ICC World Cup: ಇಂಗ್ಲೆಂಡ್ ವಿರುದ್ಧ ಅಭ್ಯಾಸ ಪಂದ್ಯ: ಭಾರತ ಪರ ಯಾರೆಲ್ಲ ಆಡಲಿದ್ದಾರೆ?

India vs England, ICC World Cup 2023 Warm-Up Match: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ 2023ರ ಅಭ್ಯಾಸ ಪಂದ್ಯದಲ್ಲಿ ಇಂದು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡವನ್ನು ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ಎದುರಿಸಲಿದೆ. ಈ ಪಂದ್ಯವನ್ನು ಲೈವ್ ವೀಕ್ಷಿಸುವುದು ಹೇಗೆ?.

ICC World Cup: ಇಂಗ್ಲೆಂಡ್ ವಿರುದ್ಧ ಅಭ್ಯಾಸ ಪಂದ್ಯ: ಭಾರತ ಪರ ಯಾರೆಲ್ಲ ಆಡಲಿದ್ದಾರೆ?
IND vs ENG Warm Up Match
Follow us
Vinay Bhat
|

Updated on: Sep 30, 2023 | 6:39 AM

ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 5 ರಂದು ಭಾರತದಲ್ಲಿ ಆರಂಭವಾಗಲಿರುವ ಈ ರಣರೋಚಕ ಟೂರ್ನಿಗೆ ಐದು ದಿನವಷ್ಟೇ ಬಾಕಿಯಿದೆ. ಇದಕ್ಕೂ ಮುನ್ನ ಅಭ್ಯಾಸ ಪಂದ್ಯಗಳು ನಡೆಯುತ್ತಿದೆ. ಶುಕ್ರವಾರ ಮೂರು ವಾರ್ಮ್-ಅಪ್ ಮ್ಯಾಚ್ ಆಯೋಜಿಸಲಾಗಿತ್ತು. ಇಂದು ಎರಡು ಪಂದ್ಯಗಳು ನಡೆಯಲಿದೆ. ಮೊದಲ ಪಂದ್ಯದಲ್ಲಿ ಭಾರತ-ಇಂಗ್ಲೆಂಡ್ (India vs England) ಹಾಗೂ ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ-ನೆದರ್ಲೆಂಡ್ಸ್ ಮುಖಾಮುಖಿ ಆಗಲಿದೆ.

ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡವನ್ನು ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ಎದುರಿಸಲಿದೆ. ಈಗಾಗಲೇ ಉಭಯ ತಂಡಗಳು ಗುವಾಹಟಿಯ ನೆಟ್​ನಲ್ಲಿ ಪ್ರ್ಯಾಕ್ಟೀಸ್ ಶುರು ಮಾಡಿದ್ದಾರೆ. ಭಾರತ-ಇಂಗ್ಲೆಂಡ್ ನಡುವಿನ ಅಭ್ಯಾಸ ಪಂದ್ಯವು ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರ ಪ್ರಸಾರ ವೀಕ್ಷಿಸಬಹುದು. ಹಾಗೆಯೆ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಇರಲಿದೆ.

Mohammad Rizwan Century: ಭಾರತದಲ್ಲಿ ಚೊಚ್ಚಲ ಶತಕ ಸಿಡಿಸಿ ಮಿಂಚಿದ ಪಾಕ್ ವಿಕೆಟ್‌ಕೀಪರ್ ಬ್ಯಾಟರ್​..!

ಇದನ್ನೂ ಓದಿ
Image
ಇಂದು ಭಾರತ- ಇಂಗ್ಲೆಂಡ್ ನಡುವೆ ಮೊದಲ ಅಭ್ಯಾಸ ಪಂದ್ಯ
Image
ಸೋಲಿನೊಂದಿಗೆ ವಿಶ್ವಕಪ್‌ ಪ್ರಯಾಣ ಆರಂಭಿಸಿದ ಪಾಕಿಸ್ತಾನ
Image
ಸೂರ್ಯನಿಗೆ ಪ್ಲೇಯಿಂಗ್​ ಇಲೆವೆನ್‌ನಲ್ಲಿ ಅವಕಾಶ ಸಿಗುವುದಿಲ್ಲ ಎಂದ ಗವಾಸ್ಕರ್
Image
ಬಾಂಗ್ಲಾದೇಶ ತಂಡಕ್ಕೆ ಬಿಗ್ ಶಾಕ್; ನಾಯಕನಿಗೆ ಇಂಜುರಿ..!

ಇದು ವಾರ್ಮ್-ಅಪ್ ಮ್ಯಾಚ್ ಆಗಿರುವುದರಿಂದ ಪ್ಲೇಯಿಂಗ್ ಇಲೆವೆನ್ ಎಂಬ ನಿಯಮವಿಲ್ಲ. ತಂಡದಲ್ಲಿರುವ ಯಾವ ಆಟಗಾರ ಕೂಡ ಕಣಕ್ಕಿಳಿಯಬಹುದು. ಬ್ಯಾಟಿಂಗ್ ಇನ್ನಿಂಗ್ಸ್​ನಲ್ಲಿ ಆಡಿದ ಆಟಗಾರರೇ ಬೌಲಿಂಗ್ ಮಾಡುವಾಗ ಕೂಡ ಇರಬೇಕೆಂದಿಲ್ಲ. ಹೀಗಾಗಿ ಟೀಮ್ ಇಂಡಿಯಾ ಎಲ್ಲ ಆಟಗಾರರನ್ನು ಅಭ್ಯಾಸ ಪಂದ್ಯದಲ್ಲಿ ಆಡಿಸಬಹುದು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಕಣಕ್ಕಿಳಿಯದೆ ವಿಶ್ರಾಂತಿ ಪಡೆದುಕೊಳ್ಳುವ ಸಂಭವ ಕೂಡ ಇದೆ.

ಬರ್ಸಾಪರಾ ಸ್ಟೇಡಿಯಂ ಪಿಚ್ ವರದಿ:

ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ಸಹಕಾರಿ ಆಗಿದೆ. ವೇಗದ ಬೌಲರ್​ಗಳಿಗೆ ಹೆಚ್ಚು ಬೌನ್ಸ್ ನೀಡುತ್ತದೆ. ಬೌಲರ್‌ಗಳು ಈ ಪಿಚ್‌ನಲ್ಲಿ ಸರಿಯಾದ ಗುರಿ ಇಟ್ಟು ಬೌಲಿಂಗ್ ಮಾಡಿದರೆ ಮಾತ್ರ ಯಶಸ್ಸು ಸಾಧ್ಯ. ಆಟವು ಮುಂದುವರೆದಂತೆ, ವಿಶೇಷವಾಗಿ ಮಧ್ಯಮ ಹಂತಗಳಲ್ಲಿ ಪಿಚ್ ಸ್ಪಿನ್ನರ್​ಗಳಿಗೆ ಸಹಾಯ ಮಾಡಲಿದೆ. ಟಾಸ್ ಗೆದ್ದ ತಂಡವು ಮೊದಲು ಬ್ಯಾಟಿಂಗ್ ಆಯ್ಕೆ ಮಾಡುವುದು ಉತ್ತಮ ಆಯ್ಕೆ.

ಹವಾಮಾನ ವರದಿ:

ಗುವಾಹಟಿಯಲ್ಲಿ ಸೆಪ್ಟೆಂಬರ್ 30 ರಂದು ಹೆಚ್ಚಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ 70 ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಭ್ಯಾಸ ಪಂದ್ಯಕ್ಕೆ ಮಳೆ ಅಡಚಣೆ ಪಡಿಸಬಹುದು. ತಾಪಮಾನವು ಸುಮಾರು 26 ಡಿಗ್ರಿ ಸೆಲ್ಸಿಯಸ್‌ನಿಂದ 34 ಡಿಗ್ರಿ ಸೆಲ್ಸಿಯಸ್ ಇರಬಹುದು. ಆರ್ದ್ರತೆಯು ಸುಮಾರು 76-92 ಪ್ರತಿಶತದಷ್ಟು ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. 50 ಓವರ್‌ಗಳ ಪಂದ್ಯದ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 5-10 ಕಿ.ಮೀ ಇರಲಿದೆ.

2023ರ ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್.

2023ರ ವಿಶ್ವಕಪ್‌ಗೆ ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಸ್ಯಾಮ್ ಕುರನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಜೋ ರೂಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಕ್ರಿಸ್ ವೋಕ್ಸ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ