India vs West Indies: ಅಹ್ಮದಾಬಾದ್ಗೆ ತಲುಪಿದ ಟೀಮ್ ಇಂಡಿಯಾ ಆಟಗಾರರು: ಕ್ವಾರಂಟೈನ್ನಲ್ಲಿ ರೋಹಿತ್ ಪಡೆ
ಟೀಮ್ ಇಂಡಿಯಾದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ವಿಮಾನದಲ್ಲಿ ಅಹ್ಮದಾಬಾದ್ಗೆ ಆಗಮಿಸಿದ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಚಹಾಲ್ ಪಕ್ಕದಲ್ಲಿ ಟೀಮ್ ಇಂಡಿಯಾ ಅನುಭವಿ ಬ್ಯಾಟರ್ ಶಿಖರ್ ಧವನ್ ಕೂಡ ಇದ್ದಾರೆ.
ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಣ ಸರಣಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಫೆಬ್ರವರಿ 6 ರಿಂದ ಏಕದಿನ ಸರಣಿ ಆರಂಭವಾಗಲಿದ್ದು ಇದಕ್ಕೂ ಮುನ್ನ ಭಾರತೀಯ ತಂಡದ ಸದಸ್ಯರು ಅಹ್ಮದಾಬಾದ್ಗೆ ಬಂದಿಳಿದಿದ್ದಾರೆ. ಇಲ್ಲಿ ಮೊದಲಿಗೆ ಮೂರು ದಿನಗಳ ಕ್ವಾರಂಟೈನ್ ಪೂರೈಸಲಿದ್ದಾರೆ. ಅದಾದ ಬಳಿಕ ಬಯೋಬಬಲ್‌ಗೆ ಸೇರ್ಪಡೆಯಾಗಲಿದ್ದಾರೆ. ನಂತರ ಅಭ್ಯಾಸ ಆರಂಭಿಸಲಿದ್ದಾರೆ. ಟೀಮ್ ಇಂಡಿಯಾದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ವಿಮಾನದಲ್ಲಿ ಅಹ್ಮದಾಬಾದ್ಗೆ ಆಗಮಿಸಿದ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಚಹಾಲ್ ಪಕ್ಕದಲ್ಲಿ ಟೀಮ್ ಇಂಡಿಯಾ (Team India) ಅನುಭವಿ ಬ್ಯಾಟರ್ ಶಿಖರ್ ಧವನ್ ಕೂಡ ಇದ್ದಾರೆ. ಗಾಯಾಳಾದ ಕಾರಣ ಕಳೆದ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದ ರೋಹಿತ್ ಶರ್ಮ (Rohit Sharma) ಮೊದಲ ಬಾರಿಗೆ ಪೂರ್ಣ ಪ್ರಮಾಣದ ನಾಯಕರಾಗಿ ಈ ಏಕದಿನದಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಣ ಈ ಸರಣಿಯ ಮೂರು ಏಕದಿನ ಪಂದ್ಯಗಳನ್ನು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೊಟೇರಾದ ಸರ್ದಾರ್ ಪಟೇಲ್ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂ ಆಗಿ ಹೊಸ ವಿನ್ಯಾಸ ಪಡೆದ ಬಳಿಕ ಇದೇ ಮೊದಲ ಬಾರಿ ಏಕದಿನ ಕ್ರಿಕೆಟ್ ಸರಣಿಗೆ ಆತಿಥ್ಯ ವಹಿಸುತ್ತಿರುವುದು ವಿಶೇಷವಾಗಿದೆ. ಇದಾದ ಬಳಿಕ ಟಿ20 ಸರಣಿಯ 3 ಪಂದ್ಯಗಳು ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಆಯೋಜನೆಯಾಗಲಿದೆ.
Ahemdabad ✈️?? pic.twitter.com/oNqUDb7QUa
— Yuzvendra Chahal (@yuzi_chahal) January 30, 2022
ಈಗಾಗಲೇ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕೂಡ ಬಲಿಷ್ಠ ಭಾರತ ತಂಡವನ್ನು ಪ್ರಕಟ ಮಾಡಿದೆ. ಕೆಲವು ಅಚ್ಚರಿಯ ಆಯ್ಕೆಗಳು ನಡೆದರೆ, ಪ್ರಮುಖ ಬೌಲರ್ಗಳಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನೂ ಕೆಲ ಆಟಗಾರರು ಇಂಜುರಿ ಸಮಸ್ಯೆಯಿಂದ ಸಂಪೂರ್ಣ ಹೊರಬಂದಿಲ್ಲ. ನಾಯಕನಾಗಿ ರೋಹಿತ್ ಶರ್ಮಾ ಕಮ್ಬ್ಯಾಕ್ ಮಾಡಿದ್ದಾರೆ. ಜೊತೆಗೆ ರಿಸ್ಟ್ ಸ್ಪಿನ್ನರ್ ಕುಲ್ದೀಪ್ ಯಾದವ್ ಕೂಡ ಏಕದಿನ ಮತ್ತು ಟಿ20 ತಂಡಕ್ಕೆ ಪುನರಾಗಮನ ಕಂಡಿದ್ದರೆ, ಯುವ ಬೌಲರ್‌ಗಳಾದ ಲೆಗ್-ಸ್ಪಿನ್ನರ್ ರವಿ ಬಿಷ್ಣೋಯಿ ಹಾಗೂ ವೇಗಿ ಆವೇಶ್ ಖಾನ್ ತಂಡದಲ್ಲಿ ಸ್ಥಾನ ಪಡೆದಿರುವ ಹೊಸಮುಖವಾಗಿದ್ದಾರೆ.
ಭಾರತ ವಿರುದ್ಧದ ಏಕದಿನ ಸರಣಿಗೆ ವೆಸ್ಟ್ ಇಂಡೀಸ್ ತಂಡವನ್ನು ಕೀರೊನ್ ಪೊಲ್ಲಾರ್ಡ್ ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ನಿಕೋಲಸ್ ಪೂರನ್, ಡ್ಯಾರೆನ್ ಬ್ರಾವೋ, ಫಾಬಿನ್ ಅಲೆನ್, ಜೇಸನ್ ಹೋಲ್ಡರ್ ಸೇರಿದಂತೆ ಸ್ಟಾರ್ ಆಟಗಾರರ ದಂಡೇ ಇದೆ. ಹೀಗಾಗಿ ಭಾರತಕ್ಕೆ ಕಠಿಣ ಪೈಪೋಟಿ ನೀಡಲು ಕೆರಿಬಿಯನ್ನರು ಮುಂದಾಗಿದ್ದಾರೆ.
ಏಕದಿನ ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೀ), ದೀಪಕ್ ಚಹರ್, ಶಾರ್ದೂಲ್ ಠಾಕೂರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಆವೇಶ್ ಖಾನ್.
ಏಕದಿನ ಪಂದ್ಯಕ್ಕೆ ವೆಸ್ಟ್ ಇಂಡೀಸ್ ತಂಡ: ಕೀರೊನ್ ಪೊಲಾರ್ಡ್ (ನಾಯಕ), ಕೀಮರ್ ರೋಚ್, ಎನ್ಕ್ರುಮ್ ಬೊನ್ನೆರ್, ಬ್ರಾಂಡನ್ ಕಿಂಗ್, ಫಾಬಿನ್ ಅಲೆನ್, ಡ್ಯಾರೆನ್ ಬ್ರಾವೋ, ಶಮರ್ ಬ್ರೋಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೆಲ್ ಹುಸೈನ್, ಅಲ್ಜಾರಿ ಜೋಸೆಫ್, ನಿಕೋಲಸ್ ಪೂರನ್, ರೊಮಾರಿಯೊ ಶೆಪರ್ಡ್, ಓಡೆನ್ ಸ್ಮಿತ್, ಹೇಡನ್ ವಾಲ್ಶ್.
Glenn maxwell: 19 ಫೋರ್, 5 ಸಿಕ್ಸ್: ಗ್ಲೆನ್ ಮ್ಯಾಕ್ಸ್ವೆಲ್ ಸಿಡಿಲಬ್ಬರದ ಶತಕ