Rohit Sharma: ಟೀಮ್ ಇಂಡಿಯಾ ಗೆದ್ದರೆ ರೋಹಿತ್ ಶರ್ಮಾ ಹೆಸರಿಗೆ ಹೊಸ ದಾಖಲೆ
India vs Afghanistan: ಭಾರತ-ಅಫ್ಘಾನಿಸ್ತಾನ್ ನಡುವಣ ಟಿ20 ಸರಣಿಯಲ್ಲಿ ಒಟ್ಟು 3 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಯ ಮೊದಲ ಪಂದ್ಯಕ್ಕೆ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಕಿಂಗ್ ಕೊಹ್ಲಿ ಮೊಹಾಲಿಯಲ್ಲಿ ನಡೆಯಲಿರುವ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ.
Updated on:Jan 11, 2024 | 2:47 PM

ಭಾರತ ಮತ್ತು ಅಫ್ಘಾನಿಸ್ತಾನ್ (IND vs AFG) ನಡುವಣ ಟಿ20 ಸರಣಿ ಇಂದಿನಿಂದ (ಜ.11) ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಮೊಹಾಲಿಯಲ್ಲಿ ನಡೆಯಲಿದೆ. ಇನ್ನು 2ನೇ ಪಂದ್ಯಕ್ಕೆ ಇಂದೋರ್ ಆತಿಥ್ಯವಹಿಸಿದರೆ, 3ನೇ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜರುಗಲಿದೆ.

ಈ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ ರೋಹಿತ್ ಶರ್ಮಾ ಹೆಸರಿಗೆ ಹೊಸ ದಾಖಲೆ ಸೇರ್ಪಡೆಯಾಗಲಿದೆ. ಅದು ಕೂಡ ಮಹೇಂದ್ರ ಸಿಂಗ್ ಧೋನಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಮಹೇಂದ್ರ ಸಿಂಗ್ ಧೋನಿ ಭಾರತ ಟಿ20 ತಂಡದ ಅತ್ಯಂತ ಯಶಸ್ವಿ ನಾಯಕ. 71 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ ಧೋನಿ 41 ಬಾರಿ ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾಗಿದ್ದರು.

ಇದೀಗ ಈ ದಾಖಲೆ ಮುರಿಯುವ ಸನಿಹದಲ್ಲಿದ್ದಾರೆ ರೋಹಿತ್ ಶರ್ಮಾ. ಹಿಟ್ಮ್ಯಾನ್ ನಾಯಕತ್ವದಲ್ಲಿ ಭಾರತ ತಂಡವು 51 ಟಿ20 ಪಂದ್ಯಗಳನ್ನಾಡಲಿದೆ. ಈ ವೇಳೆ ಟೀಮ್ ಇಂಡಿಯಾ 39 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ.

ಅಫ್ಘಾನಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಸರಣಿ ಗೆದ್ದರೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು 42 ಪಂದ್ಯಗಳಲ್ಲಿ ಜಯ ಸಾಧಿಸಿದಂತಾಗಲಿದೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಧೋನಿಯನ್ನು (41) ಹಿಂದಿಕ್ಕಿ ರೋಹಿತ್ ಶರ್ಮಾ ಟೀಮ್ ಇಂಡಿಯಾದ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಳ್ಳಲಿದ್ದಾರೆ.

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಯಶಸ್ವಿ ಜೈಸ್ವಾಲ್ , ಶುಭ್ಮನ್ ಗಿಲ್ , ತಿಲಕ್ ವರ್ಮಾ , ರಿಂಕು ಸಿಂಗ್ , ಅಕ್ಷರ್ ಪಟೇಲ್ , ಅರ್ಷದೀಪ್ ಸಿಂಗ್ , ಅವೇಶ್ ಖಾನ್ , ಕುಲ್ದೀಪ್ ಯಾದವ್ , ಮುಕೇಶ್ ಕುಮಾರ್ , ಜಿತೇಶ್ ಶರ್ಮಾ , ಶಿವಂ ದುಬೆ, ವಾಷಿಂಗ್ಟನ್ ಸುಂದರ್, ವಿರಾಟ್ ಕೊಹ್ಲಿ (ಮೊದಲ ಪಂದ್ಯಕ್ಕೆ ಅಲಭ್ಯ).
Published On - 11:00 am, Thu, 11 January 24



















