Rohit Sharma: ಪಂದ್ಯ ಮುಗಿದ ಬಳಿಕ ಮಹತ್ವದ ಘೋಷಣೆ ಮಾಡಿದ ರೋಹಿತ್ ಶರ್ಮಾ: ಏನಂದ್ರು ಗೊತ್ತೇ?

IND vs SL 1st T20: ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ 62 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು. ಪಂದ್ಯ ಮುಗಿದ ಬಳಿಕ ಮಾತನಾಡಿರುವ ನಾಯಕ ರೋಹಿತ್ ಶರ್ಮಾ ತಂಡ ಬ್ಯಾಟಿಂಗ್ ವಿಭಾಗದ ಬಗ್ಗೆ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

Rohit Sharma: ಪಂದ್ಯ ಮುಗಿದ ಬಳಿಕ ಮಹತ್ವದ ಘೋಷಣೆ ಮಾಡಿದ ರೋಹಿತ್ ಶರ್ಮಾ: ಏನಂದ್ರು ಗೊತ್ತೇ?
Rohit Sharma post-match presentation
Follow us
TV9 Web
| Updated By: Vinay Bhat

Updated on: Feb 25, 2022 | 8:52 AM

ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿ ಪೈಕಿ ಮೊದಲ ಕದನದಲ್ಲಿ ಗೆಲುವು ಸಾಧಿಸಿರುವ ಭಾರತ (IND vs SL T20) 1-0 ಮುನ್ನಡೆ ಪಡೆದುಕೊಂಡಿದೆ. ಬ್ಯಾಟಿಂಗ್ -ಬೌಲಿಂಗ್ ಎರಡೂ ವಿಭಾಗಗಳಲ್ಲಿ ಪ್ರಭುತ್ವ ಮೆರೆದ ರೋಹಿತ್ ಪಡೆ ತವರಿನಲ್ಲಿ ಸೋಲಿಲ್ಲದ ಸರದಾರನಾಗಿ ಮೆರೆಯುತ್ತಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ, ಇಶಾನ್ ಕಿಶನ್ (89 ರನ್) (Ishan Kishan) ಹಾಗೂ ಶ್ರೇಯಸ್ ಅಯ್ಯರ್ (57*) ಅವರ ಸ್ಫೋಟಕ ಬ್ಯಾಟಿಂಗ್ ಫಲವಾಗಿ 2 ವಿಕೆಟ್‌ಗೆ 199 ರನ್ ಪೇರಿಸಿತು. ಪ್ರತಿಯಾಗಿ ಈ ಬೃಹತ್ ಮೊತ್ತವನ್ನು ಬೆನ್ನಟ್ಟುವ ಲಕ್ಷಣವನ್ನು ಯಾವುದೇ ಹಂತದಲ್ಲೂ ತೋರದ ಶ್ರೀಲಂಕಾ 6 ವಿಕೆಟ್‌ಗೆ 137 ಕಲೆಹಾಕಲಷ್ಟೇ ಶಕ್ತವಾಯಿತು. ಪರಿಣಾಮ ಟೀಮ್ ಇಂಡಿಯಾ (Team India) 62 ರನ್‌ಗಳ ಗೆಲುವು ದಾಖಲಿಸಿತು. ಜೊತೆಗೆ ಭಾರತ ಟಿ20 ಕ್ರಿಕೆಟ್‌ನಲ್ಲಿ ಸತತ 10 ಪಂದ್ಯ ಗೆಲ್ಲುವ ಮೂಲಕ ಹೊಸ ದಾಖಲೆ ಕೂಡ ಬರೆಯಿತು. ಪಂದ್ಯ ಮುಗಿದ ಬಳಿಕ ಮಾತನಾಡಿದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ವಿಭಾಗದ ಬಗ್ಗೆ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

ಸಾಕಷ್ಟು ಸಮಯದ ಬಳಿಕ ಟೀಮ್ ಇಂಡಿಯಾಕ್ಕೆ ಕಮ್​ಬ್ಯಾಕ್ ಮಾಡಿದ ರವೀಂದ್ರ ಜಡೇಜಾ ಅಚ್ಚರಿ ಎಂಬಂತೆ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದರು. ಇವರಿಗೆ ಹೆಚ್ಚಿನ ಬ್ಯಾಟಿಂಗ್ ಸಿಗದೆ 4 ಎಸೆತಗಳಲ್ಲಿ 3 ರನ್ ಗಳಿಸಿ ಅಜೇಯರಾಗಿ ಉಳಿದರು. ಈ ಬಗ್ಗೆ ಮಾತನಾಡಿರುವ ರೋಹಿತ್, “ಜಡೇಜಾ ತಂಡಕ್ಕೆ ಮರಳಿರುವುದು ಸಂತಸ ನೀಡಿದೆ. ಅವರ ಬ್ಯಾಟಿಂಗ್​ನಿಂದ ನಮಗೆ ಸಾಕಷ್ಟು ನಿರೀಕ್ಷೆಗಳಿವೆ, ಹೀಗಾಗಿ 4ನೇ ಸ್ಥಾನದಲ್ಲಿ ಆಡಿಸಿದೆವು. ಮುಂದಿನ ದಿನಗಳಲ್ಲಿ ಅವರು ಭಾರತಕ್ಕಾಗಿ ಈ ಸ್ಥಾನದಲ್ಲಿ ಆಡುವುದನ್ನು ನೀವು ನೋಡುತ್ತೀರಿ. ಅವರು ಅಪ್ಪರ್ ಆರ್ಡರ್​ನಲ್ಲಿ ಬ್ಯಾಟಿಂಗ್ ಮಾಡುವುದು ನನಗೆ ನೋಡಬೇಕು. ಜಡೇಜಾ ಬ್ಯಾಟಿಂಗ್​ನಲ್ಲಿ ಸಾಕಷ್ಟು ಸುಧಾರಣೆ ಕಂಡಿದ್ದೇವೆ. ಹೀಗಾಗಿ ಅವರನ್ನು ಮೇಲಿನ ಕ್ರಮಾಂಕದಲ್ಲಿ ಕಣಕ್ಕಿಳಿಸಿ ಯಾವರೀತಿ ಆಡುತ್ತಾರೆ ಎಂಬುದು ನೋಡಬೇಕಿದೆ. ಅವರನ್ನು ಕಣಕ್ಕಿಳಿಸಿ ನಾವು ಏನನ್ನು ಸಾಧಿಸಲು ಹೊರಟಿದ್ದೇವೆ ಎಂಬ ನಮ್ಮ ಯೋಜನೆ ಸರಿಯಾಗಿದೆ,” ಎಂದು ಹೇಳಿದ್ದಾರೆ. ಈ ಮೂಲಕ ತಂಡದ ಬ್ಯಾಟಿಂಗ್ ಆರ್ಡರ್​ನಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಬದಲಾವಣೆ ಆಗುವ ಬಗ್ಗೆ ಘೋಷಣೆ ಮಾಡಿದ್ದಾರೆ.

ಇನ್ನು ಇಶಾನ್ ಕಿಶನ್ ಬ್ಯಾಟಿಂಗ್ ಬಗ್ಗೆ ಮಾತನಾಡಿದ ರೋಹಿತ್, “ನನಗೆ ಇಶಾನ್ ಬಹಳ ದಿನಗಳಿಂದ ಗೊತ್ತು. ಅವನ ಮನಸ್ಥಿತಿ ನನಗೆ ಗೊತ್ತು. ಅವರಲ್ಲಿರುವ ಸಾಮರ್ಥ್ಯವೂ ನನಗೆ ಗೊತ್ತು. ಇಂದು ಅವರು ಆಡಿದ ಆಟ ನೈಜ್ಯವಾಗಿತ್ತು. ಇನ್ನೊಂದು ಕಡೆಯಲ್ಲಿ ನಿಂತು ಅವರ ಆಟವನ್ನು ನೋಡುವುದು ಸಂತಸ ನೀಡುತ್ತದೆ. ಅವರ ಇಂದಿನ ಇನ್ನಿಂಗ್ಸ್ ಅದ್ಭುತವಾಗಿತ್ತು. ಅದು ಅವರಿಗೇ ಒಂದು ಸವಾಲಾಗಿತ್ತು,” ಎಂದು ಹೇಳಿದರು.

“ನಾನು ದೊಡ್ಡ ಮೈದಾನದಲ್ಲಿ ಆಡಲು ತುಂಬಾ ಇಷ್ಟ ಪಡುತ್ತೇನೆ. ಯಾಕೆಂದರೆ ಅದು ಬ್ಯಾಟರ್​ಗೆ ಒಂದು ಸವಾಲಾಗಿರುತ್ತದೆ, ಅವನ ಸಾಮರ್ಥ್ಯವನ್ನು ಅದು ಪರೀಕ್ಷೆ ಮಾಡುತ್ತದೆ. ನಮ್ಮ ಫೀಲ್ಡಿಂಗ್ ವಿಭಾಗ ಇನ್ನಷ್ಟು ಸುಧಾರಿಸಬೇಕಿದೆ. ಈ ಸಮಸ್ಯೆ ಬೆಂಬಿಡದೆ ಕಾಡುತ್ತಿದೆ. ಸುಲಭ ಕ್ಯಾಚ್​ಗಳನ್ನು ಕೈಚೆಲ್ಲುತ್ತಿದ್ದೇವೆ. ನಮ್ಮ ಫೀಲ್ಡಿಂಗ್ ಕೋಚ್ ಈ ವಿಚಾರದ ಬಗ್ಗೆ ಕೆಲಸ ಮಾಡುತ್ತಿದ್ದಾರೆ,” ಎಂದು ರೋಹಿತ್ ಹೇಳಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಶೇಷ ಸಾಧನೆಯನ್ನು ಮಾಡಿದ್ದಾರೆ. ಪುರುಷರ ಟಿ20 ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅತಿ ಹೆಚ್ಚು ರನ್‌ ಸ್ಕೋರ್ ಗಳಿಸಿದ ಆಟಗಾರ ಎಂಬ ದಾಖಲೆ ತನ್ನ ಖಾತೆಗೆ ಸೇರಿಸಿಕೊಂಡಿದ್ದಾರೆ. 123 ಟಿ20 ಪಂದ್ಯವನ್ನಾಡಿರುವ ರೋಹಿತ್ 3300 ರನ್ ಕಲೆಹಾಕಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ(3,296 ರನ್) ದಾಖಲೆಯನ್ನೂ ಹಿಂದಿಕ್ಕಿದ್ದಾರೆ.

IND vs SL 1st T20: ಮುಂದುವರಿದ ಭಾರತದ ಗೆಲುವಿನ ಸಂಭ್ರಮ: ಮೊದಲ ಟಿ20ಯಲ್ಲೇ ಶ್ರೀಲಂಕಾಕ್ಕೆ ನಡುಕ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ