Rohit Sharma: ಟೆಸ್ಟ್ ಪಂದ್ಯಕ್ಕೂ ರೋಹಿತ್ ಶರ್ಮಾ ನಾಯಕ

Virat Kohli: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್-ಕೀಪರ್), ಇಶಾನ್ ಕಿಶನ್

Rohit Sharma: ಟೆಸ್ಟ್ ಪಂದ್ಯಕ್ಕೂ ರೋಹಿತ್ ಶರ್ಮಾ ನಾಯಕ
Virat Kohli-Rohit Sharma
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 10, 2021 | 7:31 PM

ಟಿ20 ವಿಶ್ವಕಪ್​ನಲ್ಲಿನ (T20 World Cup 2021) ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ (Team India) ಮೇಜರ್ ಸರ್ಜರಿ ಮಾಡಲಾಗಿದೆ. ನ್ಯೂಜಿಲೆಂಡ್​ ವಿರುದ್ದದ ಸರಣಿಗಾಗಿ ಟಿ20 ವಿಶ್ವಕಪ್​ ತಂಡದಲ್ಲಿದ್ದ ಕೆಲ ಆಟಗಾರರಿಗೆ ಕೊಕ್ ನೀಡಿ ಯುವ ಆಟಗಾರರಿಗೆ ಸ್ಥಾನ ನೀಡಲಾಗಿದೆ. ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿಯ (Virat Kohli) ರಾಜೀನಾಮೆಯಿಂದ ತೆರವಾಗಿದ್ದ ಟಿ20 ತಂಡದ ನಾಯಕತ್ವ ರೋಹಿತ್ ಶರ್ಮಾ (Rohit Sharma) ಅವರಿಗೆ ಒಲಿದಿದೆ. ಅದರಂತೆ ನ್ಯೂಜಿಲೆಂಡ್ ವಿರುದ್ದದ ಸರಣಿಯೊಂದಿಗೆ ಹಿಟ್​ಮ್ಯಾನ್ ಭಾರತ ಟಿ20 ತಂಡದ ನಾಯಕನಾಗಿ ಹೊಸ ಇನಿಂಗ್ಸ್​ ಆರಂಭಿಸಲಿದ್ದಾರೆ. ಆದರೆ ಆ ಬಳಿಕ ನಡೆಯುವ ಟೆಸ್ಟ್ ಪಂದ್ಯದಲ್ಲೂ ರೋಹಿತ್ ಶರ್ಮಾ ನಾಯಕನಾಗಿ ಮುಂದುವರೆಯಲಿದ್ದಾರೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ.

ಹೌದು, ನ್ಯೂಜಿಲೆಂಡ್ ವಿರುದ್ದದ ಟಿ20 ಸರಣಿಯಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಯಿದೆ. ಕೊಹ್ಲಿ ಹೆಚ್ಚಿನ ವಿಶ್ರಾಂತಿ ಬಯಸಿದ್ದು, ಹೀಗಾಗಿ ಮೊದಲ ಟೆಸ್ಟ್​ ಪಂದ್ಯದ ವೇಳೆಗೆ ತಂಡವನ್ನು ಕೂಡಿಕೊಳ್ಳುವುದು ಅನುಮಾನ. ಹೀಗಾಗಿ ನವೆಂಬರ್ 25 ರಿಂದ ಶುರುವಾಗಲಿರುವ ನ್ಯೂಜಿಲೆಂಡ್ ವಿರುದ್ದದ ಮೊದಲ ಟೆಸ್ಟ್​ ಪಂದ್ಯದಲ್ಲೂ ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ನವೆಂಬರ್ ಅಂತ್ಯದವರೆಗೂ ವಿಶ್ರಾಂತಿ ಬಯಸಿದ್ದಾರೆ. ಹೀಗಾಗಿ ಡಿಸೆಂಬರ್​ನಲ್ಲಿ ನಡೆಯಲಿರುವ ಪಂದ್ಯಗಳಿಗೆ ಲಭ್ಯರಾಗುವ ಸಾಧ್ಯತೆಯಿದೆ. ಅದರಂತೆ ಡಿಸೆಂಬರ್ 3 ರಿಂದ ಮುಂಬೈನಲ್ಲಿ ಶುರುವಾಗಲಿರುವ ನ್ಯೂಜಿಲೆಂಡ್ ವಿರುದ್ದ 2ನೇ ಟೆಸ್ಟ್​ ಪಂದ್ಯದ ವೇಳೆ ತಂಡಕ್ಕೆ ಮರಳಲಿದ್ದಾರೆ. ಹೀಗಾಗಿ ಮೊದಲ ಟೆಸ್ಟ್ ಪಂದ್ಯದಲ್ಲೂ ರೋಹಿತ್ ಶರ್ಮಾ ಅವರೇ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವೆ 3 ಟಿ20 ಪಂದ್ಯ ಹಾಗೂ 2 ಟೆಸ್ಟ್ ಪಂದ್ಯಗಳ ಸರಣಿ ನಡೆಯಲಿದೆ. ನವೆಂಬರ್ 17 ರಿಂದ ಟಿ20 ಸರಣಿ ಶುರುವಾಗಲಿದ್ದು, ಡಿಸೆಂಬರ್ 7 ರೊಂದಿಗೆ ಟೆಸ್ಟ್​ ಸರಣಿ ಮುಕ್ತಾಯವಾಗಲಿದೆ.

ಭಾರತ vs ನ್ಯೂಜಿಲೆಂಡ್ ವೇಳಾಪಟ್ಟಿ 1 ನೇ ಟಿ20 ಪಂದ್ಯ – 17 ನವೆಂಬರ್, ಜೈಪುರ 2 ನೇ ಟಿ20 ಪಂದ್ಯ – 19 ನವೆಂಬರ್, ರಾಂಚಿ 3 ನೇ ಟಿ20 ಪಂದ್ಯ – 21 ನವೆಂಬರ್, ಕೋಲ್ಕತ್ತಾ 1 ನೇ ಟೆಸ್ಟ್ – 25 ರಿಂದ 29 ನವೆಂಬರ್, ಕಾನ್ಪುರ 2 ನೇ ಟೆಸ್ಟ್ – 3 ರಿಂದ 7 ಡಿಸೆಂಬರ್, ಮುಂಬೈ

ಭಾರತದ T20I ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಅಶ್ವಿನ್, ಅಕ್ಷರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.

(Rohit Sharma to Lead India in First Test Against New Zealand)

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​