VIDEO: ಭಾರತ-ಪಾಕ್ ಪಂದ್ಯದ ವೇಳೆ ಕಣ್ಣೀರಿಟ್ಟ ರೋಹಿತ್ ಶರ್ಮಾ
India vs Pakistan: ಈ ಆರಂಭಿಕ ಆಘಾತದಿಂದ ಚೇತರಿಸಿಕೊಳ್ಳಲು ಪರದಾಡಿದ ಪಾಕ್ ತಂಡಕ್ಕೆ ಆ ಬಳಿಕ ಆಸರೆಯಾಗಿದ್ದು ಶಾನ್ ಮಸೂದ್ ಹಾಗೂ ಇಫ್ತಿಕರ್ ಅಹ್ಮದ್.
T20 World Cup 2022: ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಭಾರತ-ಪಾಕಿಸ್ತಾನ್ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ಭಾವುಕರಾಗಿ ಕಣ್ಣೀರಿಟ್ಟ ಘಟನೆ ನಡೆದಿದೆ. ರಾಷ್ಟ್ರಗೀತೆ ಹಾಡುವಾಗ ಹಿಟ್ಮ್ಯಾನ್ ಭಾವುಕರಾದರು. ಅಲ್ಲದೆ ಕಣ್ಣೀರಿನೊಂದಿಗೆ ರಾಷ್ಟ್ರಗೀತೆ ಮುಗಿಸುತ್ತಿರುವುದು ಕಂಡು ಬಂದರು. ಇದೀಗ ಹಿಟ್ಮ್ಯಾನ್ ಅವರ ಈ ಭಾವುಕ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ವಿಶೇಷ ಎಂದರೆ ಇದು ನಾಯಕನಾಗಿ ರೋಹಿತ್ ಶರ್ಮಾ ಅವರಿಗೆ ಮೊದಲ ಟಿ20 ವಿಶ್ವಕಪ್ ಪಂದ್ಯ. ಅದರಲ್ಲೂ ಸಾಂಪ್ರದಾಯಿಕ ಎದುರಾಳಿಗಳ ವಿರುದ್ದ ಎದೆಯುಬ್ಬಿಸಿ ಕಣಕ್ಕಿಳಿದಿದ್ದ ಹಿಟ್ಮ್ಯಾನ್ ರಾಷ್ಟ್ರಗೀತೆ ಹಾಡುತ್ತಿದ್ದಂತೆ ಭಾವುಕರಾಗಿ ಕಣ್ಣೀರಿಟಿದ್ದರು.
Rohit was so emotional during the time of National Anthem ❤️ @ImRo45 pic.twitter.com/rGZYgQ8Yzp
— Filmy Kollywud (@FilmyKollywud) October 23, 2022
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕ್ ಆರಂಭಿಕರಿಗೆ ಅರ್ಷದೀಪ್ ಸಿಂಗ್ ಆರಂಭಿಕ ಆಘಾತ ನೀಡಿದ್ದರು. ಎರಡನೇ ಓವರ್ನ ಮೊದಲ ಎಸೆತದಲ್ಲೇ ನಾಯಕ ಬಾಬರ್ ಆಜಂ (0) ಅವರನ್ನು ಶೂನ್ಯಕ್ಕೆ ಔಟ್ ಮಾಡಿದ ಅರ್ಷದೀಪ್ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ 4ನೇ ಓವರ್ನ ಕೊನೆಯ ಎಸೆತದಲ್ಲಿ ಮೊಹಮ್ಮದ್ ರಿಜ್ವಾನ್ (4) ಅರ್ಷದೀಪ್ ಔಟ್ ಮಾಡಿದರು.
ಈ ಆರಂಭಿಕ ಆಘಾತದಿಂದ ಚೇತರಿಸಿಕೊಳ್ಳಲು ಪರದಾಡಿದ ಪಾಕ್ ತಂಡಕ್ಕೆ ಆ ಬಳಿಕ ಆಸರೆಯಾಗಿದ್ದು ಶಾನ್ ಮಸೂದ್ ಹಾಗೂ ಇಫ್ತಿಕರ್ ಅಹ್ಮದ್. 34 ಎಸೆತಗಳಲ್ಲಿ 51 ರನ್ ಬಾರಿಸಿದ ಇಫ್ತಿಕರ್ ಅಹ್ಮದ್ ಅವರನ್ನು ಮೊಹಮ್ಮದ್ ಶಮಿ ಔಟ್ ಮಾಡುವ ಮೂಲಕ ಅಮೂಲ್ಯ ಯಶಸ್ಸು ತಂದುಕೊಟ್ಟರು.
ಇದಾಗ್ಯೂ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿ ಶಾನ್ ಮಸೂದ್ ಅಜೇಯ 52 ರನ್ ಬಾರಿಸಿದರು. ಅದರಂತೆ ಪಾಕ್ ತಂಡವು ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 159 ರನ್ ಕಲೆಹಾಕಿತು. ಟೀಮ್ ಇಂಡಿಯಾ ಪರ ಅರ್ಷದೀಪ್ ಸಿಂಗ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ 3 ವಿಕೆಟ್ ಪಡೆದರೆ, ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಇನ್ನು 160 ರನ್ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಟೀಮ್ ಇಂಡಿಯಾ ವಿರಾಟ್ ಕೊಹ್ಲಿ ಅಜೇಯ 82 ರನ್ ಬಾರಿಸುವ ಮೂಲಕ ಗೆಲುವಿನ ಗುರಿ ಮುಟ್ಟಿಸಿದರು. ಈ ಮೂಲಕ 2021 ರ ಟಿ20 ವಿಶ್ವಕಪ್ ಸೋಲಿನ ಸೇಡನ್ನು ಟೀಮ್ ಇಂಡಿಯಾ ತೀರಿಸಿಕೊಂಡಿದೆ.