Video: ಹೀನಾಯ ಸೋಲಿನ ಬಳಿಕ 6 ಸಿಕ್ಸ್ ಸಿಡಿಸಿದ ರೋಹಿತ್ ಶರ್ಮಾ

| Updated By: ಝಾಹಿರ್ ಯೂಸುಫ್

Updated on: Oct 13, 2022 | 11:00 PM

T20 World Cup 2022: ವೆಸ್ಟರ್ನ್​ ಆಸ್ಟ್ರೇಲಿಯಾ ವಿರುದ್ಧದ ಮೊದಲ ಅಭ್ಯಾಸ ಪಂದ್ಯದಲ್ಲಿ 13 ರನ್​ಗಳಿಂದ ಗೆದ್ದಿರುವ ಟೀಮ್ ಇಂಡಿಯಾ, 2ನೇ ಪಂದ್ಯದಲ್ಲಿ ಸೋಲನುಭವಿಸಿತು.

Video: ಹೀನಾಯ ಸೋಲಿನ ಬಳಿಕ 6 ಸಿಕ್ಸ್ ಸಿಡಿಸಿದ ರೋಹಿತ್ ಶರ್ಮಾ
Rohit Sharma
Follow us on

T20 World Cup 2022: ಟಿ20 ವಿಶ್ವಕಪ್‌ಗಾಗಿ ಭರ್ಜರಿ ತಯಾರಿ ನಡೆಸುತ್ತಿರುವ ಟೀಮ್ ಇಂಡಿಯಾ ಗುರುವಾರ ಭಾರಿ ಮುಖಭಂಗ ಅನುಭವಿಸಿದೆ. ಎರಡನೇ ಅಭ್ಯಾಸ ಪಂದ್ಯದಲ್ಲಿ ವೆಸ್ಟರ್ನ್ ಆಸ್ಟ್ರೇಲಿಯ ವಿರುದ್ಧ ಭಾರತ ತಂಡವು 36 ರನ್ ಗಳಿಂದ ಸೋಲನುಭವಿಸಿದೆ. ಈ ಸೋಲಿನ ಬಳಿಕ ಭಾರತದ ನಾಯಕ ರೋಹಿತ್ ಶರ್ಮಾ ಮೈದಾನದಲ್ಲಿ ಕಾಣಿಸಿಕೊಂಡಿದ್ದು ವಿಶೇಷ.
ಅಭ್ಯಾಸ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟರ್ನ್ ಆಸ್ಟ್ರೇಲಿಯ 168 ರನ್ ಕಲೆಹಾಕಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟ್ ಬೀಸಿದ ಭಾರತ ತಂಡ 20 ಓವರ್‌ಗಳಲ್ಲಿ 132 ರನ್ ಗಳಿಸಲಷ್ಟೇ ಶಕ್ತವಾಯಿತು. ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ ಪರ ಗರಿಷ್ಠ 74 ರನ್ ಗಳಿಸಿ ಮಿಂಚಿದರು. ಇದಾಗ್ಯೂ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಿರಲಿಲ್ಲ.

ಕೆಎಲ್ ರಾಹುಲ್ ಬಿಟ್ಟರೆ ಯಾವುದೇ ಬ್ಯಾಟ್ಸ್​ಮನ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ರಿಷಭ್ ಪಂತ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ ಅವರಂತಹ ಸ್ಫೋಟಕ ಬ್ಯಾಟ್ಸ್‌ಮನ್‌ಗಳು ವಿಫಲರಾದರು. ವಿಶೇಷ ಎಂದರೆ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್​ಗೆ ಇಳಿದಿರಲಿಲ್ಲ.

ಇದನ್ನೂ ಓದಿ
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಆದರೆ ಪಂದ್ಯ ಮುಗಿಯುತ್ತಿದ್ದಂತೆ ರೋಹಿತ್ ಶರ್ಮಾ ಮೈದಾನದಲ್ಲಿ ಕಾಣಿಸಿಕೊಂಡರು. ಅಲ್ಲದೆ ಅಭ್ಯಾಸದ ಅವಧಿಯಲ್ಲಿ ಭರ್ಜರಿ ಸಿಕ್ಸರ್‌ಗಳನ್ನು ಬಾರಿಸಿ ಗಮನ ಸೆಳೆದರು. ಇದೀಗ ಹಿಟ್​ಮ್ಯಾನ್ ಅವರ ಭರ್ಜರಿ ಸಿಕ್ಸ್​ಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಇನ್ನು ವೆಸ್ಟರ್ನ್​ ಆಸ್ಟ್ರೇಲಿಯಾ ವಿರುದ್ಧದ ಮೊದಲ ಅಭ್ಯಾಸ ಪಂದ್ಯದಲ್ಲಿ 13 ರನ್​ಗಳಿಂದ ಗೆದ್ದಿರುವ ಟೀಮ್ ಇಂಡಿಯಾ, 2ನೇ ಪಂದ್ಯದಲ್ಲಿ ಸೋಲನುಭವಿಸಿತು. ಇದಾಗ್ಯೂ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಉತ್ತಮ ಪ್ರದರ್ಶನ ನೀಡಿದ್ದರು. ಆರ್ ಅಶ್ವಿನ್ 4 ಓವರ್ ಗಳಲ್ಲಿ 32 ರನ್ ನೀಡಿ 3 ವಿಕೆಟ್ ಪಡೆದರೆ, ಹರ್ಷಲ್ ಪಟೇಲ್ 27 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿರುವುದು ಟೀಮ್ ಇಂಡಿಯಾ ಪಾಲಿಗೆ ಪಾಸಿಟಿವ್ ಅಂಶ ಎಂದೇ ಹೇಳಬಹುದು.