Hardik Pandya: ಅಭ್ಯಾಸ ಪಂದ್ಯದಲ್ಲಿ ಒಂದು ಓವರ್ ಕೂಡ ಬೌಲಿಂಗ್ ಮಾಡದ ಹಾರ್ದಿಕ್ ಪಾಂಡ್ಯ: ರೋಹಿತ್ ಶರ್ಮಾ ಈ ಬಗ್ಗೆ ಏನಂದ್ರು?

Rohit Sharma: ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬದಲು ರೋಹಿತ್ ಶರ್ಮಾ ನಾಯಕತ್ವದ ಜವಾಬ್ಧಾರಿ ವಹಿಸಿಕೊಂಡರು. ಈ ಸಂದರ್ಭ ಮಾತನಾಡಿದ ಅವರು, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡುವ ನಿರೀಕ್ಷೆ ಇದೆ ಎಂದರು.

Hardik Pandya: ಅಭ್ಯಾಸ ಪಂದ್ಯದಲ್ಲಿ ಒಂದು ಓವರ್ ಕೂಡ ಬೌಲಿಂಗ್ ಮಾಡದ ಹಾರ್ದಿಕ್ ಪಾಂಡ್ಯ: ರೋಹಿತ್ ಶರ್ಮಾ ಈ ಬಗ್ಗೆ ಏನಂದ್ರು?
Rohit Sharma and Hardik Pandya
Follow us
TV9 Web
| Updated By: Vinay Bhat

Updated on: Oct 21, 2021 | 7:16 AM

ಐಸಿಸಿ ಟಿ20 ವಿಶ್ವಕಪ್​ನಲ್ಲಿ (ICC T20 World Cup) ಅಧಿಕೃತವಾಗಿ ಕಣಕ್ಕಿಳಿಯುವು ಮುನ್ನ ಭಾರತ (Team India) ತಂಡದ ಆಟಗಾರರು ಎರಡು ಅಭ್ಯಾಸ ಪಂದ್ಯವನ್ನು ಆಡಿದ್ದಾರೆ. ಇಂಗ್ಲೆಂಡ್ (England) ಹಾಗೂ ಆಸ್ಟ್ರೇಲಿಯಾ (Australia) ವಿರುದ್ಧದ ಎರಡೂ ಅಭ್ಯಾಸ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಬೊಂಬಾಟ್ ಪ್ರದರ್ಶನ ನೀಡಿ ಗೆದ್ದು ಬೀಗಿದೆ. ಈ ಮೂಲಕ ಪಾಕಿಸ್ತಾನ (India vs Pakistan) ವಿರುದ್ಧದ ಕದನಕ್ಕೆ ಸಜ್ಜಾಗಿದೆ. ಆದರೆ, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಬೌಲಿಂಗ್ ಮಾಡದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಇದಕ್ಕೆ ಭಾರತ ತಂಡದ ಉಪ ನಾಯಕ ರೋಹಿತ್ ಶರ್ಮಾ (Rohit Sharma) ಉತ್ತರ ನೀಡಿದ್ದಾರೆ. ಐಸಿಸಿ ಟಿ20 ವಿಶ್ವಕಪ್ ಅಭಿಯಾನ ಆರಂಭವಾದಾಗ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡುವ ನಿರೀಕ್ಷೆಯಿದೆ ಎಂದು ರೋಹಿತ್ ತಿಳಿಸಿದ್ದಾರೆ.

ಕುತೂಹಲಕಾರಿ ಸಂಗತಿಯೆಂದರೆ ಹಾರ್ದಿಕ್ ಪಾಂಡ್ಯ ಕಳೆದ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಸಣ್ಣ ಪ್ರಮಾಣದಲ್ಲಿ ಬೌಲಿಂಗ್ ನಡೆಸಿದ್ದರು. ಆದರೆ ಯುಎಇನಲ್ಲಿ ನಡೆದ ಐಪಿಎಲ್ ಎರಡನೇ ಚರಣದ ಪಂದ್ಯಗಳಲ್ಲಿ ಹಾರ್ದಿಕ್ ಒಂದು ಓವರ್ ಕೂಡ ಬೌಲಿಂಗ್ ಮಾಡಲಿಲ್ಲ. ಸಧ್ಯದ ಅಭ್ಯಾಸ ಪಂದ್ಯದಲ್ಲೂ ಹಾರ್ದಿಕ್​ ಬೌಲ್ ಮಾಡಲಿಲ್ಲ.

ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬದಲು ರೋಹಿತ್ ಶರ್ಮಾ ನಾಯಕತ್ವದ ಜವಾಬ್ಧಾರಿ ವಹಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡುವ ನಿರೀಕ್ಷೆ ಇದೆ. ನಮ್ಮ ತಂಡ ಗುಣಮಟ್ಟದ ಬೌಲರ್‌ಗಳನ್ನು ಹೊಂದಿದೆ. ಆದರೂ 6ನೇ ಬೌಲಿಂಗ್ ಆಯ್ಕೆಯ ಅಗತ್ಯವಿದೆ. ವಿಶ್ವಕಪ್ ಪಂದ್ಯಗಳು ಆರಂಭಗೊಂಡಾಗ ಬೌಲಿಂಗ್ ಆರಂಭಿಸಬಹುದು. ಸದ್ಯಕ್ಕೆ ಅವರಿನ್ನೂ ಬೌಲಿಂಗ್ ಆರಂಭಿಸಿಲ್ಲ” ಎಂದು ರೋಹಿತ್ ಹೇಳಿದರು.

“ಹಾರ್ದಿಕ್ ಪಾಂಡ್ಯ ಚೇತರಿಕೆ ಉತ್ತಮವಾಗಿದೆ. ಆದರೆ ಅವರು ಬೌಲಿಂಗ್ ನಡೆಸಲು ಇನ್ನು ಕೂಡ ಕೆಲ ಕಾಲ ತೆಗೆದುಕೊಳ್ಳುವ ಸಾಧ್ಯತೆಯಿದೆ. ಯಾಕೆಂದರೆ ಅವರು ಹೆಚ್ಚು ಬೌಲಿಂಗ್ ನಡೆಸಿಲ್ಲ. ಇಂತಾ ಟೂರ್ನಮೆಂಟ್‌ಗಳಲ್ಲಿ ನೀವು ಆಡುವಾಗ ಸಂಪೂರ್ಣವಾಗಿ ಫಿಟ್ ಆಗಿರಬೇಕಾಗುತ್ತದೆ. ನೂರು ಪ್ರತಿಶತಕ್ಕಿಂತಲೂ ಹೆಚ್ಚು ಸಶಕ್ತರಾಗಿರಬೇಕಾಗುತ್ತದೆ. ಅವರು ಈಗ ಅದನ್ನು ಸಾಧಿಸುವತ್ತ ಗಮನಹರಿಸಿದ್ದಾರೆ ” ಎಂದಿದ್ದಾರೆ ರೋಹಿತ್ ಶರ್ಮಾ.

ಬುಧವಾರ ಆಸ್ಟ್ರೇಲಿಯಾ ವಿರುದ್ಧ ನಡೆದ ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಿದರು. ಅಲ್ಲದೆ ನಾಯಕನ ಆಟವಾಡಿದ ಹಿಟ್‌ಮ್ಯಾನ್ (60 ರನ್, ನಿವೃತ್ತಿ), ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಟಿ20 ವಿಶ್ವಕಪ್‌ನಲ್ಲಿ ಭಾನುವಾರ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಸವಾಲನ್ನು ಎದುರಿಸಲಿದೆ.

T20 World Cup 2021: ಸಿಕ್ಸರ್ ಕಿಂಗ್ ದಾಖಲೆ ಮೇಲೆ ಹಿಟ್​ಮ್ಯಾನ್ ಕಣ್ಣು

T20 World Cup: ಅಭ್ಯಾಸ ಪಂದ್ಯದಲ್ಲಿ ಕಿವೀಸ್​ಗೆ ಸತತ ಎರಡನೇ ಸೋಲು; ಗೆದ್ದು ಸೋತ ಇಂಗ್ಲೆಂಡ್..!

(Rohit Sharma was quizzed about Hardik Pandya role in the Indian squad for the ICC World T20)

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ