಲ್ಲಿ ಭಾರತ 5 ವಿಕೆಟ್​ಗಳಿಂದ ಗೆಲುವು ಸಾಧಿಸಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ (T20I Series) 1-0 ಮುನ್ನಡೆ ಪಡೆದುಕೊಂಡಿದೆ. ಈ ಮೂಲಕ ರೋಹಿತ್-ದ್ರಾವಿಡ್ (Rohit Sharma-Rahul Dravid) ಜೋಡಿ ಪರಿಪೂರ್ಣ ಹುದ್ದೆ ಪಡೆದು ಚೊಚ್ಚಲ ಪಂದ್ಯದಲ್ಲೇ ಗೆಲುವಿನ ಸಿಹಿ ಕಂಡಿದ್ದಾರೆ. ಇದರ ನಡುವೆ ಪಂದ್ಯ ನಡೆಯುತ್ತಿರುವಾಗ ಭಾರತ ಬ್ಯಾಟಿಂಗ್ ನಡೆಸುವ ವೇಳೆ ಡಗೌಟ್​ನಲ್ಲಿ ರೋಹಿತ್ ಶರ್ಮಾ (Rohit Sharma) ಅವರು ಮೊಹಮ್ಮದ್ ಸಿರಾಜ್​ಗೆ (Mohammed Siraj) ಹೊಡೆದ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ವೈರಲ್ (Viral Video) ಕೂಡ ಆಗುತ್ತಿದೆ.

ಹೌದು, ನ್ಯೂಜಿಲೆಂಡ್ ನೀಡಿದ್ದ ಟಾರ್ಗೆಟ್ ಅನ್ನು ಬೆನ್ನಟ್ಟಲು ಕಣಕ್ಕಿಳಿದ ಭಾರತ ಸ್ಫೋಟಕ ಆರಂಭ ಪಡೆದುಕೊಂಡಿತು. 4.5 ಓವರ್‌ಗಳಲ್ಲಿ 50 ರನ್‌ಗಳ ಗಡಿ ಮುಟ್ಟಿತು. ನಾಯಕನ ಆಟವಾಡಿದ ರೋಹಿತ್ ಶರ್ಮಾ 36 ಎಸೆತಗಳಲ್ಲಿ 2 ಸಿಕ್ಸರ್, 5 ಫೋರ್ ಬಾರಿಸಿ 48 ರನ್‌ ಚಚ್ಚಿ ಔಟ್ ಆದರು. ಬಳಿಕ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಅತ್ತ ಗೆಲುವಿನ ದಡ ಸೇರಿಸುವತ್ತ ಹೋರಾಟ ನಡೆಸುತ್ತಿದ್ದರೆ, ಇತ್ತ ರೋಹಿತ್ ಶರ್ಮಾ ಡಗೌಟ್​ನಲ್ಲಿ ಕುಳಿತು ಪಂದ್ಯ ವೀಕ್ಷಿಸುತ್ತಿದ್ದರು.

ಈ ಸಂದರ್ಭ ಕ್ಯಾಮೆರಾ ಒಮ್ಮೆ ಡಗೌಟ್ ಕಡೆ ಕಣ್ಣು ಹಾಯಿಸಿದೆ. ಆಗ ರೋಹಿತ್ ಶರ್ಮಾ ಅವರು ಮೊಹಮ್ಮದ್ ಸಿರಾಜ್ ಅವರ ತಲೆಗೆ ಹೊಡೆಯುತ್ತಿರುವುದು ಸೆರೆಯಾಗಿದೆ. ಇದು ಗಂಭೀರವಾದ ಘಟನೆಯಂತೆ ಕಾಣಲಿಲ್ಲ. ತಮಾಷೆಗಾಗಿ ಈರೀತಿ ಮಾಡಿದ್ದಾರೆ. ಆದರೆ, ಅಭಿಮಾನಿಗಳು ಮಾತ್ರ ರೋಹಿತ್ ಅವರು ಸಿರಾಜ್ ತಲೆ​ಗೆ ಏತಕ್ಕಾಗಿ ಹೊಡೆದರು ಎಂದು ತಲೆಕೆಡೆಸಿಕೊಳ್ಳುತ್ತಿದ್ದಾರೆ. ಸದ್ಯ ಈ ವಿಡಿಯೋ ಭರ್ಜರಿ ವೈರಲ್ ಆಗುತ್ತಿದೆ.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ ಎರಡನೇ ವಿಕೆಟ್​ಗೆ ಮಾರ್ಟಿನ್ ಗಪ್ಟಿಲ್ ಮತ್ತು ಮಾರ್ಕ್ ಚಾಪ್ಮನ್ ಅವರ 109 ರನ್ ಜೊತೆಯಾಟ ನೆರವಿನಿಂದ 164 ರನ್ ಕಲೆಹಾಕಿತು. ಈ ಪಿಚ್​ನಲ್ಲಿ ಗೆಲ್ಲಲು 165 ರನ್ ಗುರಿ ಟೀಮ್ ಇಂಡಿಯಾಗೆ ಕಠಿಣ ಸವಾಲಾಗುವ ನಿರೀಕ್ಷೆ ಇರಲಿಲ್ಲ. ರಾಹುಲ್ ಮತ್ತು ರೋಹಿತ್ ಮೊದಲ ವಿಕೆಟ್​​ಗೆ 50 ರನ್ ಸೇರಿಸಿ ಬುನಾದಿ ಹಾಕಿದರು.

ಕೆಎಲ್ ರಾಹುಲ್ ನಿರ್ಗಮನದ ಬಳಿಕ ರೋಹಿತ್ ಮತ್ತು ಸೂರ್ಯಕುಮಾರ್ ಯಾದವ್ 2ನೇ ವಿಕೆಟ್​ಗೆ 59 ರನ್ ಸೇರಿಸಿದರು. ಸೂರ್ಯಕುಮಾರ್ 40 ಬಾಲ್​ನಲ್ಲಿ 62 ರನ್ ಗಳಿಸಿದರು. ಪರಿಣಾಮ ಕೊನೆಯ ಓವರ್​ನಲ್ಲಿ 10 ರನ್ ಗಳಿಸುವ ಸ್ಥಿತಿಗೆ ಬಂತು. ಕೊನೆಯಲ್ಲಿ ರಿಷಭ್ ಪಂತ್ ಬೌಂಡರಿ ಭಾರಿಸಿ ಗೆಲುವಿನ ರನ್ ಹರಿಸಿದರು. ನ. 19ರಂದು ರಾಂಚಿಯಲ್ಲಿ ಎರಡನೇ ಪಂದ್ಯ ಇದೆ. ಅದಾದ ಬಳಿಕ ನ. 21ರಂದು ಕೋಲ್ಕತಾದ ಈಡನ್ ಗಾರ್ಡನ್ಸ್​ನಲ್ಲಿ ಮೂರನೇ ಟಿ20 ಪಂದ್ಯ ಆಯೋಜಿಸಲಾಗಿದೆ.

Rohit Sharma: ಪರಿಪೂರ್ಣ ನಾಯಕನಾಗಿ ಚೊಚ್ಚಲ ಗೆಲುವಿನ ಬಳಿಕ ರೋಹಿತ್ ಶರ್ಮಾ ಏನು ಹೇಳಿದ್ರು ಕೇಳಿ

India vs New Zealand: ಜೈಪುರದಲ್ಲಿ ಬೆಳಗಿದ ಸೂರ್ಯ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಗೆದ್ದು ಬೀಗಿದ ಭಾರತ

(Rohit sharma slap Mohammed Siraj during india vs New Zealand First T20 match video goes viral)

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ