ಭಾರತ ಕ್ರಿಕೆಟ್ ತಂಡ ಬಾಂಗ್ಲಾದೇಶದಲ್ಲಿ (India vs Bangladesh) ಬೀಡುಬಿಟ್ಟಿದ್ದು ಏಕದಿನ ಸರಣಿ ಆಡುತ್ತಿದೆ. ಢಾಕಾದ ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಸೋಲುಂಡ ಪರಿಣಾಮ ಟೀಮ್ ಇಂಡಿಯಾಕ್ಕೆ (Team India) ಮುಂದಿನ ಪಂದ್ಯ ಮುಖ್ಯವಾಗಿದೆ. ಬ್ಯಾಟರ್ಗಳ ಸಂಪೂರ್ಣ ವೈಫಲ್ಯದಿಂದ ಸೋತ ರೋಹಿತ್ ಪಡೆ ಮಾನ ಉಳಿಸಿಕೊಳ್ಳ ಬೇಕಾದರೆ ಉಳಿದಿರುವ ಎರಡೂ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಬಲಿಷ್ಠ ಬ್ಯಾಟಿಂಗ್ ಪಡೆ ಎಂದು ಹೇಳಿಕೊಳ್ಳುವ ರೋಹಿತ್ ಪಡೆ (Rohit Sharma) ಏಕದಿನ ಪಂದ್ಯದಲ್ಲಿ 200+ ರನ್ ಹೊಡೆಯಲು ಸಾಧ್ಯವಾಗಲಿಲ್ಲ. ಬೌಲರ್ಗಳ ಒಂದು ಹಂತದ ವರೆಗೆ ಮಾರಕ ದಾಳಿ ಸಂಘಟಿಸಿದರೂ ಅಂತಿಮ ಹಂತದಲ್ಲಿ ಫೀಲ್ಡಿಂಗ್ನಲ್ಲಿ ಮಾಡಿದ ಕೆಲ ಎಡವಿಟ್ಟು ತಂಡದ ಸೋಲಿನಲ್ಲಿ ಮುಖ್ಯ ಪಾತ್ರವಹಿಸಿತು. ಈ ಮೂಲಕ ಬಾಂಗ್ಲಾ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.
ಇದರ ನಡುವೆ ಇಂದು ಸಂಜೆ 4:30ಕ್ಕೆ ಢಾಕಾದಲ್ಲಿ ನಾಯಕ ರೋಹಿತ್ ಶರ್ಮಾ ಸುದ್ದಿ ಗೋಷ್ಠಿಯಲ್ಲಿ ಭಾಗಿಯಾಗಲಿದ್ದಾರೆ. ಡಿಸೆಂಬರ್ 7 ಬುಧವಾರದಂದು ನಡೆಯಲಿರುವ ದ್ವಿತೀಯ ಏಕದಿನದ ಬಗ್ಗೆ ಹಿಟ್ಮ್ಯಾನ್ ಕೆಲ ಮಹತ್ವದ ಹೇಳಿಕೆ ನೀಡುವ ಸಾಧ್ಯತೆ ಇದೆ. ಜೊತೆಗೆ ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಲಿದ್ದಾರೆ. ಮುಖ್ಯವಾಗಿ ಸ್ವತಃ ನಾಯಕನೇ ಕಳಪೆ ಫಾರ್ಮ್ನಲ್ಲಿರುವ ಬಗ್ಗೆ ಉತ್ತರ ನೀಡಬೇಕಿದೆ. ಜೊತೆಗೆ ಅಕ್ಷರ್ ಪಟೇಲ್, ಶಾರ್ದೂಲ್ ಥಾಕೂರ್ ಇಂಜುರಿ ಬಗ್ಗೆ ಸ್ಪಷ್ಟತೆ ದೊರೆಯುವ ಸಾಧ್ಯತೆ ಇದೆ.
IPL 2023: ಬೆನ್ ಸ್ಟೋಕ್ಸ್ರನ್ನು ಖರೀದಿಸಲಿರುವ ತಂಡ ಯಾವುದೆಂದು ತಿಳಿಸಿದ ಅಶ್ವಿನ್
ಭಾರತ ಹಾಗೂ ಬಾಂಗ್ಲಾದೇಶ ನಡುವಣ ದ್ವಿತೀಯ ಏಕದಿನ ಪಂದ್ಯ ಡಿಸೆಂಬರ್ 7 ಬುಧವಾರದಂದು ಢಾಕಾದ ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಮೊದಲ ಏಕದಿನ ಕೂಡ ಇಲ್ಲೇ ನಡೆದಿತ್ತು. ಈ ಪಂದ್ಯ ಬೆಳಗ್ಗೆ 11:30ಕ್ಕೆ ಆರಂಭವಾಗಲಿದ್ದು, ಟಾಸ್ 11 ಗಂಟೆಗೆ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸೋನಿ ಲೈವ್ ಅಪ್ಲಿಕೇಶನ್‌ನಲ್ಲಿ ನೋಡಬಹುದು. ಜಿಯೋ ಟಿವಿ ಆ್ಯಪ್ ಇದ್ದವೂ ಇದರ ಮೂಲಕ ಕೂಡ ಸೋನಿ ಸ್ಪೋರ್ಟ್ಸ್ ಚಾನೆಲ್ನಲ್ಲಿ ವೀಕ್ಷಿಸಬಹುದು.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಕೆ.ಎಲ್. ರಾಹುಲ್ (ಉಪ ನಾಯಕ, ವಿಕೆಟ್ ಕೀಪರ್), ಶಹ್ಬಾಜ್ ಅಹಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.
ಬಾಂಗ್ಲಾದೇಶ ತಂಡ: ಲಿಟ್ಟನ್ ದಾಸ್ (ನಾಯಕ), ಅನಾಮುಲ್ ಹಕ್ ಬಿಜೋಯ್, ಶಕಿಬ್ ಅಲ್ ಹಸನ್, ಮುಷ್ಫೀಕುರ್ ರಹೀಮ್, ಅಫೀಫ್ ಹುಸೇನ್, ಯಾಸಿರ್ ಅಲಿ, ಮೆಹಿದಿ ಹಸನ್ ಮಿರಾಜ್, ಮುಸ್ತಫಿಜುರ್ ರೆಹಮಾನ್, ಹಸನ್ ಮಹಮೂದ್, ಎಬಾಡೋತ್ ಹುಸೇನ್, ನಸ್ಮದ್, ನಸ್ಮದ್, ನಸ್ಮದ್ ಶಾಂತೋ, ನೂರುಲ್ ಹಸನ್ ಸೋಹನ್.
ಹೆಚ್ಚಿನ ಕ್ರೀಡಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.