AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಆಸ್ಟ್ರೇಲಿಯಾದಲ್ಲಿ ರೋಹಿತ್, ಕೊಹ್ಲಿಯ ಕೊನೆಯ ಪಂದ್ಯ; ಎಷ್ಟು ಗಂಟೆಗೆ ಆರಂಭ?

IND vs AUS 3rd ODI: ಸರಣಿ ಕಳೆದುಕೊಂಡಿರುವ ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ ಕ್ಲೀನ್ ಸ್ವೀಪ್ ತಪ್ಪಿಸುವ ಸವಾಲಿದೆ. ಸಿಡ್ನಿಯಲ್ಲಿ ನಡೆಯಲಿರುವ 3ನೇ ಏಕದಿನ ಪಂದ್ಯ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಆಸ್ಟ್ರೇಲಿಯಾದಲ್ಲಿ ಕೊನೆಯ ಏಕದಿನ ಪಂದ್ಯವಾಗಿರಲಿದೆ. ಈ ಮೈದಾನದಲ್ಲಿ ಟೀಂ ಇಂಡಿಯಾದ ದಾಖಲೆ ಉತ್ತಮವಾಗಿಲ್ಲ. ಪಂದ್ಯದ ಸಮಯ, ಸ್ಥಳ ಮತ್ತು ನೇರ ಪ್ರಸಾರದ ಸಂಪೂರ್ಣ ಮಾಹಿತಿ ಲಭ್ಯವಿದೆ.

IND vs AUS: ಆಸ್ಟ್ರೇಲಿಯಾದಲ್ಲಿ ರೋಹಿತ್, ಕೊಹ್ಲಿಯ ಕೊನೆಯ ಪಂದ್ಯ; ಎಷ್ಟು ಗಂಟೆಗೆ ಆರಂಭ?
Team India
ಪೃಥ್ವಿಶಂಕರ
|

Updated on: Oct 24, 2025 | 5:42 PM

Share

ಆಸ್ಟ್ರೇಲಿಯಾ ನೆಲದಲ್ಲಿ ಸತತ ಎರಡು ಏಕದಿನ ಪಂದ್ಯಗಳನ್ನು ಸೋತು ಸರಣಿಯನ್ನು ಕಳೆದುಕೊಂಡಿರುವ ಟೀಂ ಇಂಡಿಯಾಕ್ಕೆ (India vs Australia) ಇದೀಗ ಕ್ಲೀನ್ ಸ್ವೀಪ್ ಮುಜುಗರದಿಂದ ಪಾರಾಗುವ ಸವಾಲು ಎದುರಾಗಿದೆ. ಇದರ ಜೊತೆಗೆ ಆಸ್ಟ್ರೇಲಿಯಾದಲ್ಲಿ ಕೊನೆಯ ಪಂದ್ಯವನ್ನಾಡುತ್ತಿರುವ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿಗೆ (Virat Kohli) ಕೊನೆಯ ಏಕದಿನ ಪಂದ್ಯ ಇನ್ನಷ್ಟು ವಿಶೇಷವಾಗಿರಲಿದೆ. ಏಕೆಂದರೆ ಮುಂದಿನ ಎರಡು ವರ್ಷಗಳ ಕಾಲ ಆಸ್ಟ್ರೇಲಿಯಾದಲ್ಲಿ ಯಾವುದೇ ಏಕದಿನ ಸರಣಿ ನಡೆಯುವುದಿಲ್ಲ. ಹೀಗಾಗಿ ಈ ಜೋಡಿ ಆಸ್ಟ್ರೇಲಿಯಾದಲ್ಲಿ ಮತ್ತೆ ಭಾರತದ ಪರ ಆಡುವ ಸಾಧ್ಯತೆಯಿಲ್ಲ. ಆದ್ದರಿಂದ ಈಗಾಗಲೇ ಸರಣಿ ಸೋತಿರುವ ಟೀಂ ಇಂಡಿಯಾವನ್ನು ಇವರಿಬ್ಬರು ಸೇರಿ ವೈಟ್ ವಾಶ್ ಅವಮಾನದಿಂದ ಪಾರು ಮಾಡಬೇಕಾಗಿದೆ.

ಅಕ್ಟೋಬರ್ 25 ರಂದು ಸಿಡ್ನಿಯಲ್ಲಿ ನಡೆಯಲಿರುವ ಅಂತಿಮ ಏಕದಿನ ಪಂದ್ಯ ಭಾರತಕ್ಕೆ ಸವಾಲಿನ ಪಂದ್ಯವಾಗಿದೆ. ಏಕೆಂದರೆ ಈ ಮೈದಾನದಲ್ಲಿ ಟೀಂ ಇಂಡಿಯಾದ ದಾಖಲೆ ಅಷ್ಟು ಉತ್ತಮವಾಗಿಲ್ಲ. ಕಳೆದ ಒಂಬತ್ತು ವರ್ಷಗಳಲ್ಲಿ ಇಲ್ಲಿ ಆಡಿರುವ ಏಕದಿನ ಪಂದ್ಯಗಳಲ್ಲಿ ಟೀಂ ಇಂಡಿಯಾ ಗೆದ್ದಿಲ್ಲ. ಜನವರಿ 23, 2016 ರಂದು ನಡೆದಿದ್ದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕೊನೆಯ ಬಾರಿಗೆ ಗೆಲುವು ಸಾಧಿಸಿತ್ತು. ಅಂದಿನಿಂದ, ಟೀಂ ಇಂಡಿಯಾ ಈ ಮೈದಾನದಲ್ಲಿ ಸತತ ಮೂರು ಪಂದ್ಯಗಳನ್ನು ಸೋತಿದೆ. ಹೀಗಾಗಿ ಹ್ಯಾಟ್ರಿಕ್ ಸೋಲಿನ ಸರಣಿಯನ್ನು ಮುರಿಯುವುದರ ಜೊತೆಗೆ ಗೆಲುವಿನೊಂದಿಗೆ ಏಕದಿನ ಸರಣಿಗೆ ಅಂತ್ಯ ಹಾಡುವ ಒತ್ತಡದಲ್ಲಿ ಭಾರತ ತಂಡವಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಪಂದ್ಯ ಅಕ್ಟೋಬರ್ 25 ರ ಶನಿವಾರ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಪಂದ್ಯ ಸಿಡ್ನಿಯ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಪಂದ್ಯ ಬೆಳಿಗ್ಗೆ 9:00 ಗಂಟೆಗೆ ಪ್ರಾರಂಭವಾಗುತ್ತದೆ. ಟಾಸ್ ಅರ್ಧ ಗಂಟೆ ಮೊದಲು, ಅಂದರೆ ಬೆಳಿಗ್ಗೆ 8:30 ಕ್ಕೆ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಪಂದ್ಯವನ್ನು ನೀವು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್​ ಹಾಗೂ ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ