IND vs NZ, ICC World Cup: ಬೆಂಗಳೂರಿನಿಂದ ಮುಂಬೈಗೆ ಹೊರಟ ಟೀಮ್ ಇಂಡಿಯಾ: ಕೊಹ್ಲಿ ಮಾತ್ರ ಮಿಸ್ಸಿಂಗ್

Team India jets off to Mumbai: ಭಾರತ ತಂಡ ಬುಧವಾರ (ನವೆಂಬರ್ 15) ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಸೆಣಸಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಬೆಂಗಳೂರಿನಿಂದ ಮುಂಬೈಗೆ ಪ್ರಯಾಣ ಬೆಳೆಸಲು ತಯಾರಾಗುತ್ತಿದ್ದಾರೆ. ಆದರೆ, ವಿರಾಟ್ ಕೊಹ್ಲಿ ಎಲ್ಲ ಭಾರತೀಯ ಆಟಗಾರರ ಜೊತೆ ಒಟ್ಟಾಗಿ ಪ್ರಯಾಣಿಸಿಲ್ಲ.

IND vs NZ, ICC World Cup: ಬೆಂಗಳೂರಿನಿಂದ ಮುಂಬೈಗೆ ಹೊರಟ ಟೀಮ್ ಇಂಡಿಯಾ: ಕೊಹ್ಲಿ ಮಾತ್ರ ಮಿಸ್ಸಿಂಗ್
Team India and Virat Kohli
Follow us
Vinay Bhat
|

Updated on: Nov 13, 2023 | 11:55 AM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಅಮೋಘ ಜಯ ಸಾಧಿಸಿ ಸೋಲಿಲ್ಲದ ಸರದಾರನಾಗಿ ಮೆರೆಯುತ್ತಿರುವ ರೋಹಿತ್ ಶರ್ಮಾ (Rohit Sharma) ನೇತೃತ್ವದ ಭಾರತ ಕ್ರಿಕೆಟ್ ತಂಡವು ಇದೀಗ ಮಹತ್ವದ ಸೆಮಿ ಫೈನಲ್​ಗೆ ಸಜ್ಜಾಗುತ್ತಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಬೆಂಗಳೂರಿನಿಂದ ಮುಂಬೈಗೆ ಪ್ರಯಾಣ ಬೆಳೆಸಲು ತಯಾರಾಗುತ್ತಿದ್ದಾರೆ. ಆದರೆ, ವಿರಾಟ್ ಕೊಹ್ಲಿ ಎಲ್ಲ ಭಾರತೀಯ ಆಟಗಾರರ ಜೊತೆ ಒಟ್ಟಾಗಿ ಪ್ರಯಾಣಿಸಿಲ್ಲ.

ಭಾರತ ತಂಡ ಬುಧವಾರ (ನವೆಂಬರ್ 15) ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಸೆಣಸಲಿದೆ. ಲೀಗ್ ಪಂದ್ಯದಲ್ಲಿ ಒಂದೇ ಒಂದು ಸೋಲು ಕಾಣದ ಭಾರತ ಸೆಮೀಸ್​ಗೆ ತಲುಪಿದೆ. ಇಲ್ಲಿ ಗೆದ್ದರೆ ಫೈನಲ್​ಗೆ ಏರಲಿದೆ. ಅದೆ ಸೋತರೆ ಟೂರ್ನಿಯಿಂದ ಔಟ್ ಆಗಲಿದೆ. ಹೀಗಾಗಿ ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು.

ಇದನ್ನೂ ಓದಿ
Image
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ಫ್ಯಾನ್ಸ್: ವಿಡಿಯೋ ವೈರಲ್
Image
ವಿಶ್ವಕಪ್​ನಲ್ಲಿ ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?, ಎಲ್ಲಿ?
Image
ರೋಹಿತ್​ಗೆ ವಿಕೆಟ್ ಸಿಕ್ಕಾಗ ಡಗೌಟ್​ನಲ್ಲಿ ರಿತಿಕಾ ಕೊಟ್ಟ ರಿಯಾಕ್ಷನ್ ನೋಡಿ
Image
ಒಂಬತ್ತೂ ಪಂದ್ಯಗಳಲ್ಲಿ ಜಯ ಸಾಧಿಸಿದ್ದು ಹೇಗೆ?, ರಹಸ್ಯ ಬಿಚ್ಚಿಟ್ಟ ರೋಹಿತ್

IND vs NZ, Semi Final: ವಿಶ್ವಕಪ್​ನಲ್ಲಿ ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?, ಎಲ್ಲಿ?: ಇಲ್ಲಿದೆ ಮಾಹಿತಿ

ಕೊಹ್ಲಿ ಏಕಾಂಗಿ ಪ್ರಯಾಣ:

ಟೀಮ್ ಇಂಡಿಯಾ ಸೂಪರ್‌ಸ್ಟಾರ್ ವಿರಾಟ್ ಕೊಹ್ಲಿ ಇತರೆ ಆಟಗಾರರಿಗಿಂತ ಮೊದಲು ಏಕಾಂಗಿಯಾಗಿ ಮುಂಬೈಗೆ ತೆರಳಿದ್ದಾರೆ. ಕಪ್ಪು ಟಿ-ಶರ್ಟ್ ಮತ್ತು ಬಿಳಿ ಪ್ಯಾಂಟ್ ಧರಿಸಿ ಬಿಳಿ ಸ್ನೀಕರ್‌ಗಳೊಂದಿಗೆ ವಿರಾಟ್ ಏರ್ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ವಿಮಾಣ ನಿಲ್ದಾಣದಲ್ಲಿ ಕೊಹ್ಲಿಯನ್ನು ಕಂಡ ಅಭಿಮಾನಿಗಳು ಸೆಲ್ಫಿ ಮತ್ತು ಆಟೋಗ್ರಾಫ್‌ಗಳಿಗಾಗಿ ಮುಗಿಬಿದ್ದರು. ಕೊಹ್ಲಿ ಅವರು ನೆದರ್ಲೆಂಡ್ಸ್ ವಿರುದ್ಧದ ಪಂದ್ಯಕ್ಕೆ ಕೂಡ ಇತರೆ ಆಟಗಾರರ ಜೊತೆ ಬರದೆ ಕೋಲ್ಕತ್ತಾದಿಂದ ಬೆಂಗಳೂರಿಗೆ ಒಬ್ಬರೇ ಪ್ರಯಾಣಿಸಿದ್ದರು.

ಏರ್ಪೋರ್ಟ್​ನಲ್ಲಿ ವಿರಾಟ್ ಕೊಹ್ಲಿ:

ಇಡೀ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ತಂಡದ ಪರ ಮಹತ್ವದ ಪಾತ್ರವಹಿಸಿದ್ದಾರೆ. ಡಚ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಕೊಹ್ಲಿ ಕೇವಲ 56 ಎಸೆತಗಳಲ್ಲಿ 51 ರನ್ ಗಳಿಸಿ ಒಂದು ವಿಕೆಟ್ ಪಡೆದರು. ಬಲಗೈ ಬ್ಯಾಟರ್ ವಿಶ್ವಕಪ್‌ನಲ್ಲಿ ಭಾರತದ ಪರ ಅಗ್ರ ಸ್ಕೋರರ್ ಆಗಿದ್ದು, ಒಂಬತ್ತು ಪಂದ್ಯಗಳಲ್ಲಿ ಎರಡು ಶತಕಗಳನ್ನು ಒಳಗೊಂಡಂತೆ 594 ರನ್ ಗಳಿಸಿದ್ದಾರೆ. ಅದ್ಭುತ ಫಾರ್ಮ್​ನಲ್ಲಿರುವ ವಿರಾಟ್ ಸೆಮಿ ಫೈನಲ್​ನಲ್ಲಿ ಹೇಗೆ ಪ್ರದರ್ಶನ ತೋರುತ್ತಾರೆ ನೋಡಬೇಕು.

ವಾಂಖೆಡೆ ಭಾರತಕ್ಕೆ ಅಗ್ನಿಪರೀಕ್ಷೆ:

ಭಾರತ ತಂಡಕ್ಕೆ ವಾಂಖೆಡೆ ಕ್ರೀಡಾಂಗಣ ಸಂಪೂರ್ಣ ಲಕ್ಕಿ ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಇದುವರೆಗೆ ವಾಂಖೆಡೆಯಲ್ಲಿ ನಡೆದಿರುವ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಇದುವರೆಗೆ ಒಂದೇ ಒಂದು ಪಂದ್ಯ ಗೆದ್ದಿಲ್ಲ. 1983 ರಲ್ಲಿ ಇಂಗ್ಲೆಂಡ್ ತಂಡ ಭಾರತವನ್ನು 35 ರನ್‌ಗಳಿಂದ ಸೋಲಿಸಿತ್ತು. ಎರಡು ವರ್ಷಗಳ ನಂತರ, ನೆಹರು ಕಪ್‌ನ ಸೆಮಿ-ಫೈನಲ್​ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೂಡ ಸೋತಿತ್ತು. 2016 ರ ಟಿ20 ವಿಶ್ವಕಪ್ ಸೆಮಿಫೈನಲ್​ನಲ್ಲೂ ವಿಂಡೀಸ್ ವಿರುದ್ಧ ಭಾರತ ಜಯ ಸಾಧಿಸುವಲ್ಲಿ ವಿಫಲವಾಗಿತ್ತು. ಆದರೆ, 2011ರ ವಿಶ್ವಕಪ್ ಫೈನಲ್​ನಲ್ಲಿ ಶ್ರೀಲಂಕಾ ವಿರುದ್ಧ ಇದೇ ಮೈದಾನದಲ್ಲಿ ಭಾರತ ಗೆದ್ದು 28 ವರ್ಷಗಳ ಬಳಿಕ ವಿಶ್ವಕಪ್ ಎತ್ತಿ ಹಿಡಿದಿತ್ತು ಎಂಬುದು ಸಂತಸದ ಸಂಗತಿ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!