Rohit Sharma: ಎರಡನೇ ಟೆಸ್ಟ್‌ಗೂ ಮುನ್ನ ರೋಹಿತ್ ಇಂಜುರಿ ಬಗ್ಗೆ ಸಿಕ್ತು ಬಿಗ್ ಅಪ್‌ಡೇಟ್..!
IND vs BAN: ಇದೀಗ ರೋಹಿತ್ ಇಂಜುರಿ ಬಗ್ಗೆ ಬಿಗ್ ಅಪ್ಡೇಟ್ ಹೊರಬಿದ್ದಿದ್ದು, ರೋಹಿತ್ ಎರಡನೇ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಲಭ್ಯರಿರಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಗಾಯದ ಸಮಸ್ಯೆಯಿಂದಾಗಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಬಾಂಗ್ಲಾದೇಶ (India and Bangladesh) ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಂಡಿಲ್ಲ. ವಾಸ್ತವವಾಗಿ, ಬಾಂಗ್ಲಾದೇಶ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ, ರೋಹಿತ್ ಅವರ ಹೆಬ್ಬೆರಳಿಗೆ ಗಾಯವಾಗಿತ್ತು. ಇದರಿಂದಾಗಿ ಅವರು ಸರಣಿಯ ಮೂರನೇ ಪಂದ್ಯವನ್ನು ಸಹ ಆಡಲು ಸಾಧ್ಯವಾಗಲಿಲ್ಲ. ಇಂಜುರಿ ಬಳಿಕ ಬಾಂಗ್ಲಾದಿಂದ ಮುಂಬೈಗೆ ವಾಪಸ್ಸಾಗಿದ್ದ ರೋಹಿತ್, ವೈದ್ಯರ ಸೂಚನೆಯಂತೆ ಚಿಕಿತ್ಸೆಯಲ್ಲಿದ್ದರು. ಹೀಗಾಗಿ ರೋಹಿತ್ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದು, ಅವರ ಸ್ಥಾನದಲ್ಲಿ ಕೆಎಲ್ ರಾಹುಲ್ (KL Rahul) ತಂಡವನ್ನು ಮುನ್ನಡೆಸುತ್ತಿದ್ದಾರೆ. ಈಗ ಮೊದಲ ಟೆಸ್ಟ್ನಿಂದ ಹೊರಗುಳಿದಿದ್ದ ರೋಹಿತ್ ಎರಡನೇ ಟೆಸ್ಟ್‌ಗೆ ಲಭ್ಯರಾಗುತ್ತಾರಾ ಎಂಬುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಇದೀಗ ರೋಹಿತ್ ಇಂಜುರಿ ಬಗ್ಗೆ ಬಿಗ್ ಅಪ್ಡೇಟ್ ಹೊರಬಿದ್ದಿದ್ದು, ರೋಹಿತ್ ಎರಡನೇ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಲಭ್ಯರಿರಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
2. ಎರಡನೇ ಟೆಸ್ಟ್‌ಗೆ ರೋಹಿತ್ ಲಭ್ಯ
ಬಾಂಗ್ಲಾ ಎದುರು ಏಕದಿನ ಸರಣಿಯನ್ನು ಕಳೆದುಕೊಂಡಿರುವ ಭಾರತ ತಂಡವು 2 ಟೆಸ್ಟ್ ಪಂದ್ಯಗಳ ಸರಣಿಯನ್ನು ವಶಪಡಿಸಿಕೊಳ್ಳಬೇಕಾಗಿದೆ. ಮೊದಲ ಟೆಸ್ಟ್‌ನಲ್ಲಿ ಭಾರತ ಪ್ರಾಬಲ್ಯ ಸಾಧಿಸಿದ್ದು, ಇಲ್ಲಿ ಗೆದ್ದು ಮಿರ್‌ಪುರದಲ್ಲಿ ಸರಣಿ ವಶಪಡಿಸಿಕೊಳ್ಳುವತ್ತ ಕಣ್ಣಿಟ್ಟಿದೆ. ಎರಡು ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಡಿಸೆಂಬರ್ 22 ರಿಂದ 26 ರವರೆಗೆ ನಡೆಯಲಿದೆ. ಏತನ್ಮಧ್ಯೆ, ರೋಹಿತ್ ಶರ್ಮಾ ಅವರ ಫಿಟ್ನೆಸ್ ಬಗ್ಗೆ ದೊಡ್ಡ ಅಪ್ಡೇಟ್ ಸಿಕ್ಕಿದ್ದು, ವರದಿ ಪ್ರಕಾರ, ರೋಹಿತ್ ಎರಡನೇ ಟೆಸ್ಟ್‌ಗೆ ಲಭ್ಯವಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಅಲ್ಲದೆ ಅವರು ಶುಕ್ರವಾರ ಅಥವಾ ಶನಿವಾರ ಬಾಂಗ್ಲಾದೇಶಕ್ಕೆ ತೆರಳಲಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಸ್ವತಃ ರೋಹಿತ್ ಅವರೇ ಟೀಮ್ ಮ್ಯಾನೇಜ್‌ಮೆಂಟ್‌ಗೆ ತಾನು ಫಿಟ್ ಆಗಿರುವುದಾಗಿ ಹಾಗೂ ಮೀರ್‌ಪುರ ಟೆಸ್ಟ್‌ಗೆ ಲಭ್ಯವಾಗುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.
Sachin Tendulkar: ‘ಅಪ್ಪ ನೆನಪಾದ್ರು’; ಮಗನ ಚೊಚ್ಚಲ ಶತಕದ ಬಗ್ಗೆ ಕ್ರಿಕೆಟ್ ದೇವರು ಹೇಳಿದ್ದೇನು ಗೊತ್ತಾ?
3. ರೋಹಿತ್ ಬದಲಿಗೆ ಓಪನಿಂಗ್ ಮಾಡಿದ್ದ ಕೊಹ್ಲಿ
ಬಾಂಗ್ಲಾದೇಶದ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರೋಹಿತ್ ಗಾಯಗೊಂಡರು. ಹೀಗಾಗಿ ರೋಹಿತ್ಗೆ ಶಿಖರ್ ಧವನ್ ಅವರೊಂದಿಗೆ ಓಪನಿಂಗ್ ಮಾಡಲು ಸಹ ಸಾಧ್ಯವಾಗಲಿಲ್ಲ. ರೋಹಿತ್ ಬದಲಿಗೆ ವಿರಾಟ್ ಕೊಹ್ಲಿ ಇನ್ನಿಂಗ್ಸ್ ಆರಂಭಿಸಬೇಕಾಯಿತು. ಆದರೆ ಧವನ್ ಮತ್ತು ಕೊಹ್ಲಿ ಜೋಡಿ ಆರಂಭಿಕರಾಗಿ ಫಲ ನೀಡಲಿಲ್ಲ. 272 ರನ್‌ಗಳ ಗುರಿಗೆ ಉತ್ತರವಾಗಿ ಭಾರತದ ಆರಂಭ ಅತ್ಯಂತ ಕಳಪೆಯಾಗಿತ್ತು.
4. ಗಾಯದ ನಡುವೆಯೂ ಬಿರುಸಿನ ಬ್ಯಾಟಿಂಗ್
ಆರಂಭಿಕ ವೈಫಲ್ಯದ ಬಳಿಕ ಶ್ರೇಯಸ್ ಅಯ್ಯರ್ ಮತ್ತು ಅಕ್ಷರ್ ಪಟೇಲ್ ಅರ್ಧಶತಕ ಬಾರಿಸುವ ಮೂಲಕ ಇನಿಂಗ್ಸ್ ನಿಭಾಯಿಸಲು ಪ್ರಯತ್ನಿಸಿದರು. ಆದರೆ ಇಬ್ಬರೂ ಔಟಾದ ನಂತರ ಭಾರತಕ್ಕೆ ಮತ್ತೆ ಸೋಲಿನ ಭೀತಿ ಎದುರಾಗಿತ್ತು. ಅಂತಹ ಪರಿಸ್ಥಿತಿಯಲ್ಲಿ, ರೋಹಿತ್ ಒಂಬತ್ತನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದು, 28 ಎಸೆತಗಳಲ್ಲಿ ಬಿರುಸಿನ 51 ರನ್ ಗಳಿಸಿ ಅಜೇಯರಾಗಿ ಉಳಿದರು. ಆದರೆ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಈ ಪಂದ್ಯದಲ್ಲಿ ಭಾರತ 5 ರನ್‌ಗಳ ಸೋಲನುಭವಿಸಿದ್ದು, ಅದರೊಂದಿಗೆ ಏಕದಿನ ಸರಣಿಯನ್ನೂ ಕಳೆದುಕೊಂಡಿತ್ತು.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:18 pm, Fri, 16 December 22