AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK, ICC World Cup: ಮೋದಿ ಸ್ಟೇಡಿಯಂನಲ್ಲಿ ರೋಹಿತ್ ಸಿಡಿಲು, ಪಾಕ್ ತತ್ತರ: ಭಾರತಕ್ಕೆ 7 ವಿಕೆಟ್​ಗಳ ಜಯ

India Won by 7 Wickets vs Pakistan in ICC World Cup: ಐಸಿಸಿ ಏಕದಿನ ವಿಶ್ವಕಪ್ 2023ರ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಅದ್ಭುತ ಪ್ರದರ್ಶನ ತೋರಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ನಡೆಸಿ 86 ರನ್ ಚಚ್ಚಿ ಪಾಕ್ ಬೌಲರ್​ಗಳ ಬೆವರಿಳಿಸಿದರು. ಈ ಗೆಲುವಿನ ಮೂಲಕ ಭಾರತ ತಂಡ ವಿಶ್ವಕಪ್ ಪಾಯಿಂಟ್ ಟೇಬಲ್​ನಲ್ಲಿ ಆರು ಅಂಕ ಸಂಪಾದಿಸಿ ಅಗ್ರಸ್ಥಾನಕ್ಕೇರಿದೆ.

IND vs PAK, ICC World Cup: ಮೋದಿ ಸ್ಟೇಡಿಯಂನಲ್ಲಿ ರೋಹಿತ್ ಸಿಡಿಲು, ಪಾಕ್ ತತ್ತರ: ಭಾರತಕ್ಕೆ 7 ವಿಕೆಟ್​ಗಳ ಜಯ
India Won vs Pakistan World Cup
Vinay Bhat
|

Updated on:Oct 14, 2023 | 8:07 PM

Share

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್​ನ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ (India vs Pakistan) ಅಮೋಘ ಗೆಲುವು ಕಂಡಿದೆ. ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಮಿಂಚಿದ ಟೀಮ್ ಇಂಡಿಯಾ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ನಡೆಸಿ 86 ರನ್ ಚಚ್ಚಿ ಪಾಕ್ ಬೌಲರ್​ಗಳ ಬೆವರಿಳಿಸಿದರು. ಈ ಗೆಲುವಿನ ಮೂಲಕ ಭಾರತ ತಂಡ ವಿಶ್ವಕಪ್ ಪಾಯಿಂಟ್ ಟೇಬಲ್​ನಲ್ಲಿ ಆರು ಅಂಕ ಸಂಪಾದಿಸಿ ಅಗ್ರಸ್ಥಾನಕ್ಕೇರಿದೆ. ಅಲ್ಲದೆ ಪಾಕ್ ವಿರುದ್ಧ ವಿಶ್ವಕಪ್​ನಲ್ಲಿ ತನ್ನ ಗೆಲುವಿನ ದಾಖಲೆ ಮುಂದುವರೆಸಿದೆ.

ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಪಾಕಿಸ್ತಾನ ತಂಡ ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 191 ರನ್​ಗೆ ಆಲೌಟ್ ಆಯಿತು. ಬಳಿಕ ಟಾರ್ಗೆಟ್ ಬೆನ್ನಟ್ಟಲು ಬಂದ ಭಾರತ ಸ್ಫೋಟಕ ಆರಂಭ ಪಡೆದುಕೊಳ್ಳುವ ಜೊತೆಗೆ 2 ಪ್ರಮುಖ ವಿಕೆಟ್ ಕಳೆದುಕೊಂಡಿತು. ಶುಭ್​ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ತಲಾ 16 ರನ್ ಗಳಿಸಿ ಔಟಾದರು. ಆದರೆ, ನಾಯಕ ರೋಹಿತ್ ಶರ್ಮಾ ಮನಬಂದಂತೆ ಬ್ಯಾಟ್ ಬೀಸಿದರು. ಕೇವಲ 36 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು.

ಇದನ್ನೂ ಓದಿ
Image
ಪಾಕ್ ಬ್ಯಾಟರ್​ಗಳ ಪೆವಿಲಿಯನ್ ಪರೇಡ್: ಸಖತ್ ಟ್ರೋಲ್ ಆದ ಬಾಬರ್ ಪಡೆ
Image
ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಯಾಕೆ ಗೊತ್ತೇ?
Image
ಭಾರತದ ಬೌಲಿಂಗ್ ಬಿರುಗಾಳಿಗೆ ತತ್ತರಿಸಿದ ಪಾಕ್: ರೋಹಿತ್ ಪಡೆಗೆ 192 ರನ್​​ಗಳ
Image
IND vs PAK ಪಂದ್ಯದಲ್ಲಿ ವಿರಾಟ್ ಕೊಹ್ಲಿಯಿಂದ ನಡೆಯಿತು ದೊಡ್ಡ ತಪ್ಪು

ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್​ನ ವಿಡಿಯೋ:

ಟಿ20 ಮಾದರಿಯಲ್ಲಿ ಬ್ಯಾಟ್ ಬೀಸಿದ ಹಿಟ್​ಮ್ಯಾನ್ 63 ಎಸೆತಗಳಲ್ಲಿ 6 ಫೋರ್, 6 ಸಿಕ್ಸರ್ ಚಚ್ಚಿ 86 ರನ್ ಗಳಿಸಿದರು. ಈ ಮೂಲಕ ತಂಡ ಬೇಗನೆ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಶ್ರೇಯಸ್ ಅಯ್ಯರ್ 53 ಹಾಗೂ ಕೆಎಲ್ ರಾಹುಲ್ 19 ರನ್ ಗಳಿಸಿ ಅಜೇಯರಾಗಿ ಉಳಿದರು. ಭಾರತ 30.3 ಓವರ್​ನಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿ ಜಯ ಕಂಡಿತು.

ಬಂದಿದ್ದಕ್ಕೆ ಧನ್ಯವಾದ, ಬಾಯ್, ಬಾಯ್: ವಿಕೆಟ್ ಕಿತ್ತಾಗ ಹಾರ್ದಿಕ್ ಕೋಪದಲ್ಲಿ ಆಡಿದ ಮಾತು ವೈರಲ್

ಇದಕ್ಕೂ ಮುನ್ನ ಟಾಸ್ ಸೋತು ಪಾಕ್ ಪರ ಇನ್ನಿಂಗ್ಸ್ ಆರಂಭಿಸಿದ ಅಬ್ದುಲ್ ಶಫೀಖ್ ಹಾಗೂ ಇಮಾನ್ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. 8 ಓವರ್ ಆಗುವ ಹೊತ್ತಿಗೆ 41 ರನ್ ಗಳಿಸಿದ್ದಾಗ ಸಿರಾಜ್ ಬೌಲಿಂಗ್​ನಲ್ಲಿ ಶಫೀಖ್ (20) ಎಲ್​ಬಿ ಬಲೆಗೆ ಸಿಲುಕಿದರು. ನಂತರ ಇಮಾಮ್ (36) ಹಾರ್ದಿಕ್ ಪಾಂಡ್ಯ ಬೌಲಿಂಗ್​ನಲ್ಲಿ ಕೀಪರ್ ರಾಹುಲ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಆದರೆ, ಈ ಸಂದರ್ಭ ಜೊತೆಯಾದ ಪಾಕ್ ಅನುಭವಿ ಬ್ಯಾಟರ್​ಗಳಾದ ನಾಯಕ ಬಾಬರ್ ಅಝಂ ಹಾಗೂ ಮೊಹಮ್ಮದ್ ರಿಝ್ವಾನ್ ಎಚ್ಚರಿಕೆಯ ಆಟ ಪ್ರದರ್ಶಿಸಿದರು.

ಭಾರತೀಯ ಬೌಲರ್​ಗಳ ಮರ್ಮವನ್ನು ಅರಿತ ಬಾಬರ್-ರಿಝ್ವಾನ್ ಜೋಡಿ 82 ರನ್​ಗಳ ಕಾಣಿಕೆ ನೀಡಿದರು. ಫಾರ್ಮ್ ವೈಫಲ್ಯದಿಂದ ಬಳಲುತ್ತಿದ್ದ ಬಾಬರ್ ಅರ್ಧಶತಕ ಸಿಡಿಸಿದರು. ಆದರೆ, 50 ರನ್ ಗಳಿಸಿದ ಕೂಡಲೇ ಬಾಬರ್ ಅವರು ಸಿರಾಜ್ ಬೌಲಿಂಗ್​ನಲ್ಲಿ ಬೌಲ್ಡ್ ಆದರು. ಇದರ ಬೆನ್ನಲ್ಲೆ ಕುಲ್ದೀಪ್, ಸೌದ್ ಶಕೀಲ್ (6) ಅವರನ್ನು ಎಲ್​ಬಿಡಬ್ಲ್ಯೂ ಮಾಡಿದರೆ, ಇಫ್ತಿಖರ್ ಅಹ್ಮದ್​ರನ್ನು (4) ಬೌಲ್ಡ್ ಮಾಡಿದರು. ಅತ್ತ ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದ ರಿಝ್ವಾನ್ 49 ರನ್ ಗಳಿಸಿದ್ದಾಗ ಬುಮ್ರಾ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಶಬಾದ್ ಖಾನ್ ಕೂಡ 2 ರನ್​ಗೆ ಔಟಾದರು.

155 ರನ್​ಗೆ 3ನೇ ವಿಕೆಟ್ ಕಳೆದುಕೊಂಡ ಪಾಕಿಸ್ತಾನ 171 ರನ್ ಆಗುವ ಹೊತ್ತಿಗೆ 7 ವಿಕೆಟ್ ಪತನಗೊಂಡಿತು. ದಿಢೀರ್ ಕುಸಿತದಿಂದ ಬಾಬರ್ ಪಡೆ ಮೇಲೇಳಲು ಸಾಧ್ಯವಾಗಲಿಲ್ಲ. ಅಂತಿಮವಾಗಿ 42.5 ಓವರ್​ಗಳಲ್ಲಿ 191 ರನ್​ಗಳಿಗೆ ಆಲೌಟ್ ಆಯಿತು. ಭಾರತ ಪರ ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ತಲಾ 2 ವಿಕೆಟ್ ಕಿತ್ತರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:06 pm, Sat, 14 October 23

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!